MLC 2024: TSK ಗೆ ಸೂಪರ್ ಜಯ: ಹೊರಬಿದ್ದ MI ನ್ಯೂಯಾರ್ಕ್​

MLC 2024: ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮಾಲೀಕತ್ವದ ಎಂಐ ನ್ಯೂಯಾರ್ಕ್ ತಂಡವು ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಿಂದ ಹೊರಬಿದ್ದಿದೆ. ಕಳೆದ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಕೀರನ್ ಪೊಲಾರ್ಡ್ ನೇತೃತ್ವದ ಎಂಐ ನ್ಯೂಯಾರ್ಕ್​ ತಂಡವು ಈ ಬಾರಿ ಎಲಿಮಿನೇಟರ್ ಪಂದ್ಯದಲ್ಲಿ ಮುಗ್ಗರಿಸುವ ಮೂಲಕ ಅಭಿಯಾನ ಅಂತ್ಯಗೊಳಿಸಿದೆ.

MLC 2024: TSK ಗೆ ಸೂಪರ್ ಜಯ: ಹೊರಬಿದ್ದ MI ನ್ಯೂಯಾರ್ಕ್​
TSK
Follow us
ಝಾಹಿರ್ ಯೂಸುಫ್
|

Updated on:Jul 25, 2024 | 11:05 AM

ಡಲ್ಲಾಸ್​ನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂನಲ್ಲಿ ನಡೆದ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟಿಎಸ್​ಕೆ ತಂಡ ಚಾಲೆಂಜರ್ ಸುತ್ತಿಗೆ ಅರ್ಹತೆ ಪಡೆದರೆ, ಎಂಐ ನ್ಯೂಯಾರ್ಕ್ ತಂಡವು ಟೂರ್ನಿಯಿಂದ ಹೊರಬಿದ್ದಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಎಂಐ ನ್ಯೂಯಾರ್ಕ್ ಉತ್ತಮ ಆರಂಭ ಪಡೆದಿರಲಿಲ್ಲ. ಜಿಯಾ ಉಲ್ ಹಕ್ ಎಸೆದ ಮೊದಲ ಓವರ್​ನ ನಾಲ್ಕನೇ ಎಸೆತದಲ್ಲೇ ಡೆವಾಲ್ಡ್ ಬ್ರೆವಿಸ್ (0) ಔಟಾಗಿ ನಿರ್ಗಮಿಸಿದ್ದರು. ಆ ಬಳಿಕ ಬಂದ ನಿಕೋಲಸ್ ಪೂರನ್ ಕೇವಲ 8 ರನ್​ಗಳಿಸಿ ಔಟಾದರು.

ಇನ್ನು ನಾಲ್ಕನೇ ವಿಕೆಟ್​ಗೆ ಜೊತೆಗೂಡಿದ ಮೊನಾಂಕ್ ಪಟೇಲ್ ಹಾಗೂ ರಶೀದ್ ಖಾನ್ ಉತ್ತಮ ಜೊತೆಯಾಟ ಪ್ರದರ್ಶಿಸಿದರು. ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಈ ಜೋಡಿಯು 10 ಓವರ್​ಗಳಲ್ಲಿ ತಂಡದ ಮೊತ್ತವನ್ನು 100 ರ ಗಡಿದಾಟಿಸಿದ್ದರು. ಈ ಹಂತದಲ್ಲಿ 48 ರನ್ ಬಾರಿಸಿದ ಮೊನಾಂಕ್ ವಿಕೆಟ್ ಒಪ್ಪಿಸಿದರು.

ಇದಾಗ್ಯೂ ಸಿಡಿಲಬ್ಬರ ಮುಂದುವರೆಸಿದ ರಶೀದ್ ಖಾನ್ 30 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 55 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಎಂಐ ನ್ಯೂಯಾರ್ಕ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 163 ರನ್​ ಕಲೆಹಾಕಿತು.

ಫಾಫ್ ಆರ್ಭಟ:

164 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡಕ್ಕೆ ಫಾಫ್ ಡುಪ್ಲೆಸಿಸ್ ಹಾಗೂ ಡೆವೊನ್ ಕಾನ್ವೆ ಸ್ಪೋಟಕ ಆರಂಭ ಒದಗಿಸಿದರು. ಒಂದೆಡೆ ಕಾನ್ವೆ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದರೆ, ಮತ್ತೊಂದೆಡೆ ಡುಪ್ಲೆಸಿಸ್ ಸಿಡಿಲಬ್ಬರ ಶುರು ಮಾಡಿದರು. ಪರಿಣಾಮ ಮೊದಲ ವಿಕೆಟ್​ಗೆ 101 ರನ್​ಗಳ ಜೊತೆಯಾಟ ಮೂಡಿಬಂತು.

47 ಎಸೆತಗಳಲ್ಲಿ 6 ಫೋರ್ ಹಾಗೂ 3 ಭರ್ಜರಿ ಸಿಕ್ಸ್​ಗಳೊಂದಿಗೆ 72 ರನ್ ಬಾರಿಸಿದ್ದ ಫಾಫ್ ಡುಪ್ಲೆಸಿಸ್ ಈ ಹಂತದಲ್ಲಿ ವಿಕೆಟ್ ಒಪ್ಪಿಸಿದರು. ಇದಾಗ್ಯೂ ಉತ್ತಮ ಬ್ಯಾಟಿಂಗ್ ಮುಂದುವರೆಸಿದ ಕಾನ್ವೆ ಅಜೇಯ 51 ರನ್ ಬಾರಿಸಿದರೆ, ಯುವ ದಾಂಡಿಗ ಆರೋನ್ ಹಾರ್ಡಿ 40 ರನ್ ಸಿಡಿಸಿದರು. ಈ ಮೂಲಕ ಟೆಕ್ಸಾಸ್ ಸೂಪರ್ ಕಿಂಗ್ಸ್​ ತಂಡವು 18.3 ಓವರ್​ಗಳಲ್ಲಿ ಗುರಿ ತಲುಪಿ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡವು ಚಾಲೆಂಜರ್ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ. ಅತ್ತ ಈ ಸೋಲಿನೊಂದಿಗೆ ಹಾಲಿ ಚಾಂಪಿಯನ್ ಎಂಐ ನ್ಯೂಯಾರ್ಕ್ ತಂಡವು ಟೂರ್ನಿಯಿಂದ ಹೊರಬಿದ್ದಿದೆ.

ಟೆಕ್ಸಾಸ್ ಸೂಪರ್ ಕಿಂಗ್ಸ್ ಪ್ಲೇಯಿಂಗ್ 11: ಡೆವೊನ್ ಕಾನ್ವೇ (ವಿಕೆಟ್ ಕೀಪರ್) , ಫಾಫ್ ಡು ಪ್ಲೆಸಿಸ್ (ನಾಯಕ) , ಆರೋನ್ ಹಾರ್ಡಿ , ಜೋಶುವಾ ಟ್ರಾಂಪ್ , ಮಾರ್ಕಸ್ ಸ್ಟೊಯಿನಿಸ್ , ಮಿಲಿಂದ್ ಕುಮಾರ್ , ಡ್ವೇನ್ ಬ್ರಾವೋ , ಕ್ಯಾಲ್ವಿನ್ ಸಾವೇಜ್ , ಮೊಹಮ್ಮದ್ ಮೊಹ್ಸಿನ್ , ನೂರ್ ಅಹ್ಮದ್ , ಜಿಯಾ-ಉಲ್-ಹಕ್.

ಇದನ್ನೂ ಓದಿ: IPL 2025: ಮುಂಬೈ ಇಂಡಿಯನ್ಸ್ ತಂಡಕ್ಕೆ ಸೂರ್ಯಕುಮಾರ್ ಯಾದವ್ ಗುಡ್ ಬೈ?

ಎಂಐ ನ್ಯೂಯಾರ್ಕ್​ ಪ್ಲೇಯಿಂಗ್ 11: ಡೆವಾಲ್ಡ್ ಬ್ರೆವಿಸ್ , ಶಯಾನ್ ಜಹಾಂಗೀರ್ , ನಿಕೋಲಸ್ ಪೂರನ್ (ವಿಕೆಟ್ ಕೀಪರ್) , ಮೊನಾಂಕ್ ಪಟೇಲ್ , ಹೀತ್ ರಿಚರ್ಡ್ಸ್ , ಕೀರನ್ ಪೊಲಾರ್ಡ್ (ನಾಯಕ) , ರೊಮಾರಿಯೋ ಶೆಫರ್ಡ್ , ರಶೀದ್ ಖಾನ್ , ಟ್ರೆಂಟ್ ಬೌಲ್ಟ್ , ನೊಸ್ತುಶ್ ಕೆಂಜಿಗೆ , ರುಶಿಲ್ ಉಗರ್ಕರ್.

Published On - 9:51 am, Thu, 25 July 24

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ