Mohammad Hafeez Retires: ಅಂತರರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ಘೋಷಿಸಿದ ಪಾಕಿಸ್ತಾನದ ಸ್ಟಾರ್ ಕ್ರಿಕೆಟರ್ ಮೊಹಮ್ಮದ್ ಹಫೀಜ್

Mohammad Hafeez retirement: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಹಫೀಜ್ ಎಲ್ಲ ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ವಿದಾಯ ಹೇಳಿದ್ದಾರೆ. ಇವರು 2018 ರಲ್ಲಿ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ನೀಡಿದ್ದರು. ಇದೀಗ ಏಕದಿನ ಮತ್ತು ಟಿ20 ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ಹಿಂದೆ ಸರಿಯುವುದಾಗಿ ಘೋಷಣೆ ಮಾಡಿದ್ದಾರೆ.

Mohammad Hafeez Retires: ಅಂತರರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ಘೋಷಿಸಿದ ಪಾಕಿಸ್ತಾನದ ಸ್ಟಾರ್ ಕ್ರಿಕೆಟರ್ ಮೊಹಮ್ಮದ್ ಹಫೀಜ್
Mohammad Hafeez retire
Follow us
TV9 Web
| Updated By: Vinay Bhat

Updated on:Jan 03, 2022 | 11:29 AM

ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಹಫೀಜ್ ಎಲ್ಲ ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ವಿದಾಯ ಹೇಳಿದ್ದಾರೆ. ಇವರು 2018 ರಲ್ಲಿ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ನೀಡಿದ್ದರು. ಇದೀಗ ಏಕದಿನ ಮತ್ತು ಟಿ20 ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ಹಿಂದೆ ಸರಿಯುವುದಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ತಮ್ಮ 18 ವರ್ಷಗಳ ಕ್ರಿಕೆಟ್ ಬದುಕಿಗೆ ಅಂತ್ಯ ಹಾಡಿದ್ದಾರೆ. ಆಲ್ರೌಂಡರ್ ಆಗಿರುವ ಹಫೀಜ್ ಪಾಕಿಸ್ತಾನ ಪರ 392 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. 12,789 ರನ್ ಬಾರಿಸಿದ್ದು 253 ವಿಕೆಟ್ ಕಬಳಿಸಿದ್ದಾರೆ. ಒಟ್ಟು 55 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 218 ಏಕದಿನ ಮತ್ತು 117 ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಇವರು ಪಾಕ್ ಪರ ಮೂರು ಐಸಿಸಿ ಏಕದಿನ ವಿಶ್ವಕಪ್ ಮತ್ತು ಆರು ಟಿ20 ವಿಶ್ವಕಪ್​ ಅನ್ನು ಪ್ರತಿನಿಧಿಸಿದ್ದರು.

41 ವರ್ಷದ ಹಫೀಜ್ 2003ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪದಾರ್ಪಣೆ ಗೈದಿದ್ದರು. ಕಳೆದ ಟಿ20 ವಿಶ್ವಕಪ್​ನ ಆಸ್ಟ್ರೇಲಿಯಾ ವಿರುದ್ಧದ ಸೆಮಿ ಫೈನಲ್ ಪಂದ್ಯ ಹಫೀಜ್ ಕೊನೆಯ ಅಂತರರಾಷ್ಟ್ರೀಯ ಪಂದ್ಯವಾಗಿದೆ. ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರೂ ಹಫೀಜ್ ಟಿ20 ಲೀಗ್ ಗಳಲ್ಲಿ ಆಡುವುದಾಗಿ ತಿಳಿಸಿದ್ದಾರೆ. ಪಿಎಸ್​​ಎಲ್​ನ ಲಾಹೋರ್ ಖಲಂದರ್ ತಂಡದಲ್ಲಿ ಅವರು ಮುಂದಿನ ಲೀಗ್ ಆಡಲಿದ್ದಾರೆ. 32 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದವರ ಪಟ್ಟಿಯಲ್ಲಿ ಪಾಕ್ ಪರ ಇವರು ನಾಲ್ಕನೇ ಸ್ಥಾನದಲ್ಲಿದ್ದಾರೆ.

Published On - 10:58 am, Mon, 3 January 22

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ