AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ 10 ಎಸೆತಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಅಮಿರ್!

ದಿ ಹಂಡ್ರೆಡ್ ಲೀಗ್​ನ 17ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟ್ರೆಂಟ್ ರಾಕೆಟ್ಸ್ ತಂಡವು 100 ಎಸೆತಗಳಲ್ಲಿ 146 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಲೀಡ್ಸ್ ತಂಡ 100 ಎಸೆತಗಳಲ್ಲಿ 141 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟ್ರೆಂಟ್ ರಾಕೆಟ್ಸ್ ತಂಡ 5 ರನ್​ಗಳ ರೋಚಕ ಜಯ ಸಾಧಿಸಿದೆ.

ಸತತ 10 ಎಸೆತಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಅಮಿರ್!
Mohammad Amir
ಝಾಹಿರ್ ಯೂಸುಫ್
|

Updated on: Aug 03, 2026 | 12:24 PM

Share

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ‘ದಿ ಹಂಡ್ರೆಡ್‘ ಲೀಗ್​ ಟೂರ್ನಿಯಲ್ಲಿ ಟ್ರೆಂಟ್ ರಾಕೆಟ್ಸ್ ತಂಡ ರೋಚಕ ಜಯ ಸಾಧಿಸಿದೆ. ಈ ರೋಚಕ ಗೆಲುವಿನ ರೂವಾರಿ ಮೊಹಮ್ಮದ್ ಅಮಿರ್. ನಾಟಿಂಗ್​ಹ್ಯಾಮ್​ನ ಟ್ರೆಂಟ್ ಬಿಡ್ಜ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸನ್​ರೈಸರ್ಸ್ ಲೀಡ್ಸ್ ಹಾಗೂ ಟ್ರೆಂಟ್ ರಾಕೆಟ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಟ್ರೆಂಟ್ ರಾಕೆಟ್ಸ್ ತಂಡದ ನಾಯಕ ಸ್ಯಾಮ್ ಬಿಲ್ಲಿಂಗ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟ್ರೆಂಟ್ ರಾಕೆಟ್ಸ್ ತಂಡವು 100 ಎಸೆತಗಳಲ್ಲಿ 4 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 146 ರನ್​ಗಳು ಮಾತ್ರ.

147 ರನ್​ಗಳ ಗುರಿ ಬೆನ್ನತ್ತಿದ ಸನ್​ರೈಸರ್ಸ್ ಲೀಡ್ಸ್ ತಂಡವು 80 ಎಸೆತಗಳ ಮುಕ್ತಾಯದ ವೇಳೆಗೆ 111 ರನ್​ ಕಲೆಹಾಕಿದ್ದರು. ಅದರಂತೆ ಕೊನೆಯ 20 ಎಸೆತಗಳಲ್ಲಿ ಕೇವಲ 35 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ದಾಳಿಗಿಳಿದ ಮೊಹಮ್ಮದ್ ಅಮಿರ್ ಸತತ 10 ಎಸೆತಗಳನ್ನು ಎಸೆದು ನೀಡಿದ್ದು ಕೇವಲ 10 ರನ್​ಗಳು ಮಾತ್ರ. ಇದರ ನಡುವೆ ಹ್ಯಾರಿ ಬ್ರೂಕ್ (46) ಹಾಗೂ ಮಿಚೆಲ್ ಮಾರ್ಷ್ (41) ಅವರ ವಿಕೆಟ್​ಗಳನ್ನು ಸಹ ಪಡೆದರು.

ಮೊಹಮ್ಮದ್ ಅಮಿರ್ ಅವರ ಈ ಮಾರಕ ದಾಳಿಯಿಂದ ಕಂಗೆಟ್ಟ ಟ್ರೆಂಟ್ ರಾಕೆಟ್ಸ್ ತಂಡವು ಸೋಲಿನತ್ತ ಮುಖ ಮಾಡಿತು. ಅಂತಿಮವಾಗಿ 100 ಎಸೆತಗಳಲ್ಲಿ 4 ವಿಕೆಟ್ ಕಳೆದುಕೊಂಡು 141 ರನ್​ಗಳಿಸುವ ಮೂಲಕ 5 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ರೋಚಕ ಗೆಲುವಿನೊಂದಿಗೆ ಟ್ರೆಂಟ್ ರಾಕೆಟ್ಸ್ ತಂಡವು ಅಂಕಪಟ್ಟಿಯಲ್ಲಿ ತನ್ನ ಅಗ್ರಸ್ಥಾನವನ್ನು ಮತ್ತಷ್ಟು ಗಟ್ಟಿ ಮಾಡಿಕೊಂಡಿದೆ.

ಸತತ 10 ಎಸೆತಗಳು:

‘ದಿ ಹಂಡ್ರೆಡ್’ ನಿಯಮದ ಪ್ರಕಾರ ಬೌಲರ್ ಒಬ್ಬರಿಗೆ ಸತತವಾಗಿ 10 ಎಸೆತಗಳನ್ನು ಬೌಲ್ ಮಾಡಲು ಅವಕಾಶವಿರುತ್ತದೆ. ಪಂದ್ಯ ಕೈಜಾರುತ್ತಿರುವುದನ್ನು ಅರಿತ ಟ್ರೆಂಟ್ ರಾಕೆಟ್ಸ್ ತಂಡದ ನಾಯಕ ಸ್ಯಾಮ್ ಬಿಲ್ಲಿಂಗ್, ಚೆಂಡನ್ನು ಅನುಭವಿ ವೇಗಿ ಮೊಹಮ್ಮದ್ ಅಮಿರ್​ ಕೈಗಿಟ್ಟರು. ಅಮಿರ್ ಎಸೆದ ಆ 10 ಎಸೆತಗಳು ಪಂದ್ಯದ ಚಿತ್ರಣವನ್ನೇ ಬದಲಿಸಿದವು.

ಅಮಿರ್ ತಮ್ಮ ಮೊದಲ 4 ಎಸೆತಗಳಲ್ಲಿ ನೀಡಿದ್ದು ಕೇವಲ 5 ರನ್​ಗಳು ಮಾತ್ರ. ಮುಂದಿನ 5 ಎಸೆತಗಳಲ್ಲಿ ರನ್ ನಿಯಂತ್ರಣ ಮುಂದುವರಿಸಿದ ಅಮಿರ್, ಅಪಾಯಕಾರಿ ಮಿಚೆಲ್ ಮಾರ್ಷ್ ಅವರಿಗೆ ಪೆವಿಲಿಯನ್ ಹಾದಿ ತೋರಿಸಿದರು.

ಇದನ್ನೂ ಓದಿ: ಟೀಮ್ ಇಂಡಿಯಾಗೆ ಜಮ್ಮು-ಕಾಶ್ಮೀರ ವೇಗಿ ಎಂಟ್ರಿ

ಅಲ್ಲದೆ ಸತತ 10 ಎಸೆತಗಳಲ್ಲಿ ಕೇವಲ 10 ರನ್ ನೀಡಿ 2 ಪ್ರಮುಖ ವಿಕೆಟ್ ಪಡೆಯುವ ಮೂಲಕ ಮೊಹಮ್ಮದ್ ಅಮಿರ್ ಟ್ರೆಂಟ್ ರಾಕೆಟ್ಸ್ ತಂಡಕ್ಕೆ ರೋಚಕ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು.

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ