MLC 2024: ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ ಪ್ಲೇಆಫ್ ವೇಳಾಪಟ್ಟಿ ಇಲ್ಲಿದೆ

MLC 2024: ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ ಮೊದಲ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಎಂಐ ನ್ಯೂಯಾರ್ಕ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಹಾಗೆಯೇ ಸಿಯಾಟಲ್ ಓರ್ಕಾಸ್ ತಂಡವು ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು. ಇದೀಗ ಎರಡನೇ ಸೀಸನ್​ನಲ್ಲೂ ಎಂಐ ನ್ಯೂಯಾರ್ಕ್ ತಂಡವು ಪ್ಲೇಆಫ್ ಹಂತಕ್ಕೇರುವಲ್ಲಿ ಯಶಸ್ವಿಯಾಗಿದೆ.

MLC 2024: ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ ಪ್ಲೇಆಫ್ ವೇಳಾಪಟ್ಟಿ ಇಲ್ಲಿದೆ
MLC 2024
Follow us
ಝಾಹಿರ್ ಯೂಸುಫ್
|

Updated on: Jul 23, 2024 | 11:12 AM

ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್  ಟಿ20 ಟೂರ್ನಿಯು ಅಂತಿಮ ಹಂತಕ್ಕೆ ಬಂದು ನಿಂತಿದೆ. 6 ತಂಡಗಳೊಂದಿಗೆ ಶುರುವಾದ ಈ ಟೂರ್ನಿಯಿಂದ ಈಗಾಗಲೇ ಸಿಯಾಟಲ್ ಓರ್ಕಾಸ್ ಮತ್ತು ಲಾಸ್ ಏಂಜಲೀಸ್ ನೈಟ್ ರೈಡರ್ಸ್ ತಂಡಗಳು ಹೊರಬಿದ್ದಿದೆ. ಇನ್ನು ವಾಷಿಂಗ್ಟನ್ ಫ್ರೀಡಮ್, ಸ್ಯಾನ್ ಫ್ರಾನಿಸ್ಕೊ ಯುನಿಕಾರ್ನ್ಸ್​, ಟೆಕ್ಸಾಸ್ ಸೂಪರ್ ಕಿಂಗ್ಸ್ ಮತ್ತು ಎಂಐ ನ್ಯೂಯಾರ್ಕ್ ತಂಡಗಳು ಪ್ಲೇಆಫ್ ಹಂತಕ್ಕೇರಿದೆ.

ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿದ ಸ್ಟೀವ್ ಸ್ಮಿತ್ ನಾಯಕತ್ವದ ವಾಷಿಂಗ್ಟನ್ ಫ್ರೀಡಮ್ ತಂಡವು 7 ಪಂದ್ಯಗಳಲ್ಲಿ 5 ರಲ್ಲಿ ಜಯ ಸಾಧಿಸಿ ಒಟ್ಟು 11 ಅಂಕಗಳೊಂದಿಗೆ ಪಾಯಿಂಟ್ಸ್​ ಟೇಬಲ್​​ನಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಈ ಅಗ್ರಸ್ಥಾನದೊಂದಿಗೆ ಪ್ಲೇಆಫ್ ಹಂತಕ್ಕೆ ಎಂಟ್ರಿ ಕೊಟ್ಟಿದೆ.

ಇನ್ನು ಕೋರೆ ಅ್ಯಂಡರ್ಸನ್​ ಮುಂದಾಳತ್ವದ ಸ್ಯಾನ್ಸ್ ಫ್ರಾನ್ಸಿಸ್ಕೊ ಯುನಿಕಾರ್ನ್ಸ್ ತಂಡವು 7 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿ ಮುಂದಿನ ಹಂತಕ್ಕೇರಿದೆ. ಹಾಗೆಯೇ ಫಾಫ್ ಡುಪ್ಲೆಸಿಸ್ ನಾಯಕತ್ವದ ಟೆಕ್ಸಾಸ್ ಸೂಪರ್ ಕಿಂಗ್ಸ್ 6 ಪಂದ್ಯಗಳಲ್ಲಿ 2 ಜಯ ಸಾಧಿಸಿದೆ. ಮತ್ತೆರಡು ಪಂದ್ಯಗಳು ರದ್ದಾಗಿರುವ ಕಾರಣ ಒಟ್ಟು 6 ಅಂಕಗಳೊಂದಿಗೆ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ.

ಕೀರನ್ ಪೊಲಾರ್ಡ್ ಸಾರಥ್ಯದಲ್ಲಿ ಕಣಕ್ಕಿಳಿದಿರುವ ಎಂಐ ನ್ಯೂಯಾರ್ಕ್ ತಂಡವು 7 ಪಂದ್ಯಗಳಲ್ಲಿ ಜಯ ಸಾಧಿಸಿದ್ದು ಕೇವಲ 2 ಪಂದ್ಯಗಳಲ್ಲಿ ಮಾತ್ರ. ಇದಾಗ್ಯೂ, ನೆಟ್​ ರನ್ ರೇಟ್​ನಲ್ಲಿ ಲಾಸ್ ಏಂಜಲೀಸ್ ನೈಟ್ ರೈಡರ್ಸ್ ತಂಡವನ್ನು ಹಿಂದಿಕ್ಕಿ ಪ್ಲೇಆಫ್ ಹಂತಕ್ಕೇರುವಲ್ಲಿ ಯಶಸ್ವಿಯಾಗಿದೆ.

ಪ್ಲೇಆಫ್ ಸುತ್ತು:

ಪ್ಲೇಆಫ್​ನಲ್ಲಿ ಮೊದಲು ಎಲಿಮಿನೇಟರ್ ಪಂದ್ಯ ನಡೆಯಲಿದ್ದು ಈ ಮ್ಯಾಚ್​ನಲ್ಲಿ ಟೆಕ್ಸಾಸ್ ಸೂಪರ್ ಕಿಂಗ್ಸ್ ಮತ್ತು ಎಂಐ ನ್ಯೂಯಾರ್ಕ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಚಾಲೆಂಜರ್ ಸುತ್ತಿಗೆ ಪ್ರವೇಶಿಸಲಿದೆ. ಹಾಗೆಯೇ ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ.

ಇದಾದ ಬಳಿಕ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿರುವ ವಾಷಿಂಗ್ಟನ್ ಫ್ರೀಡಮ್ ಮತ್ತು ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡವು ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ. ಇನ್ನು ಸೋತ ತಂಡವು ಚಾಲೆಂಜರ್ ಪಂದ್ಯವಾಡಲಿದೆ.

ಇದನ್ನೂ ಓದಿ: IPL 2025: ಮುಂಬೈ ಇಂಡಿಯನ್ಸ್ ತಂಡಕ್ಕೆ ಸೂರ್ಯಕುಮಾರ್ ಯಾದವ್ ಗುಡ್ ಬೈ?

ಪ್ಲೇಆಫ್ ವೇಳಾಪಟ್ಟಿ:

  • ಜುಲೈ 25: ಎಲಿಮಿನೇಟರ್ ಪಂದ್ಯ – ಟೆಕ್ಸಾಸ್ ಸೂಪರ್ ಕಿಂಗ್ಸ್ vs MI ನ್ಯೂಯಾರ್ಕ್ (ಸಮಯ: ಬೆಳಿಗ್ಗೆ 6 ಗಂಟೆಗೆ IST)
  • ಜುಲೈ 26: ಕ್ವಾಲಿಫೈಯರ್ ಪಂದ್ಯ – ವಾಷಿಂಗ್ಟನ್ ಫ್ರೀಡಮ್ vs ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ (ಸಮಯ: ಬೆಳಿಗ್ಗೆ 6 ಗಂಟೆಗೆ IST)
  • ಜುಲೈ 27: ಚಾಲೆಂಜರ್ ಪಂದ್ಯ – ಎಲಿಮಿನೇಟರ್ ವಿಜೇತ vs ಕ್ವಾಲಿಫೈಯರ್‌ನ ಸೋತವರು (ಸಮಯ: ಬೆಳಿಗ್ಗೆ 6 ಗಂಟೆಗೆ IST)
  • ಜುಲೈ 29: ಫೈನಲ್ – ಕ್ವಾಲಿಫೈಯರ್ ವಿಜೇತ vs ಚಾಲೆಂಜರ್ ವಿಜೇತ (ಸಮಯ: ಬೆಳಿಗ್ಗೆ 6 ಗಂಟೆಗೆ IST)
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ