IND vs SA ODI Series: ಟೀಮ್ ಇಂಡಿಯಾಕ್ಕೆ ಡಬಲ್ ಶಾಕ್: ಟೆಸ್ಟ್​ನಿಂದ ಶಮಿ, ಏಕದಿನದಿಂದ ದೀಪಕ್ ಚಹರ್ ಔಟ್

Mohammed Shami and Deepak Chahar: ದೀಪಕ್ ಚಹರ್ ಡಿಸೆಂಬರ್ 17 ರಿಂದ ಪ್ರಾರಂಭವಾಗುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಅಂತೆಯೆ ಡಿಸೆಂಬರ್ 26 ರಿಂದ ಪ್ರಾರಂಭವಾಗುವ ಮೊದಲ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಿಂದ ವೇಗದ ಬೌಲರ್ ಮೊಹಮ್ಮದ್ ಶಮಿ ಕೂಡ ಔಟ್ ಆಗಿದ್ದಾರೆ.

IND vs SA ODI Series: ಟೀಮ್ ಇಂಡಿಯಾಕ್ಕೆ ಡಬಲ್ ಶಾಕ್: ಟೆಸ್ಟ್​ನಿಂದ ಶಮಿ, ಏಕದಿನದಿಂದ ದೀಪಕ್ ಚಹರ್ ಔಟ್
Mohammed Shami and Deepak Chahar
Follow us
Vinay Bhat
|

Updated on: Dec 16, 2023 | 12:00 PM

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಮತ್ತು ಟೆಸ್ಟ್ ಸರಣಿಯ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ (India vs South Africa) ಭಾರೀ ಹಿನ್ನಡೆ ಅನುಭವಿಸಿದೆ. ಇಂಡೋ-ಆಫ್ರಿಕಾ ನಡುವೆ ಭಾನುವಾರದಂದು (ಡಿ. 17) ಮೊದಲ ಏಕದಿನ ಪಂದ್ಯ ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಹೀಗಿರುವಾಗ ಭಾರತದ ವೇಗದ ಬೌಲರ್ ದೀಪಕ್ ಚಹರ್ ಏಕದಿನ ಸರಣಿಯಿಂದ ತಮ್ಮ ಹೆಸರನ್ನು ಹಿಂಪಡೆದಿದ್ದಾರೆ. ಇದೇ ವೇಳೆ ಮೊಹಮ್ಮದ್ ಶಮಿ ಕೂಡ ಮೊದಲ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ. ಶಮಿ ಇನ್ನೂ ಸಂಪೂರ್ಣ ಫಿಟ್ ಆಗಿಲ್ಲ, ಹಾಗಾಗಿ ಮೊದಲ ಪಂದ್ಯದಲ್ಲಿ ಆಡಲು ಸಾಧ್ಯವಾಗುವುದಿಲ್ಲ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

ದೀಪಕ್ ಚಹರ್ ಅವರು ಡಿಸೆಂಬರ್ 17 ರಿಂದ ಪ್ರಾರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತೀಯ ತಂಡದ ಭಾಗವಾಗಿದ್ದರು. ಆದರೆ ಕುಟುಂಬದಲ್ಲಿ ವೈದ್ಯಕೀಯ ತುರ್ತುಸ್ಥಿತಿಯ ಕಾರಣ, ಅವರು ಸರಣಿಯಿಂದ ತಮ್ಮ ಹೆಸರನ್ನು ಹಿಂತೆಗೆದುಕೊಂಡರು. ಬಿಸಿಸಿಐ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ದೀಪಕ್ ಚಹರ್ ಬದಲಿಗೆ ಐಪಿಎಲ್​ನಲ್ಲಿ ಆರ್​ಸಿಬಿ ಪರ ಮಿಂಚಿದ ಆಕಾಶ್ ದೀಪ್ ಅವರನ್ನು ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ
Image
ನಾಯಕತ್ವದಿಂದ ಕೈಬಿಟ್ಟ ಬೆನ್ನಲ್ಲೇ ಏರ್ಪೋರ್ಟ್​ನಲ್ಲಿ ಕಾಣಿಸಿಕೊಂಡ ರೋಹಿತ್
Image
ಪಂದ್ಯ ಮುಗಿಸಿ ಬಸ್​ನಲ್ಲಿ ತೆರಳುವಾಗ ಸೂರ್ಯ-ಅರ್ಶ್​ದೀಪ್ ನಡುವೆ ಜಗಳ
Image
ಮುಂಬೈ ಇಂಡಿಯನ್ಸ್ ಕ್ಯಾಪ್-ಜೆರ್ಸಿಯನ್ನು ಸುಟ್ಟು ಹಾಕಿದ ರೋಹಿತ್ ಫ್ಯಾನ್ಸ್
Image
ಸದ್ಯದಲ್ಲೇ ರೋಹಿತ್ ಬಹುದೊಡ್ಡ ಘೋಷಣೆ: ಕ್ರಿಕೆಟ್ ಜೀವನಕ್ಕೆ ಪೂರ್ಣವಿರಾಮ?

SA vs IND ODI Series: ಎಂಟು ಸ್ಟಾರ್ ಪ್ಲೇಯರ್ಸ್ ಔಟ್: ದಕ್ಷಿಣ ಆಫ್ರಿಕಾ ಸರಣಿಗೆ ಭಾರತ ಏಕದಿನ ತಂಡದಲ್ಲಿ ದೊಡ್ಡ ಬದಲಾವಣೆ

ಇನ್ನು ಡಿಸೆಂಬರ್ 26 ರಿಂದ ಪ್ರಾರಂಭವಾಗುವ ಮೊದಲ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಿಂದ ವೇಗದ ಬೌಲರ್ ಮೊಹಮ್ಮದ್ ಶಮಿ ಕೂಡ ಹೊರಗುಳಿದಿದ್ದಾರೆ. ಬಿಸಿಸಿಐ ಹೇಳುವ ಪ್ರಕಾರ, ಶಮಿ ಇನ್ನೂ ಸಂಪೂರ್ಣ ಫಿಟ್ ಆಗಿಲ್ಲ ಹೀಗಾಗಿ ಈ ಪಂದ್ಯದಲ್ಲಿ ಆಡುವುದಿಲ್ಲ. ನವೆಂಬರ್ 30 ರಂದು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಬಿಸಿಸಿಐ ತಂಡವನ್ನು ಪ್ರಕಟಿಸಿತ್ತು. ಆಗ ಮೊಹಮ್ಮದ್ ಶಮಿ ಅವರ ಆಯ್ಕೆಯು ಅವರ ಫಿಟ್ನೆಸ್ ಅನ್ನು ಅವಲಂಬಿಸಿರುತ್ತದೆ ಎಂದು ತಿಳಿಸಿತ್ತು.

ಮೊಹಮ್ಮದ್ ಶಮಿ ಪಾದದ ನೋವಿನಿಂದ ಬಳಲುತ್ತಿದ್ದಾರೆ. ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಇವರಿಗೆ ನೋವು ಕಾಣಿಸಿಕೊಂಡಿತ್ತು. ನೋವಿನ ನಡುವೆಯೂ ಅದ್ಭುತ ಪ್ರದರ್ಶನ ತೋರಿದ್ದರು. ಆದರೆ, ಶಮಿ ಇನ್ನೂ ಸಂಪೂರ್ಣ ಫಿಟ್ ಆಗಿಲ್ಲ. ಇದರಿಂದಾಗಿ ಅವರು ಮೊದಲ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ. ಶಮಿ ಅವರ ಜಾಗಕ್ಕೆ ಬದಲಿ ಆಟಗಾರನ ಘೋಷಣೆ ಮಾಡಿಲ್ಲ. ಪ್ರಸಿದ್ಧ್ ಕೃಷ್ಣ ಆಯ್ಕೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್