Team India: ಟೀಮ್ ಇಂಡಿಯಾ ಟಿ20 ವಿಶ್ವಕಪ್​ ತಂಡದಲ್ಲಿ ಬದಲಾವಣೆ ಸಾಧ್ಯತೆ..!

| Updated By: ಝಾಹಿರ್ ಯೂಸುಫ್

Updated on: Sep 15, 2022 | 6:30 PM

India Squad For T20 World Cup 2022: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ.

Team India: ಟೀಮ್ ಇಂಡಿಯಾ ಟಿ20 ವಿಶ್ವಕಪ್​ ತಂಡದಲ್ಲಿ ಬದಲಾವಣೆ ಸಾಧ್ಯತೆ..!
Team India
Follow us on

T20 World Cup 2022: ಟಿ20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾ (Team India) ಬಲಿಷ್ಠ ಪಡೆಯನ್ನೇ ಆಯ್ಕೆ ಮಾಡಿದೆ. ಆದರೆ ಈ ತಂಡದಲ್ಲಿ ಕೆಲ ಆಟಗಾರರಿಗೆ ಅವಕಾಶ ನೀಡದಿರುವ ಬಗ್ಗೆ ಇದೀಗ ಟೀಕೆಗಳು ಕೇಳಿ ಬರುತ್ತಿದೆ. ಅದರಲ್ಲೂ ಹಿರಿಯ ಅನುಭವಿ ವೇಗಿ ಮೊಹಮ್ಮದ್ ಶಮಿಯನ್ನು ಮುಖ್ಯ ತಂಡಕ್ಕೆ ಆಯ್ಕೆ ಮಾಡಿಲ್ಲ. ಆಯ್ಕೆ ಸಮಿತಿಯ ಈ ನಿರ್ಧಾರದ ಬಗ್ಗೆ ಮಾಜಿ ಕೋಚ್ ರವಿ ಶಾಸ್ತ್ರಿ, ಮೊಹಮ್ಮದ್ ಅಜರುದ್ದೀನ್, ಕ್ರಿಸ್ ಶ್ರೀಕಾಂತ್ ಸೇರಿದಂತೆ ಕೆಲ ಮಾಜಿ ಆಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತ ಆಯ್ಕೆ ಸಮಿತಿಯು ಮೊಹಮ್ಮದ್ ಶಮಿಯನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಲು ಕೂಡ ಒಂದು ಕಾರಣವಿದೆ. ಏಕೆಂದರೆ ಶಮಿ ಕಳೆದ ಟಿ20 ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ಪರ ಒಂದೇ ಒಂದು ಟಿ20 ಪಂದ್ಯವಾಡಿಲ್ಲ. ಮತ್ತೊಂದೆಡೆ ಐಪಿಎಲ್​ನಲ್ಲಿ 20 ವಿಕೆಟ್ ಕಬಳಿಸುವ ಮೂಲಕ ಗುಜರಾತ್ ಟೈಟಾನ್ಸ್ ವಿರುದ್ಧ ಮಿಂಚಿದ್ದರು. ಇದಾಗ್ಯೂ ಏಷ್ಯಾಕಪ್​ನಲ್ಲಿ ಶಮಿಗೆ ಸ್ಥಾನ ನೀಡಲಾಗಿರಲಿಲ್ಲ.

ಆದರೆ ಏಷ್ಯಾಕಪ್​ನಲ್ಲಿ ಟೀಮ್ ಇಂಡಿಯಾ ಬೌಲರ್​ಗಳ ಹೀನಾಯ ಪ್ರದರ್ಶನದ ಬೆನ್ನಲ್ಲೇ ಶಮಿ ಆಯ್ಕೆ ವಿಚಾರ ಮತ್ತೆ ಮುನ್ನಲೆಗೆ ಬಂದಿತ್ತು. ಆದರೆ ಟೀಮ್ ಇಂಡಿಯಾ ಘೋಷಣೆಯಾದಾಗ ಶಮಿ ಹೆಸರು ಮೀಸಲು ಆಟಗಾರರ ಪಟ್ಟಿಯಲ್ಲಿತ್ತು. ಆದರೆ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾದ ತಂಡದಲ್ಲಿ ಶಮಿಗೆ ಚಾನ್ಸ್ ನೀಡಲಾಗಿದೆ.

ಇದನ್ನೂ ಓದಿ
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಅಂದರೆ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧದ ಸರಣಿಯು ಮೊಹಮ್ಮದ್ ಶಮಿಯ ಪಾಲಿಗೆ ನಿರ್ಣಾಯಕ. ಒಂದು ವೇಳೆ ಈ ಎರಡು ಸರಣಿಗಳಲ್ಲಿ ಶಮಿ ಮಿಂಚಿದ್ರೆ ಟೀಮ್ ಇಂಡಿಯಾ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯುವುದು ಖಚಿತ.
ಏಕೆಂದರೆ ಟಿ20 ವಿಶ್ವಕಪ್​ಗೆ ತಂಡ ಫೈನಲ್ ಆಗಿದ್ದರೂ, ಟೂರ್ನಿ ಆರಂಭಕ್ಕೂ ಮುನ್ನ ಟೀಮ್​ನಲ್ಲಿ ಬದಲಾವಣೆ ಮಾಡಿಕೊಳ್ಳಲು ಐಸಿಸಿ ಅನುಮತಿ ನೀಡಲಿದೆ. ಈ ಆಯ್ಕೆಯ ಮೂಲಕ ಮೊಹಮ್ಮದ್ ಶಮಿಯನ್ನು ತಂಡಕ್ಕೆ ಸೇರಿಸಿಕೊಳ್ಳಬಹುದು.

ಈ ಹಿಂದೆ ಕೂಡ ಟೀಮ್ ಇಂಡಿಯಾ ಇಂತಹದೊಂದು ಬದಲಾವಣೆ ಮಾಡಿಕೊಂಡಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ. 2021 ರ ಟಿ20 ವಿಶ್ವಕಪ್​ ತಂಡಕ್ಕೆ ಅಕ್ಷರ್ ಪಟೇಲ್ ಆಯ್ಕೆಯಾಗಿದ್ದರು. ಆದರೆ ಟಿ20 ವಿಶ್ವಕಪ್ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಮೀಸಲು ಆಟಗಾರರ ಪಟ್ಟಿಯಲ್ಲಿದ್ದ ಶಾರ್ದೂಲ್ ಠಾಕೂರ್​ಗೆ ಚಾನ್ಸ್ ನೀಡಲಾಗಿತ್ತು. ಅಲ್ಲದೆ ಅಕ್ಷರ್ ಪಟೇಲ್​ ಅವರನ್ನು ಮೀಸಲು ಆಟಗಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗಿತ್ತು.

ಹೀಗಾಗಿ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧದ ಸರಣಿಗಳಲ್ಲಿ ಮೊಹಮ್ಮದ್ ಶಮಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದೆ ಆದಲ್ಲಿ, ಅದೇ ಸರಣಿಯಲ್ಲಿ ಕಳಪೆ ಬೌಲಿಂಗ್ ಪ್ರದರ್ಶನ ನೀಡಿದ ಬೌಲರ್​ರೊಬ್ಬರು ಟಿ20 ವಿಶ್ವಕಪ್​ ತಂಡದಿಂದ ಹೊರಬೀಳಲಿದ್ದಾರೆ. ಅವರ ಸ್ಥಾನದಲ್ಲಿ ಮೊಹಮ್ಮದ್ ಶಮಿಗೆ ಅವಕಾಶ ಸಿಗಬಹುದು.

ಇದೇ ಕಾರಣಕ್ಕಾಗಿ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗಾಗಿ ಮೊಹಮ್ಮದ್ ಶಮಿಯನ್ನು ಮುಖ್ಯ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅಲ್ಲದೆ ಟಿ20 ವಿಶ್ವಕಪ್​ ತಂಡದಲ್ಲಿ ಮೀಸಲು ಆಟಗಾರರ ಪಟ್ಟಿಯಲ್ಲಿರಿಸಲಾಗಿದೆ. ಅಂದರೆ ಮೊಹಮ್ಮದ್ ಶಮಿ ಟಿ20 ವಿಶ್ವಕಪ್ ಆಡಲಿದ್ದಾರಾ ಎಂಬುದು ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧ ಆಡಲಿರುವ 6 ಟಿ20 ಪಂದ್ಯಗಳ ಮೂಲಕ ನಿರ್ಧಾರವಾಗಲಿದೆ ಎನ್ನಬಹುದು.

ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹರ್.

 

 

 

 

Published On - 6:30 pm, Thu, 15 September 22