IND vs AUS: ಆಸ್ಟ್ರೇಲಿಯಾ ತಂಡಕ್ಕೆ ಬಿಗ್ ಶಾಕ್: 3 ಆಟಗಾರರು ಟೀಮ್ನಿಂದ ಔಟ್..!
India vs Australia: ಮೊಣಕಾಲಿನ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಸ್ಟಾರ್ಕ್ ಮತ್ತಷ್ಟು ವಿಶ್ರಾಂತಿ ಬಯಸಿದ್ದಾರೆ. ಹೀಗಾಗಿ ಭಾರತದ ಪ್ರವಾಸ ಕೈಗೊಳ್ಳುತ್ತಿಲ್ಲ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ತಿಳಿಸಿದೆ.
ಟೀಮ್ ಇಂಡಿಯಾ (Team India) ವಿರುದ್ಧದ ಸರಣಿಗೂ ಮುನ್ನ ಆಸ್ಟ್ರೇಲಿಯಾ (Australia) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಮೂವರು ಆಟಗಾರರು ಗಾಯಗೊಂಡಿರುವುದು ಚಿಂತೆಯನ್ನು ಹೆಚ್ಚಿಸಿದೆ. ಏಕೆಂದರೆ ಆಸ್ಟ್ರೇಲಿಯಾ ತಂಡವು ಇದೇ ಸೆ.20 ರಿಂದ ಟೀಮ್ ಇಂಡಿಯಾ ವಿರುದ್ಧ ಟಿ20 ಸರಣಿ ಆಡಲಿದೆ. ಅಲ್ಲದೆ ಇದರ ಬೆನ್ನಲ್ಲೇ ಟಿ20 ವಿಶ್ವಕಪ್ ಆಡಬೇಕಿದೆ. ಆದರೆ ಅದಕ್ಕೂ ಮುನ್ನ ತಂಡದ ಪ್ರಮುಖ ವೇಗಿ ಮಿಚೆಲ್ ಸ್ಟಾರ್ಕ್ ಗಾಯಾಳುವಾಗಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಸರಣಿಯಿಂದ ಸ್ಟಾರ್ಕ್ ಹೊರಗುಳಿದಿದ್ದಾರೆ.
ಮಿಚೆಲ್ ಸ್ಟಾರ್ಕ್ ಹೊರತುಪಡಿಸಿ ಆಲ್ರೌಂಡರ್ಗಳಾದ ಮಿಚೆಲ್ ಮಾರ್ಷ್ ಹಾಗೂ ಮಾರ್ಕಸ್ ಸ್ಟೋಯಿನಿಸ್ ಕೂಡ ಗಾಯಗೊಂಡಿದ್ದಾರೆ. ಹೀಗಾಗಿ ಈ ಇಬ್ಬರು ಆಟಗಾರರು ಕೂಡ ಭಾರತದ ವಿರುದ್ಧದ ಟಿ20 ಸರಣಿಯಿಂದ ಹಿಂದೆ ಸರಿದಿದ್ದಾರೆ. ಮೊಣಕಾಲಿನ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಸ್ಟಾರ್ಕ್ ಮತ್ತಷ್ಟು ವಿಶ್ರಾಂತಿ ಬಯಸಿದ್ದಾರೆ. ಹೀಗಾಗಿ ಭಾರತದ ಪ್ರವಾಸ ಕೈಗೊಳ್ಳುತ್ತಿಲ್ಲ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ತಿಳಿಸಿದೆ.
ಇನ್ನು ಮಿಚೆಲ್ ಮಾರ್ಷ್ ಪಾದದ ಗಾಯಕ್ಕೆ ಒಳಗಾಗಿದ್ದಾರೆ. ಮತ್ತೊಂದೆಡೆ, ಸ್ಟೊಯಿನಿಸ್ ಮೊಣಕಾಲಿನ ಒತ್ತಡದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಈ ಮೂವರನ್ನು ಟೀಮ್ ಇಂಡಿಯಾ ವಿರುದ್ಧದ ಸರಣಿಯಿಂದ ಕೈ ಬಿಡಲಾಗಿದೆ. ಇನ್ನು ಇವರ ಬದಲಿ ಆಟಗಾರಾಗಿ ವೇಗದ ಬೌಲರ್ ನಾಥನ್ ಎಲ್ಲಿಸ್ ಹಾಗೂ ಆಲ್-ರೌಂಡರ್‌ಗಳಾದ ಡೇನಿಯಲ್ ಸ್ಯಾಮ್ಸ್ ಮತ್ತು ಸೀನ್ ಅಬಾಟ್ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಆಸ್ಟ್ರೇಲಿಯಾ ತಂಡ ಹೀಗಿದೆ: ಆರೋನ್ ಫಿಂಚ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕೇನ್ ರಿಚರ್ಡ್‌ಸನ್, ಡೇನಿಯಲ್ ಸ್ಯಾಮ್ಸ್, ಸ್ಟೀವ್ ಸ್ಮಿತ್, ಮ್ಯಾಥ್ಯೂ ವೇಡ್, ಆಡಮ್ ಝಂಪಾ.
ಟೀಮ್ ಇಂಡಿಯಾ ಹೀಗಿದೆ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್ ಮತ್ತು ಜಸ್ಪ್ರೀತ್ ಬುಮ್ರಾ.
ಭಾರತ-ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯ ವೇಳಾಪಟ್ಟಿ ಹೀಗಿದೆ:
- ಸೆಪ್ಟೆಂಬರ್ 20- ಮೊದಲ ಟಿ20 ಪಂದ್ಯ- ಮೊಹಾಲಿ
- ಸೆಪ್ಟೆಂಬರ್ 23- 2ನೇ ಟಿ20 ಪಂದ್ಯ- ನಾಗ್ಪುರ
- ಸೆಪ್ಟೆಂಬರ್ 25- 3ನೇ ಟಿ20 ಪಂದ್ಯ- ಹೈದರಾಬಾದ್
Published On - 1:59 pm, Wed, 14 September 22