AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಸ್ಟಾರ್ ಆಟಗಾರ ಡೌಟ್..!

India vs South Africa: ಏಕದಿನ ಹಾಗೂ ಟಿ20 ಸರಣಿಗಳಿಂದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ಪಾದದ ನೋವಿನ ಸಮಸ್ಯೆಯ ಕಾರಣ ಟೀಮ್ ಇಂಡಿಯಾದ ಸೆನ್ಸೇಷನ್ ವೇಗಿ ಮೊಹಮ್ಮದ್ ಶಮಿ ಕೂಡ ಸೀಮಿತ ಓವರ್​ಗಳ ಸರಣಿಯಿಂದ ಹೊರಗುಳಿದಿದ್ದಾರೆ.

IND vs SA: ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಸ್ಟಾರ್ ಆಟಗಾರ ಡೌಟ್..!
Team India
TV9 Web
| Edited By: |

Updated on: Dec 05, 2023 | 3:09 PM

Share

ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ ಸರಣಿಯು ಡಿಸೆಂಬರ್ 10 ರಿಂದ ಶುರುವಾಗಲಿದೆ. ಮೂರು ಮಾದರಿಯಲ್ಲೂ ನಡೆಯಲಿರುವ ಈ ಸರಣಿಯಲ್ಲಿ ಮೊದಲು ಟಿ20 ಪಂದ್ಯಗಳನ್ನಾಡಲಾಗುತ್ತದೆ. ಇದಾದ ಬಳಿಕ ಏಕದಿನ ಸರಣಿ ನಡೆಯಲಿದೆ. ಇನ್ನು ಡಿಸೆಂಬರ್ 26 ರಿಂದ 2 ಪಂದ್ಯಗಳ ಟೆಸ್ಟ್ ಸರಣಿ ಶುರುವಾಗಲಿದೆ. ಈ ಮೂರು ಸರಣಿಗಾಗಿ ಒಟ್ಟು 32 ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ಏಕದಿನ ಹಾಗೂ ಟಿ20 ಸರಣಿಗಳಿಂದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ಪಾದದ ನೋವಿನ ಸಮಸ್ಯೆಯ ಕಾರಣ ಟೀಮ್ ಇಂಡಿಯಾದ ಸೆನ್ಸೇಷನ್ ವೇಗಿ ಮೊಹಮ್ಮದ್ ಶಮಿ ಕೂಡ ಸೀಮಿತ ಓವರ್​ಗಳ ಸರಣಿಯಿಂದ ಹೊರಗುಳಿದಿದ್ದಾರೆ.

ಇದಾಗ್ಯೂ ಟೆಸ್ಟ್ ಸರಣಿ ವೇಳೆಗೆ ಶಮಿ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಎನ್ನಲಾಗಿತ್ತು. ಇದೇ ಕಾರಣದಿಂದಾಗಿ ಅವರಿಗೆ ಟೆಸ್ಟ್​ ತಂಡದಲ್ಲಿ ಸ್ಥಾನ ನೀಡಲಾಗಿತ್ತು. ಆದರೀಗ ಮೊಹಮ್ಮದ್ ಶಮಿ ಅವರು ಸಂಪೂರ್ಣ ಫಿಟ್​ನೆಸ್ ಹೊಂದಿದ್ದರೆ ಮಾತ್ರ ಸೌತ್ ಆಫ್ರಿಕಾಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಮೊಹಮ್ಮದ್ ಶಮಿ ಮುಂದಿನ ವಾರ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಗೆ ತೆರಳಲಿದ್ದು, ಅಲ್ಲಿ ಅವರು ಫಿಟ್​ನೆಸ್ ಮೌಲ್ಯಮಾಪನಕ್ಕೆ ಒಳಗಾಗಲಿದ್ದಾರೆ. ಈ ವೇಳೆ ಶೇ.100 ರಷ್ಟು ಫಿಟ್​ನೆಸ್ ಹೊಂದಿಲ್ಲ ಎಂದು ಕಂಡು ಬಂದರೆ ಶಮಿಯನ್ನು ಸೌತ್ ಆಫ್ರಿಕಾ ಸರಣಿಗೆ ಕಳುಹಿಸುವುದಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏಕೆಂದರೆ ಮುಂದಿನ ವರ್ಷ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ 5 ಪಂದ್ಯಗಳ ಟೆಸ್ಟ್ ಸರಣಿ ಆಡಬೇಕಿದೆ. ಈ ಪ್ರತಿಷ್ಠಿತ ಸರಣಿಯಲ್ಲಿ ಮೊಹಮ್ಮದ್ ಶಮಿಯ ಉಪಸ್ಥಿತಿಯು ಭಾರತ ತಂಡದ ಪಾಲಿಗೆ ಅತ್ಯವಶ್ಯಕ. ಹೀಗಾಗಿ ಅವರ ಫಿಟ್​ನೆಸ್ ಮೇಲೆ ಸಂಪೂರ್ಣ ನಿಗಾಯಿಡಲು ಬಿಸಿಸಿಐ ನಿರ್ಧರಿಸಿದೆ. ಹಾಗಾಗಿ ಸಂಪೂರ್ಣ ಫಿಟ್ ಆಗಿಲ್ಲ ಎಂದು ಕಂಡು ಬಂದರೆ ಶಮಿಯನ್ನು ಸೌತ್ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಯಿಂದ ಹೊರಗಿಡಲು ನಿರ್ಧರಿಸಲಾಗಿದೆ.

ಭಾರತ ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಮೊಹಮ್ಮದ್ ಶಮಿ (ಫಿಟ್​ನೆಸ್ ಟೆಸ್ಟ್ ಬಳಿಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ.

ಭಾರತ – ಸೌತ್ ಆಫ್ರಿಕಾ ಸರಣಿ ವೇಳಾಪಟ್ಟಿ:

ಟಿ20 ಸರಣಿ ವೇಳಾಪಟ್ಟಿ:

  1. ಡಿಸೆಂಬರ್ 10- ಮೊದಲ ಟಿ20 ಪಂದ್ಯ (ಡರ್ಬನ್)
  2. ಡಿಸೆಂಬರ್ 12- ಎರಡನೇ ಟಿ20 ಪಂದ್ಯ (ಗೆಬರ್ಹ)
  3. ಡಿಸೆಂಬರ್ 14- ಮೂರನೇ ಟಿ20 ಪಂದ್ಯ (ಜೋಹಾನ್ಸ್​ಬರ್ಗ್​)

ಏಕದಿನ ಸರಣಿ ವೇಳಾಪಟ್ಟಿ:

  1. ಡಿಸೆಂಬರ್ 17- ಮೊದಲ ಏಕದಿನ ಪಂದ್ಯ (ಜೋಹಾನ್ಸ್​ಬರ್ಗ್​)
  2. ಡಿಸೆಂಬರ್ 19- ಎರಡನೇ ಏಕದಿನ ಪಂದ್ಯ (ಗೆಬರ್ಹ)
  3. ಡಿಸೆಂಬರ್ 21- ಮೂರನೇ ಏಕದಿನ ಪಂದ್ಯ (ಪಾರ್ಲ್​)

ಇದನ್ನೂ ಓದಿ: ಸಿಕ್ಸ್ ಸಿಡಿಸಿಯೇ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

ಟೆಸ್ಟ್ ಸರಣಿ ವೇಳಾಪಟ್ಟಿ:

  1. ಡಿಸೆಂಬರ್ 26 ರಿಂದ- ಮೊದಲ ಟೆಸ್ಟ್ ಪಂದ್ಯ (ಸೆಂಚುರಿಯನ್)
  2. ಜನವರಿ 3 ರಿಂದ- ಎರಡನೇ ಟೆಸ್ಟ್  ಪಂದ್ಯ (ಕೇಪ್​ಟೌನ್).
Follow Us
ನೇಪಾಳದಲ್ಲಿ ಮಣ್ಣಿನಡಿ ಸಿಲುಕಿದ್ದ 2 ವರ್ಷದ ಮಗುವಿನ ಅಚ್ಚರಿಯ ರಕ್ಷಣೆ
ನೇಪಾಳದಲ್ಲಿ ಮಣ್ಣಿನಡಿ ಸಿಲುಕಿದ್ದ 2 ವರ್ಷದ ಮಗುವಿನ ಅಚ್ಚರಿಯ ರಕ್ಷಣೆ
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?