ICC ODI rankings: ಐಸಿಸಿ ಏಕದಿನ ರ‍್ಯಾಂಕಿಂಗ್ ಪಟ್ಟಿ ಪ್ರಕಟ: ಟೀಮ್ ಇಂಡಿಯಾ ಆಟಗಾರ್ತಿ ನಂಬರ್ 1
ಟಾಪ್ 10 ಬೌಲರ್‌ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಜುಲಾನ್ ಗೋಸ್ವಾಮಿ 5ನೇ ಸ್ಥಾನ ಅಲಂಕರಿಸಿದ್ದಾರೆ. ಹಾಗೆಯೇ ಆಲ್ ರೌಂಡರ್ ರ್ಯಾಂಕಿಂಗ್‌ನಲ್ಲಿ ದೀಪ್ತಿ ಶರ್ಮಾ 10 ನೇ ಸ್ಥಾನದಲ್ಲಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮಹಿಳಾ ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದೆ. ಹೊಸ ಶ್ರೇಯಾಂಕ ಪಟ್ಟಿಯಲ್ಲಿ ಭಾರತ ತಂಡ ನಾಯಕಿ ಮಿಥಾಲಿ ರಾಜ್ ಅಗ್ರಸ್ಥಾನ ಅಲಂಕರಿಸಿದ್ದಾರೆ. 762 ಅಂಕಗಳೊಂದಿಗೆ ಈ ಬಾರಿ ಕೂಡ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಮಿಥಾಲಿ ಯಶಸ್ವಿಯಾಗಿದ್ದಾರೆ. ಇನ್ನು ಟೀಮ್ ಇಂಡಿಯಾ ಎಡಗೈ ಬ್ಯಾಟರ್ ಸ್ಮೃತಿ ಮಂದನಾ ಕೂಡ ಟಾಪ್ 10ನಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ. ಇಂಗ್ಲೆಂಡ್ ವಿರುದ್ದದ ಸರಣಿಯಲ್ಲಿ ಮಿಂಚಿದ್ದ ಸ್ಮೃತಿ ಈ ಬಾರಿ ಒಂಬತ್ತನೇ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಟೀಮ್ ಇಂಡಿಯಾ ಏಕದಿನ ತಂಡವನ್ನು ಮುನ್ನಡೆಸುತ್ತಿರುವ ಮಿಥಾಲಿ ರಾಜ್, 9ನೇ ಬಾರಿಗೆ ನಂಬರ್ ಒನ್ ಸ್ಥಾನ ಅಲಂಕರಿಸುತ್ತಿದ್ದು, ಈ ಮೂಲಕ ಅತೀ ಹೆಚ್ಚು ಬಾರಿ ಅಗ್ರಸ್ಥಾನ ಪಡೆದ ಭಾರತೀಯ ಆಟಗಾರ್ತಿ ಎಂಬ ದಾಖಲೆ ಬರೆದಿದ್ದಾರೆ. ಇನ್ನು ಹಿಂದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದ ವೆಸ್ಟ್ ಇಂಡೀಸ್ ನಾಯಕಿ ಸ್ಟೆಫನಿ ಟೇಲರ್ ಐದನೇ ಸ್ಥಾನಕ್ಕೆ ಕುಸಿದಿದ್ದಾರೆ.
ಟಾಪ್ 10 ಬೌಲರ್‌ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಜುಲಾನ್ ಗೋಸ್ವಾಮಿ 5ನೇ ಸ್ಥಾನ ಅಲಂಕರಿಸಿದ್ದಾರೆ. ಹಾಗೆಯೇ ಆಲ್ ರೌಂಡರ್ ರ್ಯಾಂಕಿಂಗ್‌ನಲ್ಲಿ ದೀಪ್ತಿ ಶರ್ಮಾ 10 ನೇ ಸ್ಥಾನದಲ್ಲಿದ್ದಾರೆ. ಮಹಿಳಾ ಟಿ20 ಇಂಟರ್ನ್ಯಾಷನಲ್ ಪ್ಲೇಯರ್ ಶ್ರೇಯಾಂಕದಲ್ಲಿ, ಭಾರತದ ಓಪನರ್ ಸ್ಮೃತಿ ಮಂಧಾನಾ ಮೂರನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೂರನೇ ಮತ್ತು ಅಂತಿಮ ಟಿ20 ಯಲ್ಲಿ ಅವರು 70 ರನ್ ಗಳಿಸುವ ಮೂಲಕ ಮತ್ತೊಮ್ಮೆ ಸ್ಮೃತಿ ಶ್ರೇಯಾಂಕ ಪಟ್ಟಿಯಲ್ಲಿ ಮೇಲೇರಿದ್ದಾರೆ.
ಇದನ್ನೂ ಓದಿ: ಇದಪ್ಪಾ ಸೇಡು ಅಂದ್ರೆ!; ಶ್ರೀಲಂಕಾ ವಿರುದ್ದ ಭಾರತ ಸೋತು ಎಷ್ಟು ವರ್ಷಗಳಾಗಿವೆ ಗೊತ್ತಾ..?
ಇದನ್ನೂ ಓದಿ: ಕೃನಾಲ್ ಪಾಂಡ್ಯ ವರ್ತನೆಯಲ್ಲಿ ಸಖತ್ ಬದಲಾವಣೆ! ಇದು ರಾಹುಲ್ ದ್ರಾವಿಡ್ ಎಫೆಕ್ಟ್ ಎಂದ ನೆಟ್ಟಿಗರು; ವಿಡಿಯೋ