MLC 2024: ವಾಷಿಂಗ್ಟನ್ ಫ್ರೀಡಮ್ ಚಾಂಪಿಯನ್ಸ್​

MLC 2024: ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ ಮೊದಲ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಎಂಐ ನ್ಯೂಯಾರ್ಕ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಹಾಗೆಯೇ ಸಿಯಾಟಲ್ ಓರ್ಕಾಸ್ ತಂಡವು ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು. ಈ ಬಾರಿ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡವನ್ನು ಸೋಲಿಸಿ ವಾಷಿಂಗ್ಟನ್ ಫ್ರೀಡಮ್ ಟ್ರೋಫಿ ಎತ್ತಿ ಹಿಡಿದಿದೆ.

MLC 2024: ವಾಷಿಂಗ್ಟನ್ ಫ್ರೀಡಮ್ ಚಾಂಪಿಯನ್ಸ್​
Washington Freedom
Follow us
ಝಾಹಿರ್ ಯೂಸುಫ್
|

Updated on: Jul 29, 2024 | 10:32 AM

ಅಮೆರಿಕದಲ್ಲಿ ನಡೆದ ಮೇಜರ್ ಲೀಗ್ ಕ್ರಿಕೆಟ್​ ಟೂರ್ನಿಯಲ್ಲಿ ವಾಷಿಂಗ್ಟನ್ ಫ್ರೀಡಮ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಡಲ್ಲಾಸ್​ನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಮ್ ಮತ್ತು ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡದ ನಾಯಕ ಕೋರಿ ಅ್ಯಂಡರ್ಸನ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ವಾಷಿಂಗ್ಟನ್ ಫ್ರೀಡಮ್ ತಂಡಕ್ಕೆ ಸ್ಟೀವ್ ಸ್ಮಿತ್ ಉತ್ತಮ ಆರಂಭ ಒದಗಿಸಿದ್ದರು. ಆದರೆ ಮತ್ತೋರ್ವ ಓಪನರ್ ಟ್ರಾವಿಸ್ ಹೆಡ್ (9) ಬೇಗನೆ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು. ಇದರ ಬೆನ್ನಲ್ಲೇ ಆಂಡ್ರೀಸ್ ಗೌಸ್ (21) ಔಟಾದರು.

ಈ ಹಂತದಲ್ಲಿ ಜೊತೆಗೂಡಿದ ಸ್ಟೀವ್ ಸ್ಮಿತ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಈ ಜೋಡಿಯು 15 ಓವರ್​ ಆಗುವಷ್ಟರಲ್ಲಿ ತಂಡದ ಮೊತ್ತವನ್ನು 150 ರ ಗಡಿದಾಟಿಸಿದರು.

52 ಎಸೆತಗಳನ್ನು ಎದುರಿಸಿದ ಸ್ಟೀವ್ ಸ್ಮಿತ್ 6 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 88 ರನ್ ಬಾರಿಸಿದರು. ಇನ್ನು 22 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್​ ಸಿಡಿಸುವ ಮೂಲಕ ಗ್ಲೆನ್ ಮ್ಯಾಕ್ಸ್​ವೆಲ್ 40 ರನ್ ಸಿಡಿಸಿದರು. ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ವಾಷಿಂಗ್ಟನ್ ಫ್ರೀಡಮ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್​ ಕಳೆದುಕೊಂಡು 207 ರನ್​ ಕಲೆಹಾಕಿತು.

ಸ್ಟೀವ್ ಸ್ಮಿತ್ ಬ್ಯಾಟಿಂಗ್:

208 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡಕ್ಕೆ ಮಾರ್ಕೊ ಯಾನ್ಸೆನ್ ಆರಂಭಿಕ ಆಘಾತ ನೀಡಿದರು. ಪವರ್​ಪ್ಲೇನಲ್ಲೇ ಜೇಕ್ ಪ್ರೇಸರ್ (3) ಹಾಗೂ ಫಿನ್ ಅಲೆನ್ (13) ವಿಕೆಟ್ ಪಡೆದು ಆರಂಭಿಕ ಯಶಸ್ಸು ತಂದುಕೊಟ್ಟರು.

ಆ ಬಳಿಕ ಬಂದ ಜೋಶ್ ಇಂಗ್ಲಿಸ್ 18 ರನ್ ಬಾರಿಸಿದರೆ, ಹಸನ್ ಖಾನ್ 13 ರನ್ ಸಿಡಿಸಿದರು. ಇನ್ನು ಪ್ಯಾಟ್ ಕಮಿನ್ಸ್ 13 ರನ್​ಗಳಿಸಿ ಔಟಾದರು. ಅತ್ತ ಸಾಂಘಿಕ ದಾಳಿ ಸಂಘಟಿಸಿದ ವಾಷಿಂಗ್ಟನ್ ಫ್ರೀಡಮ್ ಬೌಲರ್​ಗಳು ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡವನ್ನು 16 ಓವರ್​ಗಳಲ್ಲಿ 111 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು.  ಈ ಮೂಲಕ ಸ್ಟೀವ್ ಸ್ಮಿತ್ ನೇತೃತ್ವದ ವಾಷಿಂಗ್ಟನ್ ಫ್ರೀಡಮ್ ತಂಡವು 96 ರನ್​ಗಳ ಭರ್ಜರಿ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ವಾಷಿಂಗ್ಟನ್ ಫ್ರೀಡಮ್ ಪ್ಲೇಯಿಂಗ್ 11: ಟ್ರಾವಿಸ್ ಹೆಡ್ , ಸ್ಟೀವನ್ ಸ್ಮಿತ್ (ನಾಯಕ) , ಆಂಡ್ರೀಸ್ ಗೌಸ್ (ವಿಕೆಟ್ ಕೀಪರ್) , ರಚಿನ್ ರವೀಂದ್ರ , ಗ್ಲೆನ್ ಮ್ಯಾಕ್ಸ್ ವೆಲ್ , ಮುಖ್ತಾರ್ ಅಹ್ಮದ್ , ಒಬುಸ್ ಪಿನಾರ್ , ಮಾರ್ಕೊ ಜಾನ್ಸೆನ್ , ಇಯಾನ್ ಹಾಲೆಂಡ್ , ಆಂಡ್ರ್ಯೂ ಟೈ , ಸೌರಭ್ ನೇತ್ರವಲ್ಕರ್.

ಇದನ್ನೂ ಓದಿ: Suryakumar Yadav: ಸೂರ್ಯಕುಮಾರ್ ಯಾದವ್ ಅಬ್ಬರಕ್ಕೆ ಮ್ಯಾಕ್ಸ್​ವೆಲ್ ವಿಶ್ವ ದಾಖಲೆ ಉಡೀಸ್

ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ಪ್ಲೇಯಿಂಗ್ 11: ಫಿನ್ ಅಲೆನ್ , ಜೇಕ್ ಫ್ರೇಸರ್-ಮೆಕ್​ಗುರ್ಕ್ , ಸಂಜಯ್ ಕೃಷ್ಣಮೂರ್ತಿ , ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್) , ಶೆರ್ಫೇನ್ ರುದರ್‌ಫೋರ್ಡ್ , ಹಸನ್ ಖಾನ್ , ಕೋರಿ ಅ್ಯಂಡರ್ಸನ್ (ನಾಯಕ) , ಪ್ಯಾಟ್ ಕಮ್ಮಿನ್ಸ್ , ಹ್ಯಾರಿಸ್ ರೌಫ್ , ಕಾರ್ಮಿ ಲೆ ರೌಕ್ಸ್ , ಜುನಾಯ್ ಡ್ರೈಸ್‌ಡೇಲ್.

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ