AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಭಾರತ ಪೇಪರ್​ನಲ್ಲಷ್ಟೇ ಬಲಿಷ್ಠ, ಪಾಕಿಸ್ತಾನ್ ಗೆದ್ದೇ ಗೆಲ್ಲುತ್ತೆ: ಅಮೀರ್

India vs Pakistan: ದುಬೈ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ಇಂದು (ಫೆ.23) ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಗೆದ್ದರೆ ಸೆಮಿಫೈನಲ್​ಗೇರುವುದು ಬಹುತೇಕ ಖಚಿತವಾಗಲಿದೆ. ಅತ್ತ ಪಾಕ್ ತಂಡ ಸೋತರೆ ಟೂರ್ನಿಯಿಂದ ಹೊರಬೀಳುವುದು ಸಹ ಬಹುತೇಕ ಖಚಿತವಾಗಲಿದೆ.

IND vs PAK: ಭಾರತ ಪೇಪರ್​ನಲ್ಲಷ್ಟೇ ಬಲಿಷ್ಠ, ಪಾಕಿಸ್ತಾನ್ ಗೆದ್ದೇ ಗೆಲ್ಲುತ್ತೆ: ಅಮೀರ್
Ind Vs Pak
ಝಾಹಿರ್ ಯೂಸುಫ್
|

Updated on: Feb 23, 2025 | 8:32 AM

Share

ಭಾರತ ಹಾಗೂ ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ದುಬೈನ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಲಿದ್ದಾರೆ. ಈ ಕುತೂಹಲಕಾರಿ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಚರ್ಚೆಗಳು ಜೋರಾಗಿದ್ದು, ಇದರ ನಡುವೆ ಪಾಕಿಸ್ತಾನ್ ತಂಡದ ಮಾಜಿ ವೇಗಿ ಮೊಹಮ್ಮದ್ ಅಮೀರ್ ನೀಡಿರುವ ಹೇಳಿಕೆ ಭಾರೀ ವೈರಲ್ ಆಗಿದೆ.

ಚಾನೆಲ್​ ಚರ್ಚೆಯೊಂದರಲ್ಲಿ ಕಾಣಿಸಿಕೊಂಡ ಮೊಹಮ್ಮದ್ ಅಮೀರ್, ಈ ಬಾರಿ ಪಾಕಿಸ್ತಾನ್ ತಂಡ ಗೆದ್ದೇ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. ಭಾರತ ತಂಡವು ಬಲಿಷ್ಠವಾಗಿರುವುದು ಪೇಪರ್​ನಲ್ಲಿ ಅಷ್ಟೇ. ಟೀಮ್ ಇಂಡಿಯಾವನ್ನು ಸೋಲಿಸುವ ಸಾಮರ್ಥ್ಯ ಪಾಕಿಸ್ತಾನ್ ತಂಡಕ್ಕಿದೆ ಎಂದು ಅವರು ಹೇಳಿದ್ದಾರೆ.

ಭಾರತ ತಂಡವು ಕಾಗದದ ಮೇಲೆ ಬಲಿಷ್ಠವಾಗಿ ಕಾಣುತ್ತದೆ. ದ್ವಿಪಕ್ಷೀಯ ಸರಣಿಯಲ್ಲಿ ಅವರ ಪ್ರದರ್ಶನವನ್ನು ನೋಡಿದರೆ, ಅವರು ಕೂಡ ಉತ್ತಮವಾಗಿ ಆಡಿದ್ದಾರೆ. ಆದರೆ ಭಾರತ ತಂಡವು ಬಾಂಗ್ಲಾದೇಶ್ ವಿರುದ್ಧ ಆಡಿದ ಮೊದಲ ಪಂದ್ಯದಲ್ಲಿ ಬಹಳಷ್ಟು ತಪ್ಪುಗಳನ್ನು ಮಾಡಿದೆ. ಈಗ ಪಾಕಿಸ್ತಾನದೊಂದಿಗೆ ಒತ್ತಡದ ಪಂದ್ಯ ಆಡಬೇಕಿದೆ.

ಈ ಒತ್ತಡದ ನಡುವೆ ಟೀಮ್ ಇಂಡಿಯಾ ಅದೇ ತಪ್ಪುಗಳನ್ನು ಪುನರಾವರ್ತಿಸಬಹುದು. ಹೀಗಾಗಿ ಭಾರತ ವಿರುದ್ಧ ಪಾಕಿಸ್ತಾನ್ ತಂಡ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದು ಮೊಹಮ್ಮದ್ ಅಮೀರ್ ಹೇಳಿದ್ದಾರೆ.

ಪಾಕಿಸ್ತಾನ್ ತಂಡವು ತನ್ನ ಮೊದಲ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ್ದರೂ, ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಪ್ರದರ್ಶನ ನೀಡಲಿದೆ. ಈ ಮೂಲಕ ಭಾರತ ತಂಡವನ್ನು ಹಿಂದಿಕ್ಕಿ ಸೆಮಿಫೈನಲ್​ಗೇರುವ ವಿಶ್ವಾಸವನ್ನು ಮೊಹಮ್ಮದ್ ಅಮೀರ್ ವ್ಯಕ್ತಪಡಿಸಿದ್ದಾರೆ.

ಅಂದಹಾಗೆ ಮೊಹಮ್ಮದ್ ಅಮೀರ್ 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್​ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಟೀಮ್ ಇಂಡಿಯಾ ವಿರುದ್ಧ ನಡೆದ ಅಂತಿಮ ಪಂದ್ಯದಲ್ಲಿ ಫಖರ್ ಝಮಾನ್ (114) ಶತಕ ಬಾರಿಸಿದರೆ, ಮೊಹಮ್ಮದ್ ಅಮೀರ್ 6 ಓವರ್​ಗಳಲ್ಲಿ ಕೇವಲ 16 ರನ್ ನೀಡಿ 3 ವಿಕೆಟ್ ಕಬಳಿಸಿ ಮಿಂಚಿದ್ದರು.

ಇದನ್ನೂ ಓದಿ: 5126 ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ಮೊಹಮ್ಮದ್ ಶಮಿ

ಇದೀಗ ಉಭಯ ತಂಡಗಳು 8 ವರ್ಷಗಳ ಬಳಿಕ ಮತ್ತೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಮುಖಾಮುಖಿಯಾಗುತ್ತಿದೆ. ಈ ಬಾರಿ ಕೂಡ ಭಾರತ ತಂಡವನ್ನು ಪಾಕಿಸ್ತಾನ್ ಸೋಲಿಸಲಿದೆ ಎಂದು ಮೊಹಮ್ಮದ್ ಅಮೀರ್ ಭವಿಷ್ಯ ನುಡಿದಿದ್ದಾರೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ