ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆ ಮಾಡಲಾದ ಭಾರತ ತಂಡದಲ್ಲಿ ಮೊಹಮ್ಮದ್ ಸಿರಾಜ್ಗೆ ಸ್ಥಾನ ಲಭಿಸಿಲ್ಲ. 15 ಸದಸ್ಯರ ಈ ತಂಡದಲ್ಲಿ ಮೊಹಮ್ಮದ್ ಸಿರಾಜ್ ಬದಲಿಗೆ ಅರ್ಷದೀಪ್ ಸಿಂಗ್ ಅವರನ್ನು ಆಯ್ಕೆ ಮಾಡಲಾಗಿದೆ. ಇದರೊಂದಿಗೆ ಕಳೆದ ಕೆಲ ವರ್ಷಗಳಿಂದ ಟೀಮ್ ಇಂಡಿಯಾದ ಖಾಯಂ ಸದಸ್ಯರಾಗಿದ್ದ ಸಿರಾಜ್ ತಂಡದಿಂದ ಹೊರಬಿದ್ದಂತಾಗಿದೆ.
ಇತ್ತ ಭಾರತ ತಂಡದಿಂದ ಹೊರಬಿದ್ದಿರುವ ಸಿರಾಜ್, ರಣಜಿ ಟೂರ್ನಿಯತ್ತ ಮುಖ ಮಾಡಲು ನಿರ್ಧರಿಸಿದ್ದಾರೆ. ನ್ಯೂಸ್18 ವರದಿ ಪ್ರಕಾರ, ಟೀಮ್ ಇಂಡಿಯಾ ವೇಗಿ ರಣಜಿ ಟೂರ್ನಿಯ ದ್ವಿತೀಯಾರ್ಧದ ಪಂದ್ಯದಲ್ಲಿ ಹೈದರಾಬಾದ್ ಪರ ಕಣಕ್ಕಿಳಿಯಲಿದ್ದಾರೆ.
ಜನವರಿ 23 ರಿಂದ ಶುರುವಾಗಲಿರುವ ರಣಜಿ ಟೂರ್ನಿಯ ದ್ವಿತೀಯ ಹಂತದ ಮೊದಲ ಪಂದ್ಯಕ್ಕೆ ಸಿರಾಜ್ ಲಭ್ಯರಿಲ್ಲ ಎಂದು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ (ಎಚ್ಸಿಎ) ಅಧ್ಯಕ್ಷ ಜಗನ್ ಮೋಹನ್ ರಾವ್ ಐಎಎನ್ಎಸ್ಗೆ ತಿಳಿಸಿದ್ದಾರೆ. ಇದಾಗ್ಯೂ ಅವರು ಮುಂದಿನ ಪಂದ್ಯದ ವೇಳೆ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.
ಅದರಂತೆ ಜನವರಿ 30 ರಿಂದ ನಾಗ್ಪುರದಲ್ಲಿ ಪ್ರಾರಂಭವಾಗುವ ವಿದರ್ಭ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಹೈದರಾಬಾದ್ ಪರ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ 4 ವರ್ಷಗಳ ಬಳಿಕ ಮತ್ತೆ ದೇಶೀಯ ಅಂಗಳದಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಮೂರು ಏಕದಿನ ಪಂದ್ಯಗಳು ಮತ್ತು ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡದಲ್ಲಿ ಸಿರಾಜ್ ಅವರನ್ನು ಆಯ್ಕೆ ಮಾಡಲಾಗಿಲ್ಲ ಎಂಬುದು ಒಂದೆಡೆಯಾದರೆ, 2022 ರಿಂದ 2024 ರವರೆಗಿನ ಏಕದಿನ ಪಂದ್ಯಗಳಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವೇಗಿಗಳ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನದಲ್ಲಿದ್ದಾರೆ.
ಕಳೆದ ಎರಡು ವರ್ಷಗಳಲ್ಲಿ ಸಿರಾಜ್ ಕೇವಲ 22.97 ರ ಸರಾಸರಿಯಲ್ಲಿ ಒಟ್ಟು 71 ವಿಕೆಟ್ಗಳನ್ನು ಪಡೆದಿದ್ದಾರೆ. ಈ ವಿಕೆಟ್ಗಳೊಂದಿಗೆ ಇದೀಗ ಐಸಿಸಿ ಬೌಲರ್ಗಳ ಶ್ರೇಯಾಂಕದಲ್ಲಿ 8ನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಇದಾಗ್ಯೂ ಅವರನ್ನು ತಂಡಕ್ಕೆ ಆಯ್ಕೆ ಮಾಡದಿರುವುದು ಅಚ್ಚರಿ ಮೂಡಿಸಿದೆ.
ಅತ್ತ ಜಸ್ಪ್ರೀತ್ ಬುಮ್ರಾ ಇಂಗ್ಲೆಂಡ್ ವಿರುದ್ಧದ ಸರಣಿಗೆ ಅಲಭ್ಯರಾಗಿದ್ದರೂ, ಮೊಹಮ್ಮದ್ ಸಿರಾಜ್ಗೆ ಸ್ಥಾನ ಕಲ್ಪಿಸಲಾಗಿಲ್ಲ. ಬದಲಾಗಿ ಹರ್ಷೀತ್ ರಾಣಾ ಅವರನ್ನು ಬದಲಿ ಬೌಲರ್ ಆಗಿ ಆಯ್ಕೆ ಮಾಡಲಾಗಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜನವರಿ 22 ರಿಂದ ಆರಂಭವಾಗಲಿದೆ. ಈ ಸರಣಿಗೆ ಮೊದಲಿಗೆ 5 ಪಂದ್ಯಗಳ ಟಿ20 ಪಂದ್ಯಗಳನ್ನು ಆಡಲಾಗುತ್ತಿದ್ದು, ಇದಾದ ಬಳಿಕ ಮೂರು ಮ್ಯಾಚ್ಗಳ ಏಕದಿನ ಸರಣಿ ನಡೆಯಲಿದೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.
ಇದನ್ನೂ ಓದಿ: Champions Trophy 2025: ಟೀಮ್ ಇಂಡಿಯಾದಲ್ಲಿ 6 ಹಳೆ ಹುಲಿಗಳು