AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಪವಾಸ ಆಚರಿಸದ ಶಮಿಯೊಬ್ಬ ಕ್ರಿಮಿನಲ್’; ಮೌಲಾನಾ ಶಹಬುದ್ದಿನ್ ರಜ್ವಿ

Mohammed Shami: ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ರಂಜಾನ್ ಉಪವಾಸವನ್ನು ತ್ಯಜಿಸಿ ಕ್ರಿಕೆಟ್ ಆಡಿದ್ದಕ್ಕೆ ಅಖಿಲ ಭಾರತೀಯ ಮುಸ್ಲಿಂ ಜಮಾತ್ ಅಧ್ಯಕ್ಷ ಶಹಬುದ್ದಿನ್ ರಜ್ವಿ ಬರೇಲ್ವಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಮಿ ಅವರನ್ನು 'ಅಪರಾಧಿ' ಎಂದು ಕರೆದಿರುವ ಮೌಲಾನಾ, ಇಸ್ಲಾಮಿಕ್ ಷರಿಯಾ ನಿಯಮಗಳನ್ನು ಪಾಲಿಸುವಂತೆ ಸಲಹೆ ನೀಡಿದ್ದಾರೆ. ಆದರೆ ಶಮಿ ಅವರ ನಿರ್ಧಾರಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.

‘ಉಪವಾಸ ಆಚರಿಸದ ಶಮಿಯೊಬ್ಬ ಕ್ರಿಮಿನಲ್’; ಮೌಲಾನಾ ಶಹಬುದ್ದಿನ್ ರಜ್ವಿ
Mohammed Shami
ಪೃಥ್ವಿಶಂಕರ
|

Updated on:Mar 06, 2025 | 4:51 PM

Share

2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ (Champions Trophy 2025) ಫೈನಲ್ ತಲುಪಿರುವ ಟೀಂ ಇಂಡಿಯಾ ಇದೀಗ ಭಾನುವಾರ ನಡೆಯಲ್ಲಿರುವ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲು ಸಕಲ ತಯಾರಿ ನಡೆಸುತ್ತಿದೆ. ಇಡೀ ಟೂರ್ನಿಯಲ್ಲಿ ಟೀಂ ಇಂಡಿಯಾ ಸಾಂಘಿಕ ಪ್ರದರ್ಶನ ನೀಡುವ ಮೂಲಕ ಅಜೇಯವಾಗಿ ಫೈನಲ್ ಪ್ರವೇಶಿದೆ. ಅದರಲ್ಲೂ ರಂಜಾನ್ ತಿಂಗಳಲ್ಲೂ ತನ್ನ ಉಪವಾಸ ಆಚರಣೆಗೆ ಬ್ರೇಕ್ ಹಾಕಿ ದೇಶಕ್ಕಾಗಿ ಆಡುತ್ತಿರುವ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ (Mohammed Shami) ಅವರ ಬಗ್ಗೆ ಇಡೀ ದೇಶವೇ ಮೆಚ್ಚುಗೆಯ ಮಾತುಗಳನ್ನಾಡುತ್ತಿದೆ. ಆದರೀಗ ಅವರದ್ದೇ ಧರ್ಮದ ಮೌಲಾನಾರೊಬ್ಬರು ಉಪವಾಸ ಆಚರಿಸದ ಶಮಿಯನ್ನು ಕ್ರಿಮಿನಲ್ ಎಂದು ಜರಿದಿದ್ದಾರೆ.

ದೇಶಕ್ಕಾಗಿ ನಿಯಮ ಮುರಿದಿದ್ದ ಶಮಿ

ವಾಸ್ತವವಾಗಿ ದುಬೈನಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಕಣಕ್ಕಿಳಿದಿದ್ದ ಶಮಿ ಬೌಲಿಂಗ್ ಮಾಡಿ ಸುಸ್ತಾಗಿದ್ದರಿಂದ ಬೌಂಡರಿ ಲೈನ್ ಬಳಿ ನಿಂತು ಎನರ್ಜಿ ಡ್ರಿಂಕ್ ಕುಡಿದಿದ್ದರು. ಶಮಿ ಅವರ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿತ್ತು. ಉಪವಾಸ ನಿಯಮವನ್ನು ರದ್ದುಗೊಳಿಸಿ ದೇಶಕ್ಕಾಗಿ ಶಮಿ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿತ್ತು.

ಇದನ್ನೂ ಓದಿ
Image
2017 ರಿಂದ ಐಸಿಸಿ ಟೂರ್ನಿಗಳಲ್ಲಿ ಭಾರತದ ಪ್ರದರ್ಶನ ಹೇಗಿದೆ?
Image
ಚೋಕರ್ಸ್​ ಪಟ್ಟವನ್ನು ತನ್ನಲ್ಲೇ ಉಳಿಸಿಕೊಂಡ ದಕ್ಷಿಣ ಆಫ್ರಿಕಾ
Image
ಬಾಂಗ್ಲಾ ವಿರುದ್ಧ ಭಾರತಕ್ಕೆ ಪ್ರಯಾಸದ ಗೆಲುವು
Image
ಚಾಂಪಿಯನ್ಸ್ ಟ್ರೋಫಿ ಚೊಚ್ಚಲ ಪಂದ್ಯದಲ್ಲೇ ದಾಖಲೆ ಬರೆದ ಶಮಿ

ಶರಿಯಾ ನಿಯಮಗಳನ್ನು ಪಾಲಿಸಲಿಲ್ಲ

ಆದರೀಗ ರಂಜಾನ್ ತಿಂಗಳಂದು ಉಪವಾಸ ಆಚರಿಸದ ಶಮಿಯನ್ನು ಅಖಿಲ ಭಾರತೀಯ ಮುಸ್ಲಿಂ ಜಮಾತ್ ಅಧ್ಯಕ್ಷ ಶಹಬುದ್ದಿನ್ ರಜ್ವಿ ಬರೇಲ್ವಿ ಕ್ರಿಮಿನಲ್ ಎಂದು ಜರಿದಿದ್ದಾರೆ. ಒಬ್ಬ ವ್ಯಕ್ತಿಯು ಉದ್ದೇಶಪೂರ್ವಕವಾಗಿ ಉಪವಾಸ ಮಾಡದಿದ್ದರೆ ಅವನು ಪಾಪಿ. ಮೊಹಮ್ಮದ್ ಶಮಿ ಇಸ್ಲಾಮಿಕ್ ಷರಿಯಾ ನಿಯಮಗಳನ್ನು ಪಾಲಿಸಲಿಲ್ಲ ಮತ್ತು ಉಪವಾಸವನ್ನು ಆಚರಿಸಲಿಲ್ಲ, ಅದು ಅವರಿಗೆ ಕಡ್ಡಾಯವಾಗಿತ್ತು. ಈ ನಿಯಮವನ್ನು ಪಾಲಿಸದಿರುವುದು ಶರಿಯಾ ದೃಷ್ಟಿಯಲ್ಲಿ ದೊಡ್ಡ ಪಾಪ. ಮೊಹಮ್ಮದ್ ಶಮಿ ಇಸ್ಲಾಮಿಕ್ ಜವಾಬ್ದಾರಿಗಳನ್ನು ಗಂಭೀರವಾಗಿ ಪರಿಗಣಿಸಿ ಅದಕ್ಕೆ ತಕ್ಕಂತೆ ವರ್ತಿಸಬೇಕು ಎಂದು ಮೌಲಾನಾ ಹೇಳಿದ್ದಾರೆ.

ಇದನ್ನೂ ಓದಿ: IND vs BAN: ಭಾರತವನ್ನು ಸೋಲಿನಿಂದ ಪಾರು ಮಾಡಿದ ಶಮಿ, ಗಿಲ್, ರಾಹುಲ್; ಗೆಲುವಿನ ಶುಭಾರಂಭ

ಕ್ರಿಕೆಟ್ ಆಡಿ, ಆದರೆ ಇಸ್ಲಾಮಿಕ್ ಜವಾಬ್ದಾರಿಗಳನ್ನು ಮರೆಯಬೇಡಿ

ಇಸ್ಲಾಮಿಕ್ ಸಲಹೆಗಳನ್ನು ಪಾಲಿಸದ ಶಮಿಗೆ ಸಲಹೆ ನೀಡಿರುವ ಮೌಲಾನಾ, ‘ಕ್ರಿಕೆಟ್ ಆಡುವುದು ತಪ್ಪಲ್ಲ ಆದರೆ ಇಸ್ಲಾಂನ ಕರ್ತವ್ಯಗಳು ಮತ್ತು ಬಾಧ್ಯತೆಗಳನ್ನು ಪಾಲಿಸುವುದು ಮುಖ್ಯ. ಪ್ರತಿಯೊಬ್ಬ ವ್ಯಕ್ತಿಯು ಇಸ್ಲಾಂನ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಮತ್ತು ಮೊಹಮ್ಮದ್ ಶಮಿ ಕೂಡ ಇದರ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Thu, 6 March 25

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ