AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದಲ್ಲಿಲ್ಲ ಸ್ಥಾನ: ರಣಜಿ ಪಂದ್ಯದಿಂದ ಹೊರಗುಳಿದ ಶಮಿ

ಟೀಮ್ ಇಂಡಿಯಾ ಆಯ್ಕೆಗಾರರ ನಿರ್ಧಾರಕ್ಕೆ ಹಿರಿಯ ವೇಗದ ಬೌಲರ್ ಮೊಹಮ್ಮದ್ ಶಮಿ ಬೇಸರ ವ್ಯಕ್ತಪಡಿಸಿದ್ದಾರೆಯೇ? ಇಂತಹದೊಂದು ಪ್ರಶ್ನೆ ಈಗ ಕ್ರಿಕೆಟ್ ವಲಯದಲ್ಲಿ ಹುಟ್ಟುಕೊಂಡಿದೆ. ಇದಕ್ಕೆ ಮುಖ್ಯ ಕಾರಣ, ಮುಂಬರುವ ನ್ಯೂಝಿಲೆಂಡ್ ಸರಣಿಯಿಂದ ತಮ್ಮನ್ನು ಕೈಬಿಟ್ಟ ಕೇವಲ ಕೆಲವೇ ಗಂಟೆಗಳ ಒಳಗೆ ಶಮಿ ಬೆಂಗಾಲ್ ತಂಡದ ರಣಜಿ ಪಂದ್ಯದಿಂದ ಹೊರಗುಳಿಯುವ ಮಹತ್ವದ ನಿರ್ಧಾರ ತಳೆದಿರುವುದು.

ಟೀಮ್ ಇಂಡಿಯಾದಲ್ಲಿಲ್ಲ ಸ್ಥಾನ: ರಣಜಿ ಪಂದ್ಯದಿಂದ ಹೊರಗುಳಿದ ಶಮಿ
Mohammed Shami
ಝಾಹಿರ್ ಯೂಸುಫ್
|

Updated on: Oct 18, 2026 | 1:46 PM

Share

ಭಾರತ ತಂಡದ ಹಿರಿಯ ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ಭಾನುವಾರ (ಅಕ್ಟೋಬರ್ 18, 2026) ನವದೆಹಲಿಯ ಪಾಲಂ ಮೈದಾನದಲ್ಲಿ ಆರಂಭವಾದ ರಣಜಿ ಪಂದ್ಯದಿಂದ ಹೊರಗುಳಿದಿದ್ದಾರೆ. ಸರ್ವಿಸಸ್ ವಿರುದ್ಧದ ಈ ಪಂದ್ಯದಲ್ಲಿ ಶಮಿ ಬೆಂಗಾಲ್ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಬೇಕಿತ್ತು. ಆದರೆ ನ್ಯೂಝಿಲೆಂಡ್ ವಿರುದ್ಧದ ಮುಂಬರುವ ಸರಣಿಗಳಿಗೆ ಭಾರತ ತಂಡದಿಂದ ಇವರನ್ನು ಕೈಬಿಟ್ಟ ಬೆನ್ನಲ್ಲೇ, ಅವರು ಈ ರಣಜಿ ಪಂದ್ಯದಿಂದಲೂ ಹೊರಗುಳಿಯಲು ನಿರ್ಧರಿಸಿದ್ದಾರೆ.

ಶಮಿ ಅಸಮಾಧಾನ?

ಅಕ್ಟೋಬರ್ 16 ರಂದು ಬಿಸಿಸಿಐ ನ್ಯೂಝಿಲೆಂಡ್ ಪ್ರವಾಸಕ್ಕಾಗಿ ಭಾರತದ ಟೆಸ್ಟ್ ಮತ್ತು ಏಕದಿನ ತಂಡಗಳನ್ನು ಪ್ರಕಟಿಸಿದ್ದು, ಅದರಲ್ಲಿ ಶಮಿ ಅವರಿಗೆ ಸ್ಥಾನ ನೀಡಿಲ್ಲ. ದೀರ್ಘ ಅವಧಿಯ ಬೌಲಿಂಗ್ ಸ್ಪೆಲ್‌ಗಳನ್ನು ಮಾಡಲು ಶಮಿ ಇನ್ನೂ ಸಂಪೂರ್ಣ ಶಕ್ತರಾಗಿಲ್ಲ ಎಂಬ ಕಾರಣ ನೀಡಿ ಯುವ ಆಟಗಾರರಿಗೆ ಮಣೆ ಹಾಕಲಾಗಿದೆ ಎಂದು ವರದಿಯಾಗಿದೆ. ಈ ನಿರ್ಧಾರ ಹೊರಬಿದ್ದ ಬೆನ್ನಲ್ಲೇ ಶಮಿ ರಣಜಿ ಪಂದ್ಯದಿಂದ ದೂರ ಉಳಿದಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ.

ಗೈರಿಗೆ ನಿಖರ ಕಾರಣವೇನು?

ಮನಸ್ತಾಪದ ವರದಿಗಳು: ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗದ ಹಿನ್ನೆಲೆಯಲ್ಲಿ ಬೇಸರಗೊಂಡು ಶಮಿ ಅವರೇ ಈ ಪಂದ್ಯದಿಂದ ಹಿಂದೆ ಸರಿದಿದ್ದಾರೆ ಎಂದು ಕೆಲವು ಕ್ರೀಡಾ ಮಾಧ್ಯಮಗಳು ವರದಿ ಮಾಡಿವೆ.

ದೈಹಿಕ ಫಿಟ್‌ನೆಸ್ ಕಾಳಜಿ: ಇನ್ನೊಂದೆಡೆ, ಪಂದ್ಯ ಆರಂಭಕ್ಕೂ ಮುನ್ನ ಶಮಿ ಅವರು ಮೈದಾನದಲ್ಲಿ ಫಿಸಿಯೋ ಜೊತೆ ಲಘು ಅಭ್ಯಾಸ ನಡೆಸುವಾಗ ಸ್ವಲ್ಪ ಅಸ್ವಸ್ಥರಾಗಿ ಕಂಡುಬಂದಿದ್ದರು. ಕಳೆದ ದೆಹಲಿ ವಿರುದ್ಧದ ಪಂದ್ಯದಲ್ಲಿ ಅವರು 35ಕ್ಕೂ ಹೆಚ್ಚು ಓವರ್‌ಗಳನ್ನು ಬೌಲಿಂಗ್ ಮಾಡಿದ್ದರಿಂದ, ಮುನ್ನೆಚ್ಚರಿಕಾ ಕ್ರಮವಾಗಿ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದೂ ಹೇಳಲಾಗುತ್ತಿದೆ.

ಶಮಿ ಸಹೋದರನಿಗೆ ಸ್ಥಾನ:

ಈ ಪಂದ್ಯದಲ್ಲಿ ಮೊಹಮ್ಮದ್ ಶಮಿ ಅವರ ಸ್ಥಾನದಲ್ಲಿ ಅವರ ಕಿರಿಯ ಸಹೋದರ ಮೊಹಮ್ಮದ್ ಕೈಫ್ ಅವರಿಗೆ ಬೆಂಗಾಲ್ ತಂಡದಲ್ಲಿ ಆಡಲು ಅವಕಾಶ ನೀಡಲಾಗಿದೆ. ಇದರೊಂದಿಗೆ ಆಕಾಶ್ ದೀಪ್ ಮತ್ತು ಮುಖೇಶ್ ಕುಮಾರ್ ಅವರು ‘ಇಂಡಿಯಾ ಎ’ ತಂಡವನ್ನು ಸೇರಿಕೊಂಡಿರುವುದರಿಂದ ಬೆಂಗಾಲ್ ತಂಡದ ಬೌಲಿಂಗ್ ಜವಾಬ್ದಾರಿ ಈಗ ಯುವ ಪಡೆಯ ಹೆಗಲೇರಿದೆ.

ಇದನ್ನೂ ಓದಿ: ಸದ್ಯಕ್ಕಿಲ್ಲ ಚಾನ್ಸ್, ಕಾಯಲೇಬೇಕು: ವೈಭವ್​ಗೆ ಅಯ್ಯರ್ ಕಿವಿಮಾತು

ದೇಶಿ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ:

ಮಾರ್ಚ್ 2025ರ ಚಾಂಪಿಯನ್ಸ್ ಟ್ರೋಫಿ ಫೈನಲ್ ನಂತರ ಮೊಹಮ್ಮದ್ ಶಮಿ ಭಾರತ ಪರ ಯಾವುದೇ ಅಂತರರಾಷ್ಟ್ರೀಯ ಪಂದ್ಯ ಆಡಿಲ್ಲ. ಆದಾಗ್ಯೂ, ಇತ್ತೀಚೆಗೆ ದೆಹಲಿ ವಿರುದ್ಧ ನಡೆದ ರಣಜಿ ಟ್ರೋಫಿಯ ಮೊದಲ ಪಂದ್ಯದಲ್ಲಿ ಅವರು 4/30 ಮತ್ತು 1/29 ವಿಕೆಟ್ ಪಡೆದು ಅದ್ಭುತ ಫಾರ್ಮ್ ಪ್ರದರ್ಶಿಸಿದ್ದರು. ಇದಾಗ್ಯೂ ಅವರನ್ನು ನ್ಯೂಝಿಲೆಂಡ್ ಪ್ರವಾಸಕ್ಕೆ ಪರಿಗಣಿಸದಿರುವುದು ಕ್ರಿಕೆಟ್ ವಲಯದಲ್ಲಿ ಅಚ್ಚರಿ ಮೂಡಿಸಿದೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಸ್ಟಿಂಗ್​​​ನಿಂದ ಕರ್ನಾಟಕ ತಲೆ ತಗ್ಗಿಸುವಂತಾಗಿದೆ ಎಂದ ಡಾ. ಕೆ. ಸುಧಾಕರ್
ಸ್ಟಿಂಗ್​​​ನಿಂದ ಕರ್ನಾಟಕ ತಲೆ ತಗ್ಗಿಸುವಂತಾಗಿದೆ ಎಂದ ಡಾ. ಕೆ. ಸುಧಾಕರ್
ವೈಷ್ಣವಿ ಸಾವಿಗೆ ಕಾರಣವಾಯ್ತಾ ಅರಮನೆ ರಸ್ತೆಯ ಪ್ರೀ-ವೆಡ್ಡಿಂಗ್ ಶೂಟಿಂಗ್?
ವೈಷ್ಣವಿ ಸಾವಿಗೆ ಕಾರಣವಾಯ್ತಾ ಅರಮನೆ ರಸ್ತೆಯ ಪ್ರೀ-ವೆಡ್ಡಿಂಗ್ ಶೂಟಿಂಗ್?
ದೀಪಾವಳಿಗೆ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ ಅಯೋಧ್ಯೆ ರಾಮ ಮಂದಿರ
ದೀಪಾವಳಿಗೆ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ ಅಯೋಧ್ಯೆ ರಾಮ ಮಂದಿರ
ಬೆಂಗಳೂರಲ್ಲಿ ಸರಣಿ ಕೊಲೆ ಕೇಸ್: ತಮಿಳುನಾಡಿನ ಸೇಲಂನಲ್ಲಿ ಎರಡು ಶವ ಪತ್ತೆ
ಬೆಂಗಳೂರಲ್ಲಿ ಸರಣಿ ಕೊಲೆ ಕೇಸ್: ತಮಿಳುನಾಡಿನ ಸೇಲಂನಲ್ಲಿ ಎರಡು ಶವ ಪತ್ತೆ
30 ಲಕ್ಷಕ್ಕೂ ಹೆಚ್ಚು ದೀಪಗಳು; ಸರಯೂ ದಡದಲ್ಲಿ ಮತ್ತೊಂದು ವಿಶ್ವದಾಖಲೆ
30 ಲಕ್ಷಕ್ಕೂ ಹೆಚ್ಚು ದೀಪಗಳು; ಸರಯೂ ದಡದಲ್ಲಿ ಮತ್ತೊಂದು ವಿಶ್ವದಾಖಲೆ
ಗಾನವಿ ಮಾಡಿದ ಡ್ರಾಮಾ ಬಯಲು ಮಾಡಿದ ಸುದೀಪ್: ವಿಡಿಯೋ ನೋಡಿ
ಗಾನವಿ ಮಾಡಿದ ಡ್ರಾಮಾ ಬಯಲು ಮಾಡಿದ ಸುದೀಪ್: ವಿಡಿಯೋ ನೋಡಿ
ಬೆಲೆ ಏರಿಕೆ ಭಾಗ್ಯದ ಸರ್ಕಾರವಲ್ಲ, ಗ್ಯಾರಂಟಿಗಳ ಸರ್ಕಾರ: ಡಿಕೆ ಸುರೇಶ್
ಬೆಲೆ ಏರಿಕೆ ಭಾಗ್ಯದ ಸರ್ಕಾರವಲ್ಲ, ಗ್ಯಾರಂಟಿಗಳ ಸರ್ಕಾರ: ಡಿಕೆ ಸುರೇಶ್
ಮಗನ ಸಿನಿಮಾದಿಂದ ಹೊರಹಾಕಿದ ಪ್ರಿಯಾಂಕಾ ಉಪೇಂದ್ರ: ಅಳಲು ತೋಡಿಕೊಂಡ ನಿರ್ದೇಶಕ
ಮಗನ ಸಿನಿಮಾದಿಂದ ಹೊರಹಾಕಿದ ಪ್ರಿಯಾಂಕಾ ಉಪೇಂದ್ರ: ಅಳಲು ತೋಡಿಕೊಂಡ ನಿರ್ದೇಶಕ
ಎಥೆನಾಲ್ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಆರೋಪ ಮಾಡ್ತಿದೆ: ಜೋಶಿ
ಎಥೆನಾಲ್ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಆರೋಪ ಮಾಡ್ತಿದೆ: ಜೋಶಿ
ಪ್ರಿಯಾಂಕ್ ಖರ್ಗೆ ವಿರುದ್ಧ ಮರುಳಾರಾಧ್ಯ ಸ್ವಾಮೀಜಿ ಆಕ್ಷೇಪಾರ್ಹ ಹೇಳಿಕೆ
ಪ್ರಿಯಾಂಕ್ ಖರ್ಗೆ ವಿರುದ್ಧ ಮರುಳಾರಾಧ್ಯ ಸ್ವಾಮೀಜಿ ಆಕ್ಷೇಪಾರ್ಹ ಹೇಳಿಕೆ