AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammad Shami: ನ್ಯೂಝಿಲೆಂಡ್ ವಿರುದ್ಧದ ಸರಣಿಗೂ ಮೊಹಮ್ಮದ್ ಶಮಿ ಡೌಟ್..!

Mohammed Shami: 2023ರ ಏಕದಿನ ವಿಶ್ವಕಪ್​ನಲ್ಲಿ ಕರಾರುವಾಕ್ ದಾಳಿ ಮೂಲಕ ಮೊಹಮ್ಮದ್ ಶಮಿ ಸಂಚಲನ ಸೃಷ್ಟಿಸಿದ್ದರು. 7 ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿದಿದ್ದ ಶಮಿ ಒಟ್ಟು 24 ವಿಕೆಟ್ ಕಬಳಿಸುವ ಮೂಲಕ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಇದಾದ ಬಳಿಕ ಮೊಹಮ್ಮದ್ ಶಮಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿಲ್ಲ.

Mohammad Shami: ನ್ಯೂಝಿಲೆಂಡ್ ವಿರುದ್ಧದ ಸರಣಿಗೂ ಮೊಹಮ್ಮದ್ ಶಮಿ ಡೌಟ್..!
Mohammad Shami
Follow us
ಝಾಹಿರ್ ಯೂಸುಫ್
|

Updated on: Sep 15, 2024 | 11:01 AM

ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲೂ ಕಾಣಿಸಿಕೊಳ್ಳುವುದು ಅನುಮಾನ. ಅಕ್ಟೋಬರ್ 16 ರಿಂದ ಶುರುವಾಗಲಿರುವ ಈ ಸರಣಿಗೂ ಮುನ್ನ ಶಮಿ ಸಂಪೂರ್ಣ ಫಿಟ್​ನೆಸ್ ಸಾಧಿಸುವ ಸಾಧ್ಯತೆಯಿಲ್ಲ. ಅತ್ತ ಪರಿಪೂರ್ಣ ಫಿಟ್​ನೆಸ್​ನೊಂದಿಗೆ ಮರಳಲು ಮೊಹಮ್ಮದ್ ಶಮಿ ಕೂಡ ನಿರ್ಧರಿಸಿದ್ದಾರೆ. ಹೀಗಾಗಿಯೇ ಕಿವೀಸ್ ವಿರುದ್ಧದ ಸರಣಿಯಲ್ಲಿ ಭಾರತದ ಅನುಭವ ವೇಗಿ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ.

ಏಕದಿನ ವಿಶ್ವಕಪ್ 2023 ರ ವೇಳೆ​ ಮೊಹಮ್ಮದ್ ಶಮಿ ಅವರ ಪಾದದಲ್ಲಿ ನೋವು ಕಾಣಿಸಿಕೊಂಡಿತ್ತು. ಈ ನೋವಿನ ನಡುವೆಯೂ ಅವರು ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಂಡು ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. ಇದರಿಂದ ಅವರ ಪಾದದ ಸಮಸ್ಯೆಯು ಬಿಗಡಾಯಿಸಿದೆ.

ಹೀಗಾಗಿ ಅವರು ಏಕದಿನ ವಿಶ್ವಕಪ್ ಬಳಿಕ ಯಾವುದೇ ಪಂದ್ಯವಾಡಿರಲಿಲ್ಲ. ಅಲ್ಲದೆ ವೈದ್ಯಕೀಯ ಪರಿಶೀಲನೆ ವೇಳೆ ಶಸ್ತ್ರಚಿಕಿತ್ಸೆ ಮಾಡಬೇಕಾದ ಅನಿವಾರ್ಯತೆ ಕಂಡು ಬಂದಿತ್ತು. ಅದರಂತೆ ಕಳೆದ ಫೆಬ್ರವರಿ ತಿಂಗಳಲ್ಲಿ ಮೊಹಮ್ಮದ್ ಶಮಿ ಸರ್ಜರಿಗೆ ಒಳಗಾಗಿದ್ದರು. ಇದೇ ಕಾರಣದಿಂದಾಗಿ ಐಪಿಎಲ್​ನಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಮೊಹಮ್ಮದ್ ಶಮಿ ಫಿಟ್​ ಆಗಿದ್ದು, ಬೌಲಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಆದರೆ ಶಮಿ ಸಂಪೂರ್ಣ ಫಿಟ್​ನೆಸ್ ಸಾಧಿಸದೇ ಟೀಮ್ ಇಂಡಿಯಾಗೆ ಮರಳುವ ಇರಾದೆಯಲ್ಲಿಲ್ಲ.

ಈ ಬಗ್ಗೆ ಮಾತನಾಡಿರುವ ಮೊಹಮ್ಮದ್ ಶಮಿ, ನಾನು ಸ್ವಲ್ಪ ಸಮಯದಿಂದ ಭಾರತ ತಂಡದಿಂದ ಹೊರಗುಳಿದಿದ್ದೇನೆ. ಹೀಗಾಗಿ ಶೀಘ್ರದಲ್ಲೇ ಹಿಂತಿರುಗಲು ನಾನು ಶ್ರಮಿಸುತ್ತಿದ್ದೇನೆ. ಆದಾಗ್ಯೂ, ನಾನು ಕಂಬ್ಯಾಕ್ ಮಾಡುವ ವೇಳೆ ಯಾವುದೇ ಸಮಸ್ಯೆ ಇರಬಾರದೆಂದು ಬಯಸುತ್ತೇನೆ. ಸದ್ಯ ನನ್ನ ಫಿಟ್‌ನೆಸ್‌ಗಾಗಿ ಇನ್ನಷ್ಟು ಕಾರ್ಯ ನಿರ್ವಹಿಸಬೇಕಿದೆ ಎಂದು ತಿಳಿಸಿದ್ದಾರೆ.

ನಾನು ಎಷ್ಟು ಬಲಶಾಲಿಯಾಗಿ ಹಿಂತಿರುಗುತ್ತೇನೆ, ಅದು ನನಗೆ ಉತ್ತಮ. ಬಾಂಗ್ಲಾದೇಶ್, ನ್ಯೂಝಿಲೆಂಡ್ ಅಥವಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯಾಗಿರಲಿ, ಮತ್ತೆ ಗಾಯಗೊಳ್ಳುವ ಅಪಾಯವನ್ನು ಎದುರಿಸಲು ನಾನು ಬಯಸುವುದಿಲ್ಲ. ನಾನು ಈಗಾಗಲೇ ಬೌಲಿಂಗ್ ಪ್ರಾರಂಭಿಸಿದ್ದೇನೆ. ಆದರೆ ನಾನು 100% ಫಿಟ್ ಆಗುವವರೆಗೆ ನಾನು ಕಂಬ್ಯಾಕ್ ಮಾಡುವುದಿಲ್ಲ ಎಂದು ಕ್ರಿಕೆಟ್ ಅಸೋಸಿಯೇಷನ್ ​​ಆಫ್ ಬೆಂಗಾಲ್ (ಸಿಎಬಿ) ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ಮೊಹಮ್ಮದ್ ಶಮಿ ಹೇಳಿದರು.

ಇದನ್ನೂ ಓದಿ: CSK ಪರ ಆಡಬೇಕು… RCB ಆಟಗಾರನ ಹೇಳಿಕೆ..!

ಈ ಹೇಳಿಕೆಯ ಬೆನ್ನಲ್ಲೇ ಮೊಹಮ್ಮದ್ ಶಮಿ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಅಲಭ್ಯರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಇನ್ನು ಅವರು ಭಾರತ ತಂಡಕ್ಕೆ ಕಂಬ್ಯಾಕ್ ಮಾಡಬೇಕಿದ್ದರೆ ರಣಜಿ ಟೂರ್ನಿಯನ್ನು ಆಡಲೇಬೇಕು. ಹೀಗಾಗಿ ಈ ವರ್ಷಾಂತ್ಯದ ವೇಳೆಗೆ ಅವರು ಮತ್ತೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳಬಹುದು.

ಮೊಹಮ್ಮದ್ ಶಮಿ ಕಂಬ್ಯಾಕ್ ಯಾವಾಗ?

ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿರುವ ಮೊಹಮ್ಮದ್ ಶಮಿ ನ್ಯೂಝಿಲೆಂಡ್ ಸರಣಿಗೂ ಅಲಭ್ಯರಾಗುವ ಸಾಧ್ಯತೆಯಿದೆ. ಈ ಹಿನ್ನಲೆಯಲ್ಲಿ ಅವರ ಕಂಬ್ಯಾಕ್ ಅನ್ನು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ನಿರೀಕ್ಷಿಸಬಹುದು. ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಈ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಈ ವೇಳೆಗೆ ಮೊಹಮ್ಮದ್ ಶಮಿ ಸಂಪೂರ್ಣ ಫಿಟ್​ನೆಸ್ ಸಾಧಿಸಲಿದ್ದಾರೆ. ಹೀಗಾಗಿ ಆಸೀಸ್ ವಿರುದ್ಧದ ಸರಣಿಯೊಂದಿಗೆ ಶಮಿ ಕಂಬ್ಯಾಕ್ ಮಾಡುವುದು ಖಚಿತ ಎನ್ನಬಹುದು.

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ