AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MLC 2024: ಮತ್ತೆ ಅಬ್ಬರಿಸಿದ ಫಾಫ್ ಡುಪ್ಲೆಸಿಸ್: TSK ತಂಡಕ್ಕೆ ಜಯ

Faf du Plessis: ಮೇಜರ್ ಲೀಗ್ ಕ್ರಿಕೆಟ್​ ಟೂರ್ನಿಯ 5ನೇ ಪಂದ್ಯದಲ್ಲಿ ಫಾಫ್ ಡುಪ್ಲೆಸಿಸ್ (Faf du Plessis) ಭರ್ಜರಿ ಶತಕ ಸಿಡಿಸಿದ್ದರು. ಮೊರಿಸ್ವಿಲ್ಲೆಯ ಚರ್ಚ್ ಸ್ಟ್ರೀಟ್ ಪಾರ್ಕ್ ಮೈದಾನದಲ್ಲಿ ನಡೆದ ವಾಷಿಂಗ್ಟನ್ ಫ್ರೀಡಮ್ ವಿರುದ್ಧದ ಪಂದ್ಯದಲ್ಲಿ ಡುಪ್ಲೆಸಿಸ್ 56 ಎಸೆತಗಳಲ್ಲಿ ಸೆಂಚುರಿ ಪೂರೈಸಿ ಮಿಂಚಿದ್ದರು. ಇದೀಗ ಅರ್ಧಶತಕ ಬಾರಿಸುವ ಮೂಲಕ ಅಬ್ಬರಿಸಿದ್ದಾರೆ.

MLC 2024: ಮತ್ತೆ ಅಬ್ಬರಿಸಿದ ಫಾಫ್ ಡುಪ್ಲೆಸಿಸ್: TSK ತಂಡಕ್ಕೆ ಜಯ
Faf du Plessis
ಝಾಹಿರ್ ಯೂಸುಫ್
|

Updated on: Jul 15, 2024 | 1:10 PM

Share

ಅಮೆರಿಕಯದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ (MLC 2024) ಟೂರ್ನಿಯ 12ನೇ ಪಂದ್ಯದಲ್ಲಿ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡ ಜಯಭೇರಿ ಬಾರಿಸಿದೆ. ಡಲ್ಲಾಸ್​ನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ನ್ಯೂಯಾರ್ಕ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡಕ್ಕೆ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ಡೆವೊನ್ ಕಾನ್ವೆ ಉತ್ತಮ ಆರಂಭ ಒದಗಿಸಿದ್ದರು. ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಈ ಜೋಡಿ ಮೊದಲ ವಿಕೆಟ್​ಗೆ 85 ರನ್​​ಗಳ ಜೊತೆಯಾಟವಾಡಿದರು. ವಿಶೇಷ ಎಂದರೆ ಈ 85 ರನ್​ಗಳಲ್ಲಿ ಕಾನ್ವೆ ಕಲೆಹಾಕಿದ್ದು ಕೇವಲ 14 ರನ್​ಗಳು ಮಾತ್ರ.

ಅಂದರೆ 38 ಎಸೆತಗಳನ್ನು ಎದುರಿಸಿದ ಫಾಫ್ ಡುಪ್ಲೆಸಿಸ್ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 61 ರನ್ ಬಾರಿಸಿದ್ದರು. ಇನ್ನು ಡುಪ್ಲೆಸಿಸ್ ಔಟಾದ ಬಳಿಕ ಬಂದ ಆರೋನ್ ಹಾರ್ಡಿ 22 ರನ್​ಗಳ ಕೊಡುಗಡೆ ನೀಡಿದರೆ, ಮಾರ್ಕಸ್ ಸ್ಟೋಯಿನಿಸ್ 24 ರನ್ ಬಾರಿಸಿದರು. ಇನ್ನು ಆರಂಭಿಕ ಆಟಗಾರ ಡೆವೊನ್ ಕಾನ್ವೆ 40 ರನ್ ಸಿಡಿಸಿದರು. ಈ ಮೂಲಕ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿತು.

177 ರನ್​ಗಳ ಗುರಿ ಬೆನ್ನತ್ತಿದ ಎಂಐ ನ್ಯೂಯಾರ್ಕ್​ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ರೂಬೆನ್ ಕ್ಲಿಂಟನ್ (7) ಹಾಗೂ ಸ್ಟೀವನ್ ಟೇಲರ್ (18) ಬೇಗನೆ ನಿರ್ಗಮಿಸಿದರೆ, ಆ ಬಳಿಕ ಬಂದ ನಿಕೋಲಸ್ ಪೂರನ್ 1 ರನ್​ಗಳಿಸಿ ಔಟಾದರು.

ಇನ್ನು ನಾಯಕ ಕೀರನ್ ಪೊಲಾರ್ಡ್ 5 ರನ್​ಗಳಿಸಲಷ್ಟೇ ಶಕ್ತರಾದರು. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಮೊನಾಂಕ್ ಪಟೇಲ್ 45 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 61 ರನ್ ಬಾರಿಸಿದರು.

ಅಂತಿಮ ಓವರ್​ಗಳಲ್ಲಿ ಅಬ್ಬರಿಸಿದ ರಶೀದ್ ಖಾನ್ 23 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 50 ರನ್ ಸಿಡಿಸಿದರು. ಇದಾಗ್ಯೂ ಎಂಐ ನ್ಯೂಯಾರ್ಕ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 167 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡವು 15 ರನ್​ಗಳ ಜಯ ಸಾಧಿಸಿತು.

ಟೆಕ್ಸಾಸ್ ಸೂಪರ್ ಕಿಂಗ್ಸ್ ಪ್ಲೇಯಿಂಗ್ 11: ಡೆವೊನ್ ಕಾನ್ವೇ (ವಿಕೆಟ್ ಕೀಪರ್) , ಫಾಫ್ ಡು ಪ್ಲೆಸಿಸ್ (ನಾಯಕ) , ಆರೋನ್ ಹಾರ್ಡಿ , ಜೋಶುವಾ ಟ್ರಾಂಪ್ , ಮಿಲಿಂದ್ ಕುಮಾರ್ , ಮಾರ್ಕಸ್ ಸ್ಟೊಯಿನಿಸ್ , ಕ್ಯಾಲ್ವಿನ್ ಸಾವೇಜ್ , ಡ್ವೇನ್ ಬ್ರಾವೋ , ಮೊಹಮ್ಮದ್ ಮೊಹ್ಸಿನ್ , ನವೀನ್-ಉಲ್-ಹಕ್ , ಜಿಯಾ-ಉಲ್-ಹಕ್.

ಇದನ್ನೂ ಓದಿ: ಚಾಂಪಿಯನ್ಸ್​ ಟ್ರೋಫಿಯಿಂದ ಟೀಮ್ ಇಂಡಿಯಾ ಹಿಂದೆ ಸರಿದರೆ, ಯಾವ ತಂಡಕ್ಕೆ ಚಾನ್ಸ್?

ಎಂಐ ನ್ಯೂಯಾರ್ಕ್ ಪ್ಲೇಯಿಂಗ್ 11: ರೂಬೆನ್ ಕ್ಲಿಂಟನ್ , ಮೊನಾಂಕ್ ಪಟೇಲ್ , ನಿಕೋಲಸ್ ಪೂರನ್ (ವಿಕೆಟ್ ಕೀಪರ್) , ಟಿಮ್ ಡೇವಿಡ್ , ಕೀರನ್ ಪೊಲಾರ್ಡ್ (ನಾಯಕ) , ಸ್ಟೀವನ್ ಟೇಲರ್ , ರಶೀದ್ ಖಾನ್ , ಟ್ರೆಂಟ್ ಬೌಲ್ಟ್ , ನಸ್ತುಷ್ ಕೆಂಜಿಗೆ, ಇಹ್ಸಾನ್ ಆದಿಲ್, ಕಗಿಸೊ ರಬಾಡ.