ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ (Mohammed Shami) ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ. ಪಾದದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಶಮಿ ಸೌತ್ ಆಫ್ರಿಕಾ ವಿರುದ್ಧದ ಸೀಮಿತ ಓವರ್ಗಳ ಸರಣಿಯಿಂದ ಹೊರಗುಳಿದಿದ್ದರು. ಇದಾಗ್ಯೂ ಅವರು ಟೆಸ್ಟ್ ಸರಣಿ ವೇಳೆ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎನ್ನಲಾಗಿತ್ತು.
ಆದರೀಗ ಸಂಪೂರ್ಣ ಫಿಟ್ನೆಸ್ ಹೊಂದಿರದ ಕಾರಣ ಅವರು ಸೌತ್ ಆಫ್ರಿಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.
ಇತ್ತ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಸೇರಿದಂತೆ ಕೊನೆಯ ಬ್ಯಾಚ್ ಆಟಗಾರರು ಡಿಸೆಂಬರ್ 15 ರಂದು ಜೋಹಾನ್ಸ್‌ಬರ್ಗ್‌ಗೆ ತೆರಳಲಿದ್ದಾರೆ. ಶುಕ್ರವಾರ ಸೌತ್ ಆಫ್ರಿಕಾಗೆ ತೆರಳುವ ಆಟಗಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ಆರ್ ಅಶ್ವಿನ್, ನವದೀಪ್ ಸೈನಿ ಹಾಗೂ ಹರ್ಶಿತ್ ರಾಣಾ ಹೆಸರು ಕಾಣಿಸಿಕೊಂಡಿದೆ.
ಅಂದರೆ ಇದಕ್ಕೂ ಮುನ್ನ ನವದೀಪ್ ಸೈನಿ ಹಾಗೂ ಹರ್ಶಿತ್ ರಾಣಾ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿರಲಿಲ್ಲ. ಇದೀಗ ಗಾಯದ ಕಾರಣ ಹೊರಗುಳಿದಿರುವ ಶಮಿಗೆ ಬದಲಿಗೆ ವೇಗಿ ನವದೀಪ್ ಸೈನಿಗೆ ಅವಕಾಶ ನೀಡಿರುವ ಸಾಧ್ಯತೆಯಿದೆ.
ಸದ್ಯ ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದಿರುವ ಶಮಿ ಮುಂಬರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಕಂಬ್ಯಾಕ್ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಈ ಸರಣಿ ಆರಂಭಕ್ಕೆ ಇನ್ನೂ ಒಂದು ತಿಂಗಳಿದ್ದು, ಆ ವೇಳೆಗೆ ಅವರು ಸಂಪೂರ್ಣ ಚೇತರಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಪ್ರತಿಷ್ಠಿತ ಟೆಸ್ಟ್ ಸರಣಿಯಲ್ಲಿ ಮೊಹಮ್ಮದ್ ಶಮಿಯನ್ನು ಎದುರು ನೋಡಬಹುದು.
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ.
ಇದನ್ನೂ ಓದಿ: IPL 2024: RCB ಎಷ್ಟು ಆಟಗಾರರನ್ನು ಖರೀದಿಸಬಹುದು?
ಭಾರತ-ಸೌತ್ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ: