Team India: ಮೊಹಮ್ಮದ್ ಶಮಿ ಡೌಟ್: ಟೀಮ್ ಇಂಡಿಯಾಗೆ ತೂಫಾನ್ ವೇಗಿ ಎಂಟ್ರಿ..?

Mohammed Shami: ಟಿ20 ವಿಶ್ವಕಪ್ ತಂಡದಲ್ಲಿ ಮೀಸಲು ಆಟಗಾರನಾಗಿ ಕಾಣಿಸಿಕೊಂಡಿರುವ ಮೊಹಮ್ಮದ್ ಶಮಿ ಕಳೆದ ಒಂದು ವರ್ಷದಿಂದ ಭಾರತದ ಪರ ಟಿ20 ಪಂದ್ಯವಾಡಿಲ್ಲ.

Team India: ಮೊಹಮ್ಮದ್ ಶಮಿ ಡೌಟ್: ಟೀಮ್ ಇಂಡಿಯಾಗೆ ತೂಫಾನ್ ವೇಗಿ ಎಂಟ್ರಿ..?
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Sep 26, 2022 | 6:28 PM

ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ ಟಿ20 ಸರಣಿಗೂ ಮೊಹಮ್ಮದ್ ಶಮಿ (Mohammed Shami) ಅಲಭ್ಯರಾಗುವ ಸಾಧ್ಯತೆಯಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಮುನ್ನ ಕೊರೋನಾ ಸೋಂಕಿಗೆ ಒಳಗಾಗಿದ್ದ ಶಮಿ ತಂಡದಿಂದ ಹೊರಗುಳಿದಿದ್ದರು. ಇದೀಗ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲೂ ಶಮಿ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗುತ್ತಿದೆ. ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯಲ್ಲಿ ಮೊಹಮ್ಮದ್ ಶಮಿ ಕಾಣಿಸಿಕೊಳ್ಳದಿದ್ದರೆ ಅವರನ್ನು ಟಿ20 ವಿಶ್ವಕಪ್ ತಂಡದಿಂದ ಕೈ ಬಿಡುವ ಸಾಧ್ಯತೆಯಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಿ20 ವಿಶ್ವಕಪ್ ತಂಡದಲ್ಲಿ ಮೀಸಲು ಆಟಗಾರನಾಗಿ ಕಾಣಿಸಿಕೊಂಡಿರುವ ಮೊಹಮ್ಮದ್ ಶಮಿ ಕಳೆದ ಒಂದು ವರ್ಷದಿಂದ ಭಾರತದ ಪರ ಟಿ20 ಪಂದ್ಯವಾಡಿಲ್ಲ. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಸರಣಿಯು ಹಿರಿಯ ವೇಗಿಯ ಪಾಲಿಗೆ ನಿರ್ಣಾಯಕ. ಒಂದು ವೇಳೆ ಮುಂಬರುವ ಸರಣಿಯಿಂದಲೂ ಕೊರೋನಾ ಕಾರಣದಿಂದ ಹೊರಗುಳಿದರೆ ಅವರ ಬದಲಿಗೆ ಬಿಸಿಸಿಐ ಮತ್ತೋರ್ವ ವೇಗಿಯನ್ನು ಆಯ್ಕೆ ಮಾಡಲಿದೆ ಎಂದು ವರದಿಯಾಗಿದೆ.

ಅದರಂತೆ ಈ ಪಟ್ಟಿಯಲ್ಲಿ ಟೀಮ್ ಇಂಡಿಯಾ ಸ್ಪೀಡ್ ಮಾಸ್ಟರ್​ ಉಮ್ರಾನ್ ಮಲಿಕ್ ಹೆಸರು ಮುಂಚೂಣಿಯಲ್ಲಿದೆ. ಈಗಾಗಲೇ ಜಮ್ಮು ಕಾಶ್ಮೀರದ ಯುವ ವೇಗಿಗೆ ಸಿದ್ಧತೆಯಲ್ಲಿರುವಂತೆ ತಿಳಿಸಲಾಗಿದ್ದು, ಒಂದು ವೇಳೆ ಶಮಿ ಹೊರಗುಳಿದರೆ ಉಮ್ರಾನ್ ಮಲಿಕ್ ಮೀಸಲು ಆಟಗಾರನಾಗಿ ಆಯ್ಕೆಯಾಗಲಿದ್ದಾರೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಹೀಗಾಗಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ ಉಮ್ರಾನ್ ಮಲಿಕ್ ಮೀಸಲು ಆಟಗಾರನಾಗಿ ತೆರಳುವ ಸಾಧ್ಯತೆ ಹೆಚ್ಚಿದೆ. ಇದಾಗ್ಯೂ ಶಮಿ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡರೆ ಮಲಿಕ್ ನೆಟ್ ಬೌಲರ್ ಆಗಿ ತಂಡದ ಜೊತೆ ಇರಲಿದ್ದಾರೆ. ಏಕೆಂದರೆ ಆಸ್ಟ್ರೇಲಿಯಾದ ಬೌನ್ಸಿ ಪಿಚ್​ನಲ್ಲಿ ಬ್ಯಾಟಿಂಗ್ ಮಾಡುವುದು ಸುಲಭವಲ್ಲ.

ಹಾಗಾಗಿ ಭಾರತೀಯ ಬ್ಯಾಟ್ಸ್​ಮನ್​ಗಳಿಗೆ ಅಭ್ಯಾಸದ ವೇಳೆ 150 ಕಿ.ಮೀ ವೇಗದಲ್ಲಿ ಚೆಂಡೆಸೆಳೆಯಲು ಮಲಿಕ್ ಅವರನ್ನು ಕಳುಹಿಸಿಕೊಡುವ ಸಾಧ್ಯತೆ ಹೆಚ್ಚಿದೆ. ಈ ಹಿಂದೆ 2021 ರ ಟಿ20 ವಿಶ್ವಕಪ್ ವೇಳೆ ಉಮ್ರಾನ್ ಮಲಿಕ್ ಟೀಮ್ ಇಂಡಿಯಾದ ನೆಟ್ ಬೌಲರ್ ಆಗಿ ಕಾಣಿಸಿಕೊಂಡಿದ್ದರು. ಹೀಗಾಗಿ ಆಸ್ಟ್ರೇಲಿಯಾಗೂ ಜಮ್ಮು ಎಕ್ಸ್​ಪ್ರೆಸ್ ನೆಟ್ ಬೌಲರ್​ ಆಗಿ ತೆರೆಳುವ ಸಾಧ್ಯತೆಯಿದೆ. ಆದರೆ ಅದಕ್ಕೂ ಮುನ್ನ ಮೊಹಮ್ಮದ್ ಶಮಿ ಅವರ ಲಭ್ಯತೆಯು ಸ್ಪಷ್ಟವಾಗಬೇಕಿದೆ. ಶಮಿ ಅಲಭ್ಯರಾದರೆ ಉಮ್ರಾನ್ ಮಲಿಕ್ ಮೀಸಲು ಆಟಗಾರನಾಗಿ ಟೀಮ್ ಇಂಡಿಯಾದಲ್ಲಿ ಅವಕಾಶ ಪಡೆಯಲಿದ್ದಾರೆ.

ಭಾರತ-ಸೌತ್ ಆಫ್ರಿಕಾ ನಡುವಣ ಸರಣಿಯು ಸೆಪ್ಟೆಂಬರ್ 28 ರಿಂದ ಶುರುವಾಗಲಿದ್ದು, ಈ ಸರಣಿಯಿಂದ ಮೊಹಮ್ಮದ್ ಶಮಿ ಹೊರಗುಳಿದರೆ ಅವರ ಬದಲಿ ಆಟಗಾರನಾಗಿ ಉಮ್ರಾನ್ ಮಲಿಕ್ ಅವಕಾಶ ಪಡೆಯುವುದು ಬಹುತೇಕ ಖಚಿತ ಎಂದು ವರದಿಯಾಗಿದೆ. ಆಸ್ಟ್ರೇಲಿಯಾ ಸರಣಿಯಲ್ಲಿ ಶಮಿ ಬದಲಿಗೆ ಕಾಣಿಸಿಕೊಂಡ ಉಮೇಶ್ ಯಾದವ್ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿ ಈ ಬಾರಿ ಯುವ ವೇಗಿಗೆ ಚಾನ್ಸ್ ನೀಡುವ ಸಾಧ್ಯತೆಯಿದೆ. ಅದರಂತೆ ಶಮಿ ಸ್ಥಾನದಲ್ಲಿ ಟಿ20 ವಿಶ್ವಕಪ್ ಬಳಗದಲ್ಲಿ ಉಮ್ರಾನ್ ಮಲಿಕ್ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಸೌತ್ ಆಫ್ರಿಕಾ ಟಿ20 ಸರಣಿಗೆ ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್,  ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ*.

Published On - 2:10 pm, Mon, 26 September 22

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್