ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ ಸರಣಿಯು ಡಿಸೆಂಬರ್ 10 ರಿಂದ ಶುರುವಾಗಲಿದೆ. ಮೂರು ಮಾದರಿಯಲ್ಲೂ ನಡೆಯಲಿರುವ ಈ ಸರಣಿಯಲ್ಲಿ ಮೊದಲು ಟಿ20 ಪಂದ್ಯಗಳನ್ನಾಡಲಾಗುತ್ತದೆ. ಇದಾದ ಬಳಿಕ ಏಕದಿನ ಸರಣಿ ನಡೆಯಲಿದೆ. ಇನ್ನು ಡಿಸೆಂಬರ್ 26 ರಿಂದ 2 ಪಂದ್ಯಗಳ ಟೆಸ್ಟ್ ಸರಣಿ ಶುರುವಾಗಲಿದೆ. ಈ ಮೂರು ಸರಣಿಗಾಗಿ ಒಟ್ಟು 32 ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ಏಕದಿನ ಹಾಗೂ ಟಿ20 ಸರಣಿಗಳಿಂದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ಪಾದದ ನೋವಿನ ಸಮಸ್ಯೆಯ ಕಾರಣ ಟೀಮ್ ಇಂಡಿಯಾದ ಸೆನ್ಸೇಷನ್ ವೇಗಿ ಮೊಹಮ್ಮದ್ ಶಮಿ ಕೂಡ ಸೀಮಿತ ಓವರ್ಗಳ ಸರಣಿಯಿಂದ ಹೊರಗುಳಿದಿದ್ದಾರೆ.
ಇದಾಗ್ಯೂ ಟೆಸ್ಟ್ ಸರಣಿ ವೇಳೆಗೆ ಶಮಿ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಎನ್ನಲಾಗಿತ್ತು. ಇದೇ ಕಾರಣದಿಂದಾಗಿ ಅವರಿಗೆ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಲಾಗಿತ್ತು. ಆದರೀಗ ಮೊಹಮ್ಮದ್ ಶಮಿ ಅವರು ಸಂಪೂರ್ಣ ಫಿಟ್ನೆಸ್ ಹೊಂದಿದ್ದರೆ ಮಾತ್ರ ಸೌತ್ ಆಫ್ರಿಕಾಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಮೊಹಮ್ಮದ್ ಶಮಿ ಮುಂದಿನ ವಾರ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಗೆ ತೆರಳಲಿದ್ದು, ಅಲ್ಲಿ ಅವರು ಫಿಟ್ನೆಸ್ ಮೌಲ್ಯಮಾಪನಕ್ಕೆ ಒಳಗಾಗಲಿದ್ದಾರೆ. ಈ ವೇಳೆ ಶೇ.100 ರಷ್ಟು ಫಿಟ್ನೆಸ್ ಹೊಂದಿಲ್ಲ ಎಂದು ಕಂಡು ಬಂದರೆ ಶಮಿಯನ್ನು ಸೌತ್ ಆಫ್ರಿಕಾ ಸರಣಿಗೆ ಕಳುಹಿಸುವುದಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಏಕೆಂದರೆ ಮುಂದಿನ ವರ್ಷ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ 5 ಪಂದ್ಯಗಳ ಟೆಸ್ಟ್ ಸರಣಿ ಆಡಬೇಕಿದೆ. ಈ ಪ್ರತಿಷ್ಠಿತ ಸರಣಿಯಲ್ಲಿ ಮೊಹಮ್ಮದ್ ಶಮಿಯ ಉಪಸ್ಥಿತಿಯು ಭಾರತ ತಂಡದ ಪಾಲಿಗೆ ಅತ್ಯವಶ್ಯಕ. ಹೀಗಾಗಿ ಅವರ ಫಿಟ್ನೆಸ್ ಮೇಲೆ ಸಂಪೂರ್ಣ ನಿಗಾಯಿಡಲು ಬಿಸಿಸಿಐ ನಿರ್ಧರಿಸಿದೆ. ಹಾಗಾಗಿ ಸಂಪೂರ್ಣ ಫಿಟ್ ಆಗಿಲ್ಲ ಎಂದು ಕಂಡು ಬಂದರೆ ಶಮಿಯನ್ನು ಸೌತ್ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಯಿಂದ ಹೊರಗಿಡಲು ನಿರ್ಧರಿಸಲಾಗಿದೆ.
Thanks for everyone pic.twitter.com/HGqbO3F5LQ
— 𝕸𝖔𝖍𝖆𝖒𝖒𝖆𝖉 𝖘𝖍𝖆𝖒𝖎 (@MdShami11) December 4, 2023
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಮೊಹಮ್ಮದ್ ಶಮಿ (ಫಿಟ್ನೆಸ್ ಟೆಸ್ಟ್ ಬಳಿಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ.
ಟಿ20 ಸರಣಿ ವೇಳಾಪಟ್ಟಿ:
ಏಕದಿನ ಸರಣಿ ವೇಳಾಪಟ್ಟಿ:
ಇದನ್ನೂ ಓದಿ: ಸಿಕ್ಸ್ ಸಿಡಿಸಿಯೇ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ
ಟೆಸ್ಟ್ ಸರಣಿ ವೇಳಾಪಟ್ಟಿ: