Mohammed Shami: ಮೊಹಮ್ಮದ್ ಶಮಿ ಕಂಬ್ಯಾಕ್ ಯಾವಾಗ?

Mohammed Shami: ಏಕದಿನ ವಿಶ್ವಕಪ್ ಫೈನಲ್ ಬಳಿಕ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಅನುಭವಿ ವೇಗಿ ಮೊಹಮ್ಮದ್ ಶಮಿ ಇದೀಗ ಕಂಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಅದರಂತೆ ಮುಂಬರುವ ಸರಣಿಗಳ ಮೂಲಕ ಮೊಹಮ್ಮದ್ ಶಮಿ ಮತ್ತೆ ಭಾರತ ತಂಡದ ಪರ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

Mohammed Shami: ಮೊಹಮ್ಮದ್ ಶಮಿ ಕಂಬ್ಯಾಕ್ ಯಾವಾಗ?
Mohammed Shami
Follow us
ಝಾಹಿರ್ ಯೂಸುಫ್
|

Updated on: Jul 16, 2024 | 8:51 AM

ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ (Mohammed Shami) ಭಾರತದ ಪರ ಕಣಕ್ಕಿಳಿದು 7 ತಿಂಗಳುಗಳೇ ಕಳೆದಿವೆ. 2023ರ ಏಕದಿನ ವಿಶ್ವಕಪ್​ನಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದ ಶಮಿ, ವರ್ಲ್ಡ್ ಕಪ್ ಬಳಿಕ ಭಾರತ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಇದಕ್ಕೆ ಮುಖ್ಯ ಕಾರಣ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು. ಏಕದಿನ ವಿಶ್ವಕಪ್​ ವೇಳೆ ಶಮಿ ಅವರ ಪಾದದಲ್ಲಿ ನೋವು ಕಾಣಿಸಿಕೊಂಡಿತ್ತು. ಈ ನೋವಿನ ನಡುವೆಯೂ ಅವರು ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಂಡು ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. ಇದರಿಂದ ಅವರ ಪಾದದ ಸಮಸ್ಯೆಯು ಬಿಗಡಾಯಿಸಿದೆ.

ಹೀಗಾಗಿ ಅವರು ಏಕದಿನ ವಿಶ್ವಕಪ್ ಬಳಿಕ ಯಾವುದೇ ಪಂದ್ಯವಾಡಿರಲಿಲ್ಲ. ಅಲ್ಲದೆ ವೈದ್ಯಕೀಯ ಪರಿಶೀಲನೆ ವೇಳೆ ಶಸ್ತ್ರಚಿಕಿತ್ಸೆ ಮಾಡಬೇಕಾದ ಅನಿವಾರ್ಯತೆ ಕಂಡು ಬಂದಿತ್ತು. ಅದರಂತೆ ಕಳೆದ ಫೆಬ್ರವರಿ ತಿಂಗಳಲ್ಲಿ ಮೊಹಮ್ಮದ್ ಶಮಿ ಸರ್ಜರಿಗೆ ಒಳಗಾಗಿದ್ದರು. ಇದೇ ಕಾರಣದಿಂದಾಗಿ ಐಪಿಎಲ್​ನಲ್ಲೂ ಕಾಣಿಸಿಕೊಂಡಿರಲಿಲ್ಲ.

ಇದೀಗ ಮೊಹಮ್ಮದ್ ಶಮಿ ಸಂಪೂರ್ಣ ಫಿಟ್​ ಆಗಿದ್ದು, ಬೌಲಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಅಲ್ಲದೆ ಜಿಮ್​ನಲ್ಲಿ ವರ್ಕ್​ ಔಟ್ ಕೂಡ ಶುರು ಮಾಡಿಕೊಂಡಿದ್ದಾರೆ. ಹೀಗಾಗಿ ಮುಂಬರುವ ಸರಣಿಗಳ ವೇಳೆ ಶಮಿ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳುವುದು ಖಚಿತ.

ಅದರಲ್ಲೂ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಮೊಹಮ್ಮದ್ ಶಮಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಈ ಸರಣಿಯಿಂದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ವಿಶ್ರಾಂತಿಯ ಕಾರಣ ಹೊರಗುಳಿಯಲಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಅನುಭವಿ ವೇಗಿ ಶಮಿ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ.

ಒಂದು ವೇಳೆ ಶ್ರೀಲಂಕಾ ವಿರುದ್ಧದ ಸರಣಿಯಿಂದ ಮೊಹಮ್ಮದ್ ಶಮಿ ಹೊರಗುಳಿದರೆ, ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು. ಹಾಗಾಗಿ ಆಗಸ್ಟ್ ಅಥವಾ ಸೆಪ್ಟೆಂಬರ್​ನಲ್ಲಿ ಶಮಿ ಟೀಮ್ ಇಂಡಿಯಾ ಪರ ಮತ್ತೆ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಇದನ್ನೂ ಓದಿ: ಚಾಂಪಿಯನ್ಸ್​ ಟ್ರೋಫಿಯಿಂದ ಟೀಮ್ ಇಂಡಿಯಾ ಹಿಂದೆ ಸರಿದರೆ, ಯಾವ ತಂಡಕ್ಕೆ ಚಾನ್ಸ್?

ಭರ್ಜರಿ ಫಾರ್ಮ್​ನಲ್ಲಿದ್ದ ಶಮಿ:

ಏಕದಿನ ವಿಶ್ವಕಪ್ 2023 ರಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಮೊಹಮ್ಮದ್ ಶಮಿ 24 ವಿಕೆಟ್​ ಕಬಳಿಸಿ ಯಶಸ್ವಿ ಬೌಲರ್ ಎನಿಸಿಕೊಂಡಿದ್ದರು. ಶಮಿ ಅವರ ಕರಾರುವಾಕ್ ದಾಳಿಯ ನೆರವಿನಿಂದ ಭಾರತ ತಂಡವು ಫೈನಲ್​ಗೆ ಪ್ರವೇಶಿಸಿತ್ತು. ಇದಾಗ್ಯೂ ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಮುಗ್ಗರಿಸಿ ಏಕದಿನ ವಿಶ್ವಕಪ್ ಗೆಲ್ಲುವ ಅವಕಾಶವನ್ನು ಕೈಚೆಲ್ಲಿಕೊಂಡಿದ್ದರು. ಈ ಫೈನಲ್ ಪಂದ್ಯದ ಬಳಿಕ ಮೈದಾನದಿಂದ ಹೊರಗುಳಿದಿದ್ದ ಶಮಿ ಇದೀಗ ಪುನರಾಗಮನಕ್ಕಾಗಿ ಸಜ್ಜಾಗಿದ್ದಾರೆ.

ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ