AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಂತ ದಾಖಲೆ ಮುಂದೆ ಸೋತ ಮಿಚೆಲ್ ಸ್ಟಾರ್ಕ್​

Australia vs Bangladesh, 2nd Test: ಮಕೈನ ಗ್ರೇಟ್ ಬ್ಯಾರಿಯರ್ ರೀಫ್ ಅರೆನಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಮಿಚೆಲ್ ಸ್ಟಾರ್ಕ್​ ಅವರ ಮಿಂಚಿನ ದಾಳಿಗೆ ತತ್ತರಿಸಿದ ಬಾಂಗ್ಲಾದೇಶ್ ತಂಡ ಕೇವಲ 64 ರನ್​ಗಳಿಗೆ ಆಲೌಟ್ ಆಗಿದೆ.

ಸ್ವಂತ ದಾಖಲೆ ಮುಂದೆ ಸೋತ ಮಿಚೆಲ್ ಸ್ಟಾರ್ಕ್​
Mitchell StarcImage Credit source: Cricket Australia
ಝಾಹಿರ್ ಯೂಸುಫ್
|

Updated on: Aug 22, 2026 | 10:19 AM

Share

ಆಸ್ಟ್ರೇಲಿಯಾದ ಎಡಗೈ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಮತ್ತೊಮ್ಮೆ ಟೆಸ್ಟ್ ಕ್ರಿಕೆಟ್‌ನಲ್ಲಿ ಮಿಂಚಿನ ಬೌಲಿಂಗ್ ಪ್ರದರ್ಶಿಸಿದ್ದಾರೆ. ಬಾಂಗ್ಲಾದೇಶ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಕೇವಲ 22 ಎಸೆತಗಳಲ್ಲಿ (3.4 ಓವರ್‌) 5 ವಿಕೆಟ್ ಕಬಳಿಸುವ ಮೂಲಕ ಸ್ಟಾರ್ಕ್​​ ಇಡೀ ಕ್ರಿಕೆಟ್ ಲೋಕವನ್ನೇ ಬೆರಗುಗೊಳಿಸಿದ್ದಾರೆ. ಆದರೆ, ಈ ಅದ್ಭುತ ಪ್ರದರ್ಶನ ಹೊರತಾಗಿಯೂ ಹೊಸ ವಿಶ್ವ ದಾಖಲೆ ಬರೆಯಲು ಸಾಧ್ಯವಾಗಿಲ್ಲ ಎಂಬುದು ವಿಶೇಷ.

ಸ್ವಂತ ದಾಖಲೆ ಮುಂದೆ ಸೋತ ಸ್ಟಾರ್ಕ್:

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗವಾಗಿ 5 ವಿಕೆಟ್ ಪಡೆದ ವಿಶ್ವ ದಾಖಲೆ ಸ್ವತಃ ಮಿಚೆಲ್ ಸ್ಟಾರ್ಕ್ ಅವರ ಹೆಸರಲ್ಲೇ ಭದ್ರವಾಗಿದೆ. ಅವರು ಕಳೆದ ವರ್ಷ (2025) ವೆಸ್ಟ್ ಇಂಡೀಸ್ ವಿರುದ್ಧ ಕೇವಲ 15 ಎಸೆತಗಳಲ್ಲಿ 5 ವಿಕೆಟ್ ಕಿತ್ತು ಈ ಐತಿಹಾಸಿಕ ವಿಶ್ವ ದಾಖಲೆ ನಿರ್ಮಿಸಿದ್ದರು.

ಈ  ದಾಖಲೆಯನ್ನು ಮುರಿಯಲು ಇಂದಿನ ಪಂದ್ಯದಲ್ಲಿ ಅವರಿಗೆ ಕೇವಲ 7 ಎಸೆತಗಳ ಅಂತರ ಕೈಕೊಟ್ಟಿತು. ಬಾಂಗ್ಲಾದೇಶ್ ವಿರುದ್ಧ ಸ್ಟಾರ್ಕ್  ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸಿದರೂ ಐದು ವಿಕೆಟ್​ಗಳ ಗುಚ್ಛ ಪೂರ್ಣಗೊಳಿಸಲು 22 ಎಸೆತಗಳನ್ನು ತೆಗೆದುಕೊಂಡರು. ಈ ಮೂಲಕ ಟೆಸ್ಟ್ ಇತಿಹಾಸದಲ್ಲಿ ಅತ್ಯಂತ ವೇಗವಾಗಿ 5 ವಿಕೆಟ್​ ಪಡೆದ ಬೌಲರ್​ಗಳ ಪಟ್ಟಿಯಲ್ಲಿ 6ನೇ ಸ್ಥಾನವನ್ನು ತಮ್ಮದಾಗಿಸಿಕೊಂಡರು.

ಟೆಸ್ಟ್ ಇತಿಹಾಸದ ಅತ್ಯಂತ ವೇಗದ 5 ವಿಕೆಟ್ ಸಾಧನೆಗಳು:

ಎಸೆತಗಳು ಬೌಲರ್  ಎದುರಾಳಿ ತಂಡ ವರ್ಷ
15 ಎಸೆತಗಳು ಮಿಚೆಲ್ ಸ್ಟಾರ್ಕ್ (ಆಸ್ಟ್ರೇಲಿಯಾ) ವೆಸ್ಟ್ ಇಂಡೀಸ್ 2025
19 ಎಸೆತಗಳು ಅರ್ನಿ ತೋಷಾಕ್ (ಆಸ್ಟ್ರೇಲಿಯಾ) ಭಾರತ 1947
19 ಎಸೆತಗಳು ಸ್ಟುವರ್ಟ್ ಬ್ರಾಡ್ (ಇಂಗ್ಲೆಂಡ್) ಆಸ್ಟ್ರೇಲಿಯಾ 2015
19 ಎಸೆತಗಳು ಸ್ಕಾಟ್ ಬೋಲ್ಯಾಂಡ್ (ಆಸ್ಟ್ರೇಲಿಯಾ) ಇಂಗ್ಲೆಂಡ್ 2021
21 ಎಸೆತಗಳು ಶೇನ್ ವಾಟ್ಸನ್ (ಆಸ್ಟ್ರೇಲಿಯಾ) ಸೌತ್ ಆಫ್ರಿಕಾ 2011
22 ಎಸೆತಗಳು ಮಿಚೆಲ್ ಸ್ಟಾರ್ಕ್ (ಆಸ್ಟ್ರೇಲಿಯಾ) ಬಾಂಗ್ಲಾದೇಶ್ 2026

ಇದನ್ನೂ ಓದಿ: WTC ಫೈನಲ್​ಗೇರಲು ಪಾಕಿಸ್ತಾನ್ ತಂಡಕ್ಕೆ ಇದೆಯೇ ಅವಕಾಶ? ಇಲ್ಲಿದೆ ಲೆಕ್ಕಾಚಾರ!

ಡೇಲ್ ಸ್ಟೇನ್ ದಾಖಲೆ ಧೂಳೀಪಟ:

ಬಾಂಗ್ಲಾದೇಶ್ ವಿರುದ್ಧದ ಈ ಪಂದ್ಯದಲ್ಲಿ 10 ಓವರ್​ಗಳನ್ನು ಎಸೆದ ಮಿಚೆಲ್ ಸ್ಟಾರ್ಕ್​ ಕೇವಲ 12 ರನ್ ನೀಡಿ 6 ವಿಕೆಟ್ ಕಬಳಿಸಿದರು. ಈ ಆರು ವಿಕೆಟ್​ಗಳೊಂದಿಗೆ ಟೆಸ್ಟ್‌ನಲ್ಲಿ ತಮ್ಮ ಒಟ್ಟು ವಿಕೆಟ್‌ಗಳ ಸಂಖ್ಯೆಯನ್ನು 440ಕ್ಕೆ ಏರಿಸಿದ್ದಾರೆ. ಈ ಮೂಲಕ ಸೌತ್ ಆಫ್ರಿಕಾದ ದಂತಕಥೆ ಡೇಲ್ ಸ್ಟೇನ್ (439 ವಿಕೆಟ್) ಅವರ ಸಾರ್ವಕಾಲಿಕ ವಿಕೆಟ್ ದಾಖಲೆಯನ್ನು ಹಿಂದಿಕ್ಕಿ ಇತಿಹಾಸ ನಿರ್ಮಿಸಿದ್ದಾರೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್