AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರಕ ಬೌಲಿಂಗ್​​ನೊಂದಿಗೆ 74 ವರ್ಷಗಳ ಹಳೆಯ ಮುರಿದ ಅಬ್ಬಾಸ್!

Mohammad Abbas: ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ್ ತಂಡದ ಹಿರಿಯ ವೇಗಿ ಮೊಹಮ್ಮದ್ ಅಬ್ಬಾಸ್ ಒಟ್ಟು 9 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ 9 ವಿಕೆಟ್​​​ಗಳೊಂದಿಗೆ ಪಾಕ್ ವೇಗಿ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ದಾಖಲೆಗಳ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…

ಮಾರಕ ಬೌಲಿಂಗ್​​ನೊಂದಿಗೆ 74 ವರ್ಷಗಳ ಹಳೆಯ ಮುರಿದ ಅಬ್ಬಾಸ್!
Mohammad AbbasImage Credit source: GettyImages
ಝಾಹಿರ್ ಯೂಸುಫ್
|

Updated on: Aug 31, 2026 | 8:01 AM

Share

ಪಾಕಿಸ್ತಾನದ ವೇಗದ ಬೌಲರ್ ಮೊಹಮ್ಮದ್ ಅಬ್ಬಾಸ್ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ 5 ವಿಕೆಟ್ ಪಡೆಯುವ ಮೂಲಕ 74 ವರ್ಷಗಳ ಹಳೆಯ ಐತಿಹಾಸಿಕ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಕರಾರುವಾಕ್ ದಾಳಿ ಸಂಘಟಿಸಿದ ಅಬ್ಬಾಸ್ 22 ಓವರ್​​ಗಳಲ್ಲಿ 57 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಇದಕ್ಕೂ ಮುನ್ನ ಮೊದಲ ಇನಿಂಗ್ಸ್​ನಲ್ಲಿ 4 ವಿಕೆಟ್ ಪಡೆದಿದ್ದರು. ಈ ಮೂಲಕ ಒಟ್ಟು 9 ವಿಕೆಟ್ ಕಬಳಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

74 ವರ್ಷಗಳ ಹಳೆಯ ದಾಖಲೆ ಉಡೀಸ್!

ಈ ಪಂದ್ಯದಲ್ಲಿ ಕಬಳಿಸಿದ ಒಟ್ಟು 9 ವಿಕೆಟ್​ಗಳೊಂದಿಗೆ ಮೊಹಮ್ಮದ್ ಅಬ್ಬಾಸ್ ಲಾರ್ಡ್ಸ್ ಮೈದಾನದಲ್ಲಿ ಪಂದ್ಯವೊಂದರಲ್ಲಿ ಅತ್ಯಧಿಕ ವಿಕೆಟ್ ಪಡೆದ ಏಷ್ಯಾದ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಲೆ ಪಾಕಿಸ್ತಾನದ ವಾಖರ್ ಯೂನಿಸ್ ಹೆಸರಿನಲ್ಲಿತ್ತು. 1996 ರಲ್ಲಿ ಲಾರ್ಡ್ಸ್​​ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ವಾಖರ್ ಯೂನಿಸ್ 184 ರನ್ ನೀಡಿ 8 ವಿಕೆಟ್ ಕಬಳಿಸಿ ಈ ದಾಖಲೆ ಬರೆದಿದ್ದರು.

ಹಾಗೆಯೇ ಈ ಪಂದ್ಯದಲ್ಲಿ 5 ವಿಕೆಟ್ ಪಡೆಯುವ ಮೂಲಕ ಲಾರ್ಡ್ಸ್​ ಮೈದಾನದಲ್ಲಿ ಐದು ವಿಕೆಟ್​​ಗಳ ಗೊಂಚಲು ಪಡೆದ ಏಷ್ಯಾದ ಹಿರಿಯ ಬೌಲರ್ ಎನಿಸಿಕೊಂಡಿದ್ದಾರೆ. ಈ ಹಿಂದೆ ಈ ದಾಖಲೆ ಭಾರತದ ಸ್ಪಿನ್ನರ್ ವಿನೂ ಮಂಕಡ್ (1952ರಲ್ಲಿ 36ನೇ ವಯಸ್ಸು) ಹೆಸರಿನಲ್ಲಿತ್ತು.

ಇದೀಗ 36 ವರ್ಷ, 5 ತಿಂಗಳ ವಯಸ್ಸಿನ ಮೊಹಮ್ಮದ್ ಅಬ್ಬಾಸ್ 74 ವರ್ಷಗಳ ಬಳಿಕ ವಿನೂ ಮಂಕಡ್ ಅವರ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

ಇದನ್ನೂ ಓದಿ: WTC ಫೈನಲ್ ರೇಸ್​​ನಲ್ಲಿ 5 ತಂಡಗಳು

900 ವಿಕೆಟ್‌ಗಳ ಮೈಲಿಗಲ್ಲು:

ಈ ಪಂದ್ಯದಲ್ಲಿ ಪಡೆದ 9 ವಿಕೆಟ್​​ಗಳೊಂದಿಗೆ ಮೊಹಮ್ಮದ್ ಅಬ್ಬಾಸ್ ತಮ್ಮ ಪ್ರಥಮ ದರ್ಜೆ ಕ್ರಿಕೆಟ್ ಜೀವನದಲ್ಲಿ 900 ವಿಕೆಟ್‌ಗಳ ಬೃಹತ್ ಮೈಲಿಗಲ್ಲನ್ನು ದಾಟಿದ್ದಾರೆ. ಈ ಮೂಲಕ ಪ್ರಸ್ತುತ ವಿಶ್ವ ಕ್ರಿಕೆಟ್‌ನಲ್ಲಿ ಸಕ್ರಿಯರಾಗಿರುವ ಆಟಗಾರರ ಪೈಕಿ 900ಕ್ಕೂ ಅಧಿಕ ಪ್ರಥಮ ದರ್ಜೆ ವಿಕೆಟ್ ಹೊಂದಿರುವ ಜಗತ್ತಿನ ಕೇವಲ ನಾಲ್ಕು ಆಟಗಾರರಲ್ಲಿ ಒಬ್ಬರೆನಿಸಿಕೊಂಡಿದ್ದಾರೆ.

Follow Us
ಇಂದು ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಗೆ ವಿಶೇಷ ದಿನ
ಇಂದು ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಗೆ ವಿಶೇಷ ದಿನ
ಕೆಪಿಎಸ್​ಸಿ ನೇಮಕಾತಿ ಹಗರಣ: ಸಿಐಡಿ ತನಿಖೇಲಿ ಮತ್ತಷ್ಟು ಸ್ಫೋಟಕ ವಿಚಾರ ಬಯಲು
ಕೆಪಿಎಸ್​ಸಿ ನೇಮಕಾತಿ ಹಗರಣ: ಸಿಐಡಿ ತನಿಖೇಲಿ ಮತ್ತಷ್ಟು ಸ್ಫೋಟಕ ವಿಚಾರ ಬಯಲು
ಕೆಪಿಎಸ್​​ಸಿ ನೇಮಕಾತಿ ಹಗರಣ: 1.5 ಕೋಟಿ, 22 ಲಕ್ಷದ ಚಿನ್ನಾಭರಣ ಜಪ್ತಿ
ಕೆಪಿಎಸ್​​ಸಿ ನೇಮಕಾತಿ ಹಗರಣ: 1.5 ಕೋಟಿ, 22 ಲಕ್ಷದ ಚಿನ್ನಾಭರಣ ಜಪ್ತಿ
ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು
ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಗುಜರಾತ್‌ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
ಗುಜರಾತ್‌ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
‘ದಸರಾದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದ ಪ್ರಮೋದಾದೇವಿ ಒಡೆಯರ್
‘ದಸರಾದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದ ಪ್ರಮೋದಾದೇವಿ ಒಡೆಯರ್
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ