MLC 2024: ರೋಚಕ ಜಯದೊಂದಿಗೆ ಫೈನಲ್​ಗೆ ಲಗ್ಗೆಯಿಟ್ಟ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್

MLC 2024: ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ ಮೊದಲ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಎಂಐ ನ್ಯೂಯಾರ್ಕ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಹಾಗೆಯೇ ಸಿಯಾಟಲ್ ಓರ್ಕಾಸ್ ತಂಡವು ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು. ಈ ಬಾರಿ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ಮತ್ತು ವಾಷಿಂಗ್ಟನ್ ಫ್ರೀಡಮ್ ತಂಡಗಳು ಫೈನಲ್​ಗೆ ಲಗ್ಗೆಯಿಟ್ಟಿದೆ.

MLC 2024: ರೋಚಕ ಜಯದೊಂದಿಗೆ ಫೈನಲ್​ಗೆ ಲಗ್ಗೆಯಿಟ್ಟ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್
San Francisco Unicorns
Follow us
ಝಾಹಿರ್ ಯೂಸುಫ್
|

Updated on: Jul 27, 2024 | 10:38 AM

ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ ಚಾಲೆಂಜರ್ ಪಂದ್ಯದಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡ ರೋಚಕ ಜಯ ಸಾಧಿಸಿದೆ. ಡಲ್ಲಾಸ್​ನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂನಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಟೆಕ್ಸಾಸ್ ಸೂಪರ್ ಕಿಂಗ್ಸ್ ಮತ್ತು ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡಕ್ಕೆ ಜೇಕ್ ಫ್ರೇಸರ್ ಮೆಕ್​ಗುರ್ಕ್ ಹಾಗೂ ಫಿನ್ ಅಲೆನ್ ಸ್ಪೋಟಕ ಆರಂಭ ಒದಗಿಸಿದ್ದರು.

ಮೊದಲ ವಿಕೆಟ್​ಗೆ 79 ರನ್​ಗಳ ಜೊತೆಯಾಟವಾಡಿದ ಬಳಿಕ ಜೇಕ್ ಫ್ರೇಸರ್ (18) ವಿಕೆಟ್ ಒಪ್ಪಿಸಿದ್ದರು. ಅಷ್ಟರಲ್ಲಾಗಲೇ ಅಲೆನ್ ಅರ್ಧಶತಕ ಪೂರೈಸಿ ಅಬ್ಬರಿಸಲಾರಂಭಿಸಿದರು. ಪರಿಣಾಮ ಮೈದಾನದ ಮೂಲೆ ಮೂಲೆಯಲ್ಲೂ ಸಿಕ್ಸ್​-ಫೋರ್​ಗಳ ಸುರಿಮಳೆಯಾಯಿತು.

ಈ ಮೂಲಕ ಕೇವಲ 52 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್​ ಹಾಗೂ 6 ಫೋರ್​ಗಳೊಂದಿಗೆ ಫಿನ್ ಅಲೆನ್ ಸ್ಪೋಟಕ ಸೆಂಚುರಿಯನ್ನು ಸಹ ಪೂರೈಸಿದರು. ಈ ಶತಕದ ನೆರವಿನಿಂದ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 200 ರನ್ ಕಲೆಹಾಕಿತು.

ಟಿಎಸ್​ಕೆಗೆ ಕಠಿಣ ಗುರಿ:

201 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡಕ್ಕೆ ಫಾಫ್ ಡುಪ್ಲೆಸಿಸ್ ಮತ್ತು ಡೆವೊನ್ ಕಾನ್ವೆ ಉತ್ತಮ ಆರಂಭ ಒದಗಿಸುವಲ್ಲಿ ಯಶಸ್ವಿಯಾಗಿದ್ದರು. 4.1 ಓವರ್​ಗಳಲ್ಲಿ 55 ರನ್​ ಚಚ್ಚಿದ ಬಳಿಕ ಡುಪ್ಲೆಸಿಸ್ (45) ಔಟಾದರು. ಆ ಬಳಿಕ ಬಂದ ಆರೋನ್ ಹಾರ್ಡಿ 15 ರನ್ ಬಾರಿ ವಿಕೆಟ್ ಒಪ್ಪಿಸಿದರು.

ಇನ್ನು ಮಿಲಿಂದ್ ಕುಮಾರ್ (2) ಹಾಗೂ ಮಾರ್ಕಸ್ ಸ್ಟೋಯಿನಿಸ್ (1) ವಿಕೆಟ್ ಕೈಚೆಲ್ಲಿದ್ದು ಟೆಕ್ಸಾಸ್ ಸೂಪರ್ ಕಿಂಗ್ಸ್ ಪಾಲಿಗೆ ದುಬಾರಿಯಾಯಿತು. ಇದಾಗ್ಯೂ ಜೋಶ್ವ ಟ್ರೊಂಪ್ ಜೊತೆಗೂಡಿ ಇನಿಂಗ್ಸ್ ಕಟ್ಟಿದ ಕಾನ್ವೆ ಟಿಎಸ್​ಕೆ ತಂಡಕ್ಕೆ ಗೆಲುವಿನ ಆಸೆ ಮೂಡಿಸಿದ್ದರು.

ಒಂದೆಡೆ ಡೆವೊನ್ ಕಾನ್ವೆ ಅರ್ಧಶತಕ ಪೂರೈಸಿದರೆ, ಮತ್ತೊಂದೆಡೆ ಟ್ರೊಂಪ್ ಸ್ಪೋಟಕ ಹಾಫ್ ಸೆಂಚುರಿ ಸಿಡಿಸಿದರು. ಪರಿಣಾಮ ಕೊನೆಯ ಓವರ್​ನಲ್ಲಿ ಟಿಎಸ್​ಕೆ ತಂಡಕ್ಕೆ 17 ರನ್​ಗಳ ಅವಶ್ಯಕತೆಯಿತ್ತು. ನಿರ್ಣಾಯಕ ಓವರ್ ಎಸೆದ ಪ್ಯಾಟ್ ಕಮಿನ್ಸ್ ಕೇವಲ 7 ರನ್​ ಮಾತ್ರ ನೀಡಿ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡಕ್ಕೆ 10 ರನ್​ಗಳ ರೋಚಕ ಜಯ ತಂದುಕೊಟ್ಟರು.

ಈ ಗೆಲುವಿನೊಂದಿಗೆ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡವು ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ ಫೈನಲ್​ಗೆ ಪ್ರವೇಶಿಸಿದೆ. ಅಲ್ಲದೆ ಜುಲೈ 28 ರಂದು (ಭಾರತದಲ್ಲಿ ಜುಲೈ 29) ನಡೆಯಲಿರುವ ಫೈನಲ್ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಮ್ ತಂಡವನ್ನು ಎದುರಿಸಲಿದೆ.

ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ಪ್ಲೇಯಿಂಗ್ 11: ಫಿನ್ ಅಲೆನ್ , ಜೇಕ್ ಫ್ರೇಸರ್-ಮೆಕ್​ಗುರ್ಕ್ , ಸಂಜಯ್ ಕೃಷ್ಣಮೂರ್ತಿ , ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್) , ಶೆರ್ಫೇನ್ ರುದರ್‌ಫೋರ್ಡ್ , ಹಸನ್ ಖಾನ್ , ಕೋರಿ ಅ್ಯಂಡರ್ಸನ್ (ನಾಯಕ) , ಪ್ಯಾಟ್ ಕಮಿನ್ಸ್ , ಹ್ಯಾರಿಸ್ ರೌಫ್ , ಕಾರ್ಮಿ ಲೆ ರೌಕ್ಸ್ , ಜುನಾಯ್ ಡ್ರೈಸ್‌ಡೇಲ್.

ಇದನ್ನೂ ಓದಿ: Maharaja Trophy T20: ಕರ್ನಾಟಕ ಟಿ20 ಲೀಗ್​ನ 6 ತಂಡಗಳು ಪ್ರಕಟ

ಟೆಕ್ಸಾಸ್ ಸೂಪರ್ ಕಿಂಗ್ಸ್ ಪ್ಲೇಯಿಂಗ್ 11: ಡೆವೊನ್ ಕಾನ್ವೇ (ವಿಕೆಟ್ ಕೀಪರ್) , ಫಾಫ್ ಡು ಪ್ಲೆಸಿಸ್ (ನಾಯಕ) , ಆರೋನ್ ಹಾರ್ಡಿ , ಜೋಶ್ವ ಟ್ರೊಂಪ್, ಮಾರ್ಕಸ್ ಸ್ಟೊಯಿನಿಸ್ , ಮಿಲಿಂದ್ ಕುಮಾರ್ , ಕ್ಯಾಲ್ವಿನ್ ಸಾವೇಜ್ , ಒಟ್ನೀಲ್ ಬಾರ್ಟ್‌ಮನ್ , ಮೊಹಮ್ಮದ್ ಮೊಹ್ಸಿನ್ , ನೂರ್ ಅಹ್ಮದ್ , ಜಿಯಾ-ಉಲ್-ಹಕ್.

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ