AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammed Shami: ಮೊಹಮ್ಮದ್ ಶಮಿ ಕಂಬ್ಯಾಕ್ ಮತ್ತಷ್ಟು ವಿಳಂಬ

Mohammed Shami: 2023ರ ಏಕದಿನ ವಿಶ್ವಕಪ್​ನಲ್ಲಿ ಕರಾರುವಾಕ್ ದಾಳಿ ಮೂಲಕ ಮೊಹಮ್ಮದ್ ಶಮಿ ಸಂಚಲನ ಸೃಷ್ಟಿಸಿದ್ದರು. 7 ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿದಿದ್ದ ಶಮಿ ಒಟ್ಟು 24 ವಿಕೆಟ್ ಕಬಳಿಸುವ ಮೂಲಕ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಇದಾದ ಬಳಿಕ ಮೊಹಮ್ಮದ್ ಶಮಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿಲ್ಲ.

Mohammed Shami: ಮೊಹಮ್ಮದ್ ಶಮಿ ಕಂಬ್ಯಾಕ್ ಮತ್ತಷ್ಟು ವಿಳಂಬ
Mohammed Shami
ಝಾಹಿರ್ ಯೂಸುಫ್
|

Updated on: Aug 19, 2024 | 11:08 AM

Share

ಏಕದಿನ ವಿಶ್ವಕಪ್ 2023 ಫೈನಲ್ ಪಂದ್ಯದ ಬಳಿಕ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಮೊಹಮ್ಮದ್ ಶಮಿ ಅವರ ಕಂಬ್ಯಾಕ್ ಮತ್ತಷ್ಟು ವಿಳಂಬವಾಗಲಿದೆ. ಈ ಹಿಂದೆ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿ ಮೂಲಕ ಶಮಿ ಪುನರಾಗಮನ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೀಗ ರಣಜಿ ಟ್ರೋಫಿ ಬಳಿಕವಷ್ಟೇ ಅವರಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಸಿಗಲಿದೆ ಎಂದು ತಿಳಿದು ಬಂದಿದೆ.

ಟೀಮ್ ಇಂಡಿಯಾದಿಂದ ಗಾಯಗೊಂಡು ಅಥವಾ ಇನ್ನಿತರ ಕಾರಣಗಳಿಂದ ಹೊರಗುಳಿದಿರುವ ಆಟಗಾರರು ದೇಶೀಯ ಟೂರ್ನಿಯಲ್ಲಿ ಆಡುವುದು ಕಡ್ಡಾಯ ಎಂದು ಬಿಸಿಸಿಐ ತಿಳಿಸಿದೆ. ಹೀಗಾಗಿ ಮೊಹಮ್ಮದ್ ಶಮಿ ಕಂಬ್ಯಾಕ್ ಮಾಡಬೇಕಿದ್ದರೆ ದೇಶೀಯ ಪಂದ್ಯಗಳನ್ನಾಡಬೇಕು.

ಇತ್ತೀಚೆಗೆ ದುಲೀಪ್ ಟ್ರೋಫಿಗೆ ಪ್ರಕಟಿಸಲಾದ 4 ತಂಡಗಳಲ್ಲಿ ಮೊಹಮ್ಮದ್ ಶಮಿ ಅವರ ಹೆಸರು ಕಾಣಿಸಿಕೊಂಡಿಲ್ಲ. ಇದಕ್ಕೆ ಮುಖ್ಯ ಕಾರಣ ಅವರು ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿರುವುದು. ಅಂದರೆ ತಮ್ಮ ಫಿಟ್​ನೆಸ್ ಸಾಬೀತುಪಡಿಸಲು ಶಮಿ ಎನ್​ಸಿಎ ನಲ್ಲಿ ಕಸರತ್ತು ನಡೆಸುತ್ತಿದ್ದಾರೆ. ಹೀಗಾಗಿ ಅವರನ್ನು ದುಲೀಪ್ ಟ್ರೋಫಿಗೆ ಆಯ್ಕೆ ಮಾಡಿಲ್ಲ.

ಹೀಗಾಗಿ ಮೊಹಮ್ಮದ್ ಶಮಿ ತಮ್ಮ ಕಂಬ್ಯಾಕ್​ಗಾಗಿ ಮುಂದಿನ ರಣಜಿ ಟ್ರೋಫಿವರೆಗೂ ಕಾಯಬೇಕು. ರಣಜಿ ಟ್ರೋಫಿ ಶುರುವಾಗುವುದು ಅಕ್ಟೋಬರ್ 11 ರಿಂದ. ಈ ಟೂರ್ನಿಯಲ್ಲಿ ಮೊಹಮ್ಮದ್ ಶಮಿ ಬಂಗಾಳ ಪರ ಕಣಕ್ಕಿಳಿಯಲಿದ್ದಾರೆ. ಇನ್ನು ಅಕ್ಟೋಬರ್ 16 ರಿಂದ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಶುರುವಾಗಲಿದೆ. ಈ ಸರಣಿಯ ಮೂಲಕ ಮೊಹಮ್ಮದ್ ಶಮಿ ಕಂಬ್ಯಾಕ್ ಮಾಡುವ ಸಾಧ್ಯತೆ ಹೆಚ್ಚಿದೆ.

ಶಮಿ ಹೊರಗುಳಿಯಲು ಕಾರಣವೇನು?

ಏಕದಿನ ವಿಶ್ವಕಪ್ 2023 ರ ವೇಳೆ​ ಮೊಹಮ್ಮದ್ ಶಮಿ ಅವರ ಪಾದದಲ್ಲಿ ನೋವು ಕಾಣಿಸಿಕೊಂಡಿತ್ತು. ಈ ನೋವಿನ ನಡುವೆಯೂ ಅವರು ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಂಡು ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. ಇದರಿಂದ ಅವರ ಪಾದದ ಸಮಸ್ಯೆಯು ಬಿಗಡಾಯಿಸಿದೆ.

ಇದನ್ನೂ ಓದಿ: IPL 2025: RCB ಪರ ಆಡುವ ಇಂಗಿತ ವ್ಯಕ್ತಪಡಿಸಿದ ರಿಂಕು ಸಿಂಗ್

ಹೀಗಾಗಿ ಅವರು ಏಕದಿನ ವಿಶ್ವಕಪ್ ಬಳಿಕ ಯಾವುದೇ ಪಂದ್ಯವಾಡಿರಲಿಲ್ಲ. ಅಲ್ಲದೆ ವೈದ್ಯಕೀಯ ಪರಿಶೀಲನೆ ವೇಳೆ ಶಸ್ತ್ರಚಿಕಿತ್ಸೆ ಮಾಡಬೇಕಾದ ಅನಿವಾರ್ಯತೆ ಕಂಡು ಬಂದಿತ್ತು. ಅದರಂತೆ ಕಳೆದ ಫೆಬ್ರವರಿ ತಿಂಗಳಲ್ಲಿ ಮೊಹಮ್ಮದ್ ಶಮಿ ಸರ್ಜರಿಗೆ ಒಳಗಾಗಿದ್ದರು. ಇದೇ ಕಾರಣದಿಂದಾಗಿ ಐಪಿಎಲ್​ನಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಮೊಹಮ್ಮದ್ ಶಮಿ ಸಂಪೂರ್ಣ ಫಿಟ್​ ಆಗಿದ್ದು, ಬೌಲಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಈ ಮೂಲಕ ಕಂಬ್ಯಾಕ್ ಮಾಡಲು ಸಕಲ ಸಿದ್ಧತೆಯಲ್ಲಿದ್ದಾರೆ.

ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!