Mithali Raj: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್

| Updated By: ಝಾಹಿರ್ ಯೂಸುಫ್

Updated on: Jun 08, 2022 | 3:14 PM

ಟೀಮ್ ಇಂಡಿಯಾದ ಮಾಜಿ ನಾಯಕಿ ಮಿಥಾಲಿ ರಾಜ್ (Mithali Raj) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಟೀಮ್ ಇಂಡಿಯಾ ಪರ ಸುಮಾರು 23 ವರ್ಷಗಳ ಕಾಲ ಕ್ರಿಕೆಟ್​ ಆಡಿದ್ದ ಮಿಥಾಲಿ ಹಲವು ವಿಶ್ವ ದಾಖಲೆಗಳನ್ನು ನಿರ್ಮಿಸಿದ್ದರು. ಭಾರತದ ಪರ 232 ಏಕದಿನ ಪಂದ್ಯಗಳನ್ನು ಆಡಿರುವ ಮಿಥಾಲಿ ರಾಜ್ 50.68 ಸರಾಸರಿಯಲ್ಲಿ 7805 ರನ್ ಗಳಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಮಹಿಳಾ ಆಟಗಾರ್ತಿ ಎಂಬ ದಾಖಲೆಯನ್ನು ಬರೆದಿದ್ದಾರೆ. 1999 ರಲ್ಲಿ ಐರ್ಲೆಂಡ್ ವಿರುದ್ಧದ ಏಕದಿನ […]

Mithali Raj: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್
Mithali Raj
Follow us on

ಟೀಮ್ ಇಂಡಿಯಾದ ಮಾಜಿ ನಾಯಕಿ ಮಿಥಾಲಿ ರಾಜ್ (Mithali Raj) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಟೀಮ್ ಇಂಡಿಯಾ ಪರ ಸುಮಾರು 23 ವರ್ಷಗಳ ಕಾಲ ಕ್ರಿಕೆಟ್​ ಆಡಿದ್ದ ಮಿಥಾಲಿ ಹಲವು ವಿಶ್ವ ದಾಖಲೆಗಳನ್ನು ನಿರ್ಮಿಸಿದ್ದರು.
ಭಾರತದ ಪರ 232 ಏಕದಿನ ಪಂದ್ಯಗಳನ್ನು ಆಡಿರುವ ಮಿಥಾಲಿ ರಾಜ್ 50.68 ಸರಾಸರಿಯಲ್ಲಿ 7805 ರನ್ ಗಳಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಮಹಿಳಾ ಆಟಗಾರ್ತಿ ಎಂಬ ದಾಖಲೆಯನ್ನು ಬರೆದಿದ್ದಾರೆ. 1999 ರಲ್ಲಿ ಐರ್ಲೆಂಡ್ ವಿರುದ್ಧದ ಏಕದಿನ ಪಂದ್ಯದ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದ ಮಿಥಾಲಿ, ಆ ಬಳಿಕ ಭಾರತ ತಂಡದ ನಾಯಕಿಯಾಗಿ ಆಯ್ಕೆಯಾಗಿದ್ದರು. ಅಲ್ಲದೆ ಇವರ ನಾಯಕತ್ವದಲ್ಲಿ ಭಾರತವು 2005 ಹಾಗೂ 2017 ರ ಐಸಿಸಿ ಮಹಿಳಾ ವಿಶ್ವಕಪ್‌ನ ಫೈನಲ್‌ಗೆ ತಲುಪಿತ್ತು ಎಂಬುದು ವಿಶೇಷ.

ಮಿಥಾಲಿ ರಾಜ್ ಎರಡು ದಶಕಗಳಿಗೂ ಹೆಚ್ಚು ಕಾಲ ತಮ್ಮ ಕ್ರಿಕೆಟ್ ವೃತ್ತಿಜೀವನವನ್ನು ಸಂಪೂರ್ಣವಾಗಿ ಆಳಿದರು. ನಾಯಕಿಯಾಗಿ ಅತಿ ಹೆಚ್ಚು ಗೆಲುವು ಸಾಧಿಸಿದ ಕೀರ್ತಿಯೂ ಅವರದ್ದು. ಇದೀಗ ತಮ್ಮ 39 ವರ್ಷದ ಮಿಥಾಲಿ ರಾಜ್ ಟ್ವಿಟರ್‌ನಲ್ಲಿ ಸುದೀರ್ಘ ಸಂದೇಶ ಬರೆದು ತಮ್ಮ ನಿವೃತ್ತಿ ಘೋಷಿಸಿದ್ದಾರೆ.

ನಾನು ನೀಲಿ ಜರ್ಸಿ ಧರಿಸಿ ನನ್ನ ದೇಶವನ್ನು ಪ್ರತಿನಿಧಿಸಿದಾಗ ಚಿಕ್ಕ ಮಗು ಎಂದು ಮಿಥಾಲಿ ತಮ್ಮ ಸಂದೇಶದಲ್ಲಿ ಬರೆದಿದ್ದಾರೆ. ಈ ಪ್ರಯಾಣವು ಎಲ್ಲಾ ರೀತಿಯ ಕ್ಷಣಗಳನ್ನು ನೋಡುವಷ್ಟು ದೀರ್ಘವಾಗಿತ್ತು, ಕಳೆದ 23 ವರ್ಷಗಳು ನನ್ನ ಜೀವನದ ಅತ್ಯುತ್ತಮ ಕ್ಷಣಗಳಲ್ಲಿ ಒಂದಾಗಿದೆ. ಪ್ರತಿ ಪ್ರಯಾಣದಂತೆ, ಈ ಪ್ರಯಾಣವು ಕೊನೆಗೊಳ್ಳುತ್ತಿದೆ ಮತ್ತು ಇಂದು ನಾನು ಎಲ್ಲಾ ರೀತಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ
India vs South Africa T20: ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ ಪ್ರಕಟ
Ashish Nehra: ಎಳನೀರು, ಪೆನ್ನು ಪೇಪರ್​ನಲ್ಲೇ 9 ತಂಡಗಳನ್ನ ಮುಗಿಸಿಬಿಟ್ರು..!
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

ನಾನು ಮೈದಾನಕ್ಕೆ ಕಾಲಿಟ್ಟಾಗಲೆಲ್ಲಾ ನನ್ನ ಕೈಲಾದಷ್ಟು ಪ್ರಯತ್ನಿಸಿದ್ದೇನೆ. ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಗಮನ ಹರಿಸಿದ್ದೇನೆ. ನನ್ನ ವೃತ್ತಿಜೀವನಕ್ಕೆ ವಿದಾಯ ಹೇಳಲು ಇದು ಸರಿಯಾದ ಸಮಯ ಎಂದು ನಾನು ಭಾವಿಸುತ್ತೇನೆ. ಭಾರತದ ಭವಿಷ್ಯವು ಯುವ ಆಟಗಾರ್ತಿಯರ ಕೈಯಲ್ಲಿದೆ. ನಾನು ಬಿಸಿಸಿಐ, ಕಾರ್ಯದರ್ಶಿ ಜಯ್ ಶಾ ಮತ್ತು ಇತರ ಎಲ್ಲ ಅಧಿಕಾರಿಗಳಿಗೆ ಧನ್ಯವಾದ ಹೇಳುತ್ತೇನೆ.

ಹಲವು ವರ್ಷಗಳ ಕಾಲ ತಂಡದ ನಾಯಕಿಯಾಗಿರುವುದು ನನಗೆ ಹೆಮ್ಮೆಯ ವಿಷಯ. ಇದು ಒಬ್ಬ ವ್ಯಕ್ತಿಯಾಗಿ ನನ್ನನ್ನು ಉತ್ತಮಗೊಳಿಸಿದೆ, ಜೊತೆಗೆ ಮಹಿಳಾ ಕ್ರಿಕೆಟ್ ಅನ್ನು ಮುನ್ನಡೆಸಿದ್ದೇನೆ. ಈ ಪಯಣ ಇಲ್ಲಿಗೆ ಕೊನೆಗೊಳ್ಳುತ್ತಿದೆಯಾದರೂ, ನಾನು ಯಾವುದಾದರೂ ರೂಪದಲ್ಲಿ ಕ್ರಿಕೆಟ್‌ನೊಂದಿಗೆ ಸಂಬಂಧ ಹೊಂದಲಿದ್ದೇನೆ ಎಂದು ತಿಳಿಸಿದ್ದಾರೆ.

ಮಿಥಾಲಿ ರಾಜ್ ಅವರು ಭಾರತದಲ್ಲಿ ಮಾತ್ರವಲ್ಲದೆ ಪ್ರಸ್ತುತ ವಿಶ್ವದ ಅತ್ಯುತ್ತಮ ಮಹಿಳಾ ಕ್ರಿಕೆಟಿಗರಲ್ಲಿ ಒಬ್ಬರು. ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ. ಜೊತೆಗೆ ದೀರ್ಘಕಾಲದವರೆಗೆ ಭಾರತಕ್ಕೆ ನಾಯಕತ್ವದ ದಾಖಲೆಯನ್ನು ಮಿಥಾಲಿ ರಾಜ್ ಹೆಸರಿನಲ್ಲಿದೆ.

ಏಕದಿನ ಕ್ರಿಕೆಟ್​ನಲ್ಲಿ 232 ಪಂದ್ಯಗಳಿಂದ 7805 ರನ್ ಗಳಿಸಿರುವ ಮಿಥಾಲಿ ರಾಜ್ 7 ಶತಕ ಮತ್ತು 64 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇನ್ನು ತನ್ನ 23 ವರ್ಷಗಳ ವೃತ್ತಿಜೀವನದಲ್ಲಿ ಕೇವಲ 12 ಟೆಸ್ಟ್ ಪಂದ್ಯಗಳನ್ನು ಆಡಿರುವ ಅವರು, ದ್ವಿಶತಕ (214 ರನ್) ಸೇರಿದಂತೆ 43.68 ಸರಾಸರಿಯಲ್ಲಿ 699 ರನ್ ಗಳಿಸಿದ್ದಾರೆ. ಹಾಗೆಯೇ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 89 ಪಂದ್ಯಗಳಲ್ಲಿ 2364 ರನ್ ಗಳಿಸಿದ್ದಾರೆ. ಈ ವೇಳೆ 17 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಇನ್ನು ನಾಯಕಿಯಾಗಿ ಮಿಥಾಲಿ ರಾಜ್ ಅತಿ ಹೆಚ್ಚು ಗೆಲುವು ಸಾಧಿಸಿದ ದಾಖಲೆ ಹೊಂದಿದ್ದಾರೆ. 155 ಏಕದಿನ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿ ಭಾರತ ತಂಡಕ್ಕೆ 89 ಗೆಲುವು ತಂದುಕೊಟ್ಟಿದ್ದರು. ಅಷ್ಟೇ ಅಲ್ಲದೆ 150ಕ್ಕೂ ಹೆಚ್ಚು ಏಕದಿನ ಪಂದ್ಯಗಳಿಗೆ ನಾಯಕಿಯಾದ ವಿಶ್ವದ ಏಕೈಕ ಆಟಗಾರ್ತಿ ಎಂಬ ದಾಖಲೆ ಕೂಡ ಮಿಥಾಲಿ ರಾಜ್ ಹೆಸರಿನಲ್ಲಿದೆ.

ನಾಯಕಿಯಾಗಿ ದಾಖಲೆ:

  1. – ಮಿಥಾಲಿ ರಾಜ್ (ಭಾರತ) – ಒಟ್ಟು ಪಂದ್ಯಗಳು- 155, ಗೆಲುವು-89, ಸೋಲು-63
  2. -ಸಿ. ಎಡ್ವರ್ಡ್ಸ್ (ಇಂಗ್ಲೆಂಡ್) – ಒಟ್ಟು ಪಂದ್ಯಗಳು-117, ಗೆಲುವು- 72, ಸೋಲು- 38
  3. ಬಿ. ಕ್ಲಾರ್ಕ್ (ಆಸ್ಟ್ರೇಲಿಯಾ) – 101 ಪಂದ್ಯಗಳು, ಗೆಲುವು- 83, ಸೋಲು- 17

ಬ್ಯಾಟಿಂಗ್ ದಾಖಲೆ:

  1. ಮಿಥಾಲಿ ರಾಜ್ – 232 ಪಂದ್ಯಗಳು- 7805 ರನ್
  2. ಸಿ. ಎಡ್ವರ್ಡ್ಸ್ (ಇಂಗ್ಲೆಂಡ್) – 191 ಪಂದ್ಯಗಳು- 5992 ರನ್
  3. ಸಾರಾ ಟೇಲರ್ (ವೆಸ್ಟ್ ಇಂಡೀಸ್) – 145 ಪಂದ್ಯಗಳು- 5298 ರನ್

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:48 pm, Wed, 8 June 22