ಬರೀ ಸುಳ್ಳು… ಫೇಕ್ ನ್ಯೂಸ್ ವಿರುದ್ಧ ಕಿಡಿಕಾರಿದ ಮೊಹಮ್ಮದ್ ಶಮಿ

Mohammed Shami: 2023ರ ಏಕದಿನ ವಿಶ್ವಕಪ್​ನಲ್ಲಿ ಕರಾರುವಾಕ್ ದಾಳಿ ಮೂಲಕ ಮೊಹಮ್ಮದ್ ಶಮಿ ಸಂಚಲನ ಸೃಷ್ಟಿಸಿದ್ದರು. 7 ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿದಿದ್ದ ಶಮಿ ಒಟ್ಟು 24 ವಿಕೆಟ್ ಕಬಳಿಸುವ ಮೂಲಕ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಇದಾದ ಬಳಿಕ ಅವರು ಟೀಮ್ ಇಂಡಿಯಾ ಪರ ಕಣಕ್ಕಿಳಿದಿಲ್ಲ.

ಬರೀ ಸುಳ್ಳು... ಫೇಕ್ ನ್ಯೂಸ್ ವಿರುದ್ಧ ಕಿಡಿಕಾರಿದ ಮೊಹಮ್ಮದ್ ಶಮಿ
Mohammed Shami
Follow us
ಝಾಹಿರ್ ಯೂಸುಫ್
|

Updated on: Oct 03, 2024 | 1:03 PM

ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಸುಳ್ಳು ಸುದ್ದಿಗಳ ವಿರುದ್ಧ ಕಿಡಿಕಾರಿದ್ದಾರೆ. ಮುಂಬರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಶಮಿ ಅಲಭ್ಯರಾಗಲಿದ್ದಾರೆ ಎಂಬ ಸುದ್ದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಭಾರತೀಯ ಬೌಲರ್, ಇವೆಲ್ಲವೂ ಕೇವಲ ಫೇಕ್ ನ್ಯೂಸ್​ಗಳು. ಇಂತಹ ವದಂತಿಗಳನ್ನು ಹರಡುವುದನ್ನು ದಯವಿಟ್ಟು ನಿಲ್ಲಿಸಿ ಎಂದು ಸೋಷಿಯಲ್ ಮೀಡಿಯಾ ಮೂಲಕ ಮನವಿ ಮಾಡಿದ್ದಾರೆ.

2023ರ ಏಕದಿನ ವಿಶ್ವಕಪ್​ ವೇಳೆ ಗಾಯಗೊಂಡಿದ್ದ ಮೊಹಮ್ಮದ್ ಶಮಿ ಕಳೆದ ಕೆಲ ತಿಂಗಳಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದಾರೆ. ಅಲ್ಲದೆ ಪಾದದ ಶಸ್ತ್ರಚಿಕಿತ್ಸೆಯ ಬಳಿಕ ಇದೀಗ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸವನ್ನು ಸಹ ಆರಂಭಿಸಿದ್ದಾರೆ. ಇದಾಗ್ಯೂ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸದೇ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುವುದಿಲ್ಲ ಎಂದು ತಿಳಿಸಿದ್ದರು. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಅವರು ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ.

ಇದರ ನಡುವೆ ಮೊಹಮ್ಮದ್ ಶಮಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಗೂ ಅಲಭ್ಯರಾಗಲಿದ್ದಾರೆ. ಮೊಣಕಾಲಿನ ಗಾಯದ ಕಾರಣ ಅವರು ನವೆಂಬರ್​ನಲ್ಲಿ ಆರಂಭವಾಗಲಿರುವ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದವು. ಈ ಸುದ್ದಿಗಳನ್ನು ಅಲ್ಲಗಳೆದಿರುವ ಮೊಹಮ್ಮದ್ ಶಮಿ, ಇಂತಹ ಸುದ್ದಿಗಳಿಗೆ ಗಮನ ಕೊಡಬೇಡಿ ಎಂದು ಅಭಿಮಾನಿಗಳಿಗೆ ಕೇಳಿಕೊಂಡಿದ್ದಾರೆ.

ಇದೆಂತಹ ಆಧಾರರಹಿತ ವದಂತಿ? ನಾನು ಕಷ್ಟಪಟ್ಟು ಕೆಲಸ ಮಾಡುತ್ತಿದ್ದೇನೆ. ಚೇತರಿಸಿಕೊಳ್ಳಲು ನನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದೇನೆ. ನಾನು ಬಾರ್ಡರ್ ಗವಾಸ್ಕರ್ ಸರಣಿಯಿಂದ ಹೊರಗುಳಿದಿರುವ ಬಗ್ಗೆ ಬಿಸಿಸಿಐ ಆಗಲಿ ಅಥವಾ ನಾನಾಗಲಿ ಹೇಳಿಲ್ಲ. ಅನಧಿಕೃತ ಮೂಲಗಳಿಂದ ಬರುವ ಇಂತಹ ಸುದ್ದಿಗಳ ಬಗ್ಗೆ ಗಮನ ಹರಿಸುವುದನ್ನು ನಿಲ್ಲಿಸಬೇಕೆಂದು ನಾನು ಸಾರ್ವಜನಿಕರಲ್ಲಿ ವಿನಂತಿಸುತ್ತೇನೆ. ದಯವಿಟ್ಟು ಇಂತಹ ವದಂತಿಗಳನ್ನು ನಿಲ್ಲಿಸಿ…ಇಂತಹ ಸುಳ್ಳು ಸುದ್ದಿಗಳನ್ನು ಹರಡಬೇಡಿ ಎಂದು ಮೊಹಮ್ಮದ್ ಶಮಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಮೊಹಮ್ಮದ್ ಶಮಿ ಗಾಯಗೊಂಡಿದ್ದೇಗೆ?

ಏಕದಿನ ವಿಶ್ವಕಪ್ 2023 ರ ಪಂದ್ಯದ ವೇಳೆ​ ಮೊಹಮ್ಮದ್ ಶಮಿ ಅವರ ಪಾದದಲ್ಲಿ ನೋವು ಕಾಣಿಸಿಕೊಂಡಿತ್ತು. ಈ ನೋವಿನ ನಡುವೆಯೂ ಅವರು ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಂಡು ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. ಇದರಿಂದ ಅವರ ಪಾದದ ಸಮಸ್ಯೆಯು ಬಿಗಡಾಯಿಸಿದೆ. ಹೀಗಾಗಿ ಅವರು ಏಕದಿನ ವಿಶ್ವಕಪ್ ಬಳಿಕ ಯಾವುದೇ ಪಂದ್ಯವಾಡಿರಲಿಲ್ಲ. ಅಲ್ಲದೆ ವೈದ್ಯಕೀಯ ಪರಿಶೀಲನೆ ವೇಳೆ ಶಸ್ತ್ರಚಿಕಿತ್ಸೆ ಮಾಡಬೇಕಾದ ಅನಿವಾರ್ಯತೆ ಕಂಡು ಬಂದಿತ್ತು.

ಇದನ್ನೂ ಓದಿ: 11 ಎಸೆತ​ಗಳಲ್ಲಿ 63 ರನ್​: ಸಿಡಿಲಬ್ಬರದ ಶತಕ ಸಿಡಿಸಿದ ಮಾರ್ಟಿನ್ ಗಪ್ಟಿಲ್

ಅದರಂತೆ ಕಳೆದ ಫೆಬ್ರವರಿ ತಿಂಗಳಲ್ಲಿ ಮೊಹಮ್ಮದ್ ಶಮಿ ಸರ್ಜರಿಗೆ ಒಳಗಾಗಿದ್ದರು. ಇದೇ ಕಾರಣದಿಂದಾಗಿ ಐಪಿಎಲ್​ನಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಮೊಹಮ್ಮದ್ ಶಮಿ ಫಿಟ್​ ಆಗಿದ್ದು, ಬೌಲಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಈ ಮೂಲಕ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ