AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammad Rizwan: ಭಾರತದ ವಿರುದ್ಧ ಪಾಕಿಸ್ತಾನ್ ಸೋತರೂ ಈ ಕಾರಣಕ್ಕೆ ನನಗೆ ಖುಷಿಯಾಗುತ್ತಿತ್ತು…ಆದರೆ

Mohammad Rizwan: ಈ ಬಾರಿಯ ಏಷ್ಯಾಕಪ್​ನಲ್ಲಿ ಭರ್ಜರಿ ಫಾರ್ಮ್​ನಲ್ಲಿರುವ ರಿಜ್ವಾನ್, ಸೂಪರ್-4 ಹಂತದಲ್ಲಿ ಭಾರತದ ವಿರುದ್ಧ 71 ಬಾರಿಸಿ ಮಿಂಚಿದ್ದರು. ಹಾಗೆಯೇ ಗ್ರೂಪ್ ಹಂತದಲ್ಲಿ ಭಾರತದ ವಿರುದ್ಧ 43 ರನ್ ಗಳಿಸಿದ್ದರು.

Mohammad Rizwan: ಭಾರತದ ವಿರುದ್ಧ ಪಾಕಿಸ್ತಾನ್ ಸೋತರೂ ಈ ಕಾರಣಕ್ಕೆ ನನಗೆ ಖುಷಿಯಾಗುತ್ತಿತ್ತು...ಆದರೆ
Mohammad Rizwan
TV9 Web
| Edited By: |

Updated on: Sep 11, 2022 | 1:54 PM

Share

ಪಾಕಿಸ್ತಾನ್ ತಂಡದ ಆರಂಭಿಕ ಆಟಗಾರ ಮೊಹಮ್ಮದ್ ರಿಜ್ವಾನ್ (Mohammad Rizwan) ಅದ್ಭುತ ಫಾರ್ಮ್​ನಲ್ಲಿದ್ದಾರೆ. ಅವರ ಈ ಭರ್ಜರಿ ಪ್ರರ್ದಶನದಿಂದಾಗಿ ಇದೀಗ ಪಾಕಿಸ್ತಾನ ತಂಡ ಏಷ್ಯಾಕಪ್‌ನಲ್ಲಿ ಫೈನಲ್ ತಲುಪಿದೆ. ಭಾನುವಾರ ದುಬೈ ಮೈದಾನದಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಪಾಕ್ ತಂಡವು ಶ್ರೀಲಂಕಾವನ್ನು ಎದುರಿಸಲಿದೆ. ಫೈನಲ್​ನಲ್ಲೂ ಪಾಕ್​ ಪಾಲಿಗೆ ರಿಜ್ವಾನ್ ಟ್ರಂಪ್ ಕಾರ್ಡ್​. ಏಕೆಂದರೆ ಈ ಬಾರಿಯ ಟೂರ್ನಿಯಲ್ಲಿ ಪಾಕ್ ಪರ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದೆ ರಿಜ್ವಾನ್. ಹೀಗಾಗಿ ಕೊನೆಯ ಮ್ಯಾಚ್​ನಲ್ಲೂ ಪಾಕ್ ತಂಡ ಅವರನ್ನೇ ಅವಲಂಭಿಸಲಿದೆ. ಈ ಫೈನಲ್‌ಗೂ ಮುನ್ನ ರಿಜ್ವಾನ್ ಕುತೂಹಲಕಾರಿ ಸಂಗತಿಯೊಂದನ್ನು ಬಹಿರಂಗಪಡಿಸಿದ್ದಾರೆ. ಬಾಲ್ಯದಲ್ಲಿ ಪಾಕಿಸ್ತಾನ ತಂಡ ಭಾರತದ ವಿರುದ್ಧ ಆಡುವಾಗ ತುಂಬಾ ಭಯಪಡುತ್ತಿದ್ದ ನೆನಪುಗಳನ್ನು ಸ್ಮರಿಸಿಕೊಂಡಿದ್ದಾರೆ.

ವಿಶೇಷ ಎಂದರೆ ಮೊಹಮ್ಮದ್ ರಿಜ್ವಾನ್ ಭಾರತದ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರ ದೊಡ್ಡ ಅಭಿಮಾನಿ. ಕ್ರಿಕ್‌ಬಜ್‌ನ ಸುದ್ದಿಯ ಪ್ರಕಾರ, ರಿಜ್ವಾನ್ ಅವರು ಬಾಲ್ಯದಲ್ಲಿ ಸಚಿನ್ ಅವರನ್ನು ಇಷ್ಟಪಡುತ್ತಿದ್ದರು. ಆದರೆ ಸಚಿನ್ ಪಾಕಿಸ್ತಾನದ ವಿರುದ್ಧ ರನ್ ಗಳಿಸಿದಾಗ ಅದನ್ನು ಹೇಗೆ ಆಚರಿಸುವುದು ಎಂಬ ಸಂದಿಗ್ಧತೆ ಸೃಷ್ಟಿಯಾಗುತ್ತಿತ್ತು ಎಂದು ರಿಜ್ವಾನ್ ಹೇಳಿದ್ದಾರೆ. ಹೀಗಾಗಿ ಸಚಿನ್ ತೆಂಡೂಲ್ಕರ್ ಪಾಕ್ ವಿರುದ್ಧ ಭರ್ಜರಿ ಬ್ಯಾಟಿಂಗ್ ನಡೆಸುತ್ತಿದ್ದಾಗ ನಾನು ಭಯಪಡುತ್ತಿದ್ದೆ ಎಂದಿದ್ದಾರೆ.

ಸಚಿನ್ ತೆಂಡೂಲ್ಕರ್ ಬಗ್ಗೆ ಮಾತನಾಡಿದ ರಿಜ್ವಾನ್, ಪಾಕಿಸ್ತಾನದ ವಿರುದ್ಧ ಅವರ ದಾಖಲೆ ತುಂಬಾ ಚೆನ್ನಾಗಿದೆ. 2003 ಮತ್ತು 2011ರ ವಿಶ್ವಕಪ್‌ನಲ್ಲಿ ಪಾಕ್ ವಿರುದ್ದ ಸಚಿನ್ ಅವರ ಬ್ಯಾಟಿಂಗ್ ಅದ್ಭುತವಾಗಿತ್ತು. ಆದರೆ ನನಗೆ ಅದನ್ನು ಸಂಭ್ರಮಿಸಲು ಸಾಧ್ಯವಾಗುತ್ತಿರಲಿಲ್ಲ. ಏಕೆಂದರೆ ಸೋತಿರುವುದು ನಮ್ಮ ತಂಡ ಅಲ್ಲವೇ ಎಂದು ಮೊಹಮ್ಮದ್ ರಿಜ್ವಾನ್ ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಈ ಬಾರಿಯ ಏಷ್ಯಾಕಪ್​ನಲ್ಲಿ ಭರ್ಜರಿ ಫಾರ್ಮ್​ನಲ್ಲಿರುವ ರಿಜ್ವಾನ್, ಸೂಪರ್-4 ಹಂತದಲ್ಲಿ ಭಾರತದ ವಿರುದ್ಧ 71 ಬಾರಿಸಿ ಮಿಂಚಿದ್ದರು. ಹಾಗೆಯೇ ಗ್ರೂಪ್ ಹಂತದಲ್ಲಿ ಭಾರತದ ವಿರುದ್ಧ 43 ರನ್ ಗಳಿಸಿದ್ದರು. ಈ ಅತ್ಯುತ್ತಮ ಇನ್ನಿಂಗ್ಸ್‌ಗಳ ಆಧಾರದ ಮೇಲೆ, ರಿಜ್ವಾನ್ ವಿಶ್ವದ ನಂಬರ್ ಒನ್ ಟಿ20 ಬ್ಯಾಟ್ಸ್‌ಮನ್ ಆಗಿದ್ದಾರೆ. ಇದೀಗ ಒಟ್ಟು 226 ರನ್ ಗಳಿಸಿರುವ ಪಾಕ್ ಆರಂಭಿಕ ಆಟಗಾರ ಈ ಬಾರಿಯ ಏಷ್ಯಾಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. ಸದ್ಯ ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮುಂಚೂಣಿಯಲ್ಲಿದ್ದು, ಫೈನಲ್‌ನಲ್ಲಿ ಕನಿಷ್ಠ 51 ರನ್​ ಬಾರಿಸಿದರೆ ವಿರಾಟ್ ಕೊಹ್ಲಿಯನ್ನು ಮೊಹಮ್ಮದ್ ರಿಜ್ವಾನ್ ಹಿಂದಿಕ್ಕಲಿದ್ದಾರೆ.

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?