‘ಚೆನ್ನಾಗಿ ಆಡಿದರೆ ನಮ್ಮ ಭವಿಷ್ಯಕ್ಕೆ ಒಳ್ಳೆಯದು’: ಅಚ್ಚರಿಯ ಹೇಳಿಕೆ ನೀಡಿದ ಮೊಹಮ್ಮದ್ ಶಮಿ ಮಾಜಿ ಪತ್ನಿ

Hasin Jahan on Mohammed Shami: ಒಂದೆಡೆ ಶಮಿಯ ಅಸಾಧಾರಣ ಪ್ರದರ್ಶನಕ್ಕೆ ಇಡೀ ಕ್ರಿಕೆಟ್ ಜಗತ್ತು ಬೆಚ್ಚಿ ಬಿದ್ದಿದ್ದರೆ ಮತ್ತೊಂದೆಡೆ ಪತಿಯ ಯಶಸ್ಸಿನ ಬಗ್ಗೆ ಶಮಿ ಅವರ ಮಾಜಿ ಪತ್ನಿ ಹಸಿನ್ ಜಹಾನ್ ವಿಚಿತ್ರ ಹೇಳಿಕೆ ನೀಡಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ.

‘ಚೆನ್ನಾಗಿ ಆಡಿದರೆ ನಮ್ಮ ಭವಿಷ್ಯಕ್ಕೆ ಒಳ್ಳೆಯದು’: ಅಚ್ಚರಿಯ ಹೇಳಿಕೆ ನೀಡಿದ ಮೊಹಮ್ಮದ್ ಶಮಿ ಮಾಜಿ ಪತ್ನಿ
ಮೊಹಮ್ಮದ್ ಶಮಿ, ಮಾಜಿ ಪತ್ನಿImage Credit source: insidesport
Follow us
ಪೃಥ್ವಿಶಂಕರ
|

Updated on:Nov 08, 2023 | 11:15 AM

ವಿಶ್ವಕಪ್ (ICC World Cup 2023) ಟೂರ್ನಿಯ ಮೊದಲ ಮೂರು ಪಂದ್ಯಗಳಲ್ಲಿ ತಂಡದಲ್ಲಿ ಸ್ಥಾನ ಪಡೆಯದ ಮೊಹಮ್ಮದ್ ಶಮಿ (Mohammed Shami), ಶಾರ್ದೂಲ್ ಠಾಕೂರ್ ಬದಲಿಗೆ ತಂಡಕ್ಕೆ ಆಯ್ಕೆಯಾಗಿದ್ದು, ಎಲ್ಲರಿಗೂ ಅಚ್ಚರಿ ಮೂಡಿಸುವ ಪ್ರದರ್ಶನ ನೀಡುತ್ತಿದ್ದಾರೆ. ವಿಶ್ವಕಪ್​ನಲ್ಲಿ ಇದುವರೆಗೆ 4 ಪಂದ್ಯಗಳನ್ನಾಡಿರುವ ಶಮಿ ಬರೋಬ್ಬರಿ 16 ವಿಕೆಟ್ ಉರುಳಿಸಿ ಅತಿ ಹೆಚ್ಚು ವಿಕೆಟ್ ಪಡೆದವರ ಪೈಕಿ ಪ್ರಸ್ತುತ 4ನೇ ಸ್ಥಾನದಲ್ಲಿದ್ದಾರೆ. ಒಂದೆಡೆ ಶಮಿಯ ಅಸಾಧಾರಣ ಪ್ರದರ್ಶನಕ್ಕೆ ಇಡೀ ಕ್ರಿಕೆಟ್ ಜಗತ್ತು ಬೆಚ್ಚಿ ಬಿದ್ದಿದ್ದರೆ ಮತ್ತೊಂದೆಡೆ ಪತಿಯ ಯಶಸ್ಸಿನ ಬಗ್ಗೆ ಶಮಿ ಅವರ ಮಾಜಿ ಪತ್ನಿ ಹಸಿನ್ ಜಹಾನ್ (Hasin Jahan) ವಿಚಿತ್ರ ಹೇಳಿಕೆ ನೀಡಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ.

ನಮ್ಮ ಭವಿಷ್ಯಕ್ಕೆ ಒಳ್ಳೆಯದು

ನ್ಯೂಸ್‌ನೇಷನ್‌ಗೆ ನೀಡಿದ ಸಂದರ್ಶನದಲ್ಲಿ, ನಡೆಯುತ್ತಿರುವ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಗೆಲುವಿನಲ್ಲಿ ಮೊಹಮ್ಮದ್ ಶಮಿ ಅವರ ಪ್ರದರ್ಶನದ ಬಗ್ಗೆ ಚಾನೆಲ್‌ನವರು ಶಮಿ ಅವರ ಮಾಜಿ ಪತ್ನಿ ಹಸಿನ್ ಜಹಾನ್ ಅವರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ಹಸಿನ್ ಜಹಾನ್, ‘ನಾನು ಕ್ರಿಕೆಟ್ ಅಭಿಮಾನಿಯಲ್ಲ ಎಂದಿದ್ದಾರೆ. ಆದರೆ ಮೊಹಮ್ಮದ್ ಶಮಿ ಉತ್ತಮವಾಗಿ ಆಡಿದರೆ ಭಾರತ ತಂಡದಲ್ಲಿ ಮುಂದುವರಿಯುತ್ತಾರೆ ಎಂಬ ನಂಬಿಕೆ ಇದೆ. ಈ ರೀತಿಯ ಉತ್ತಮ ಪ್ರದರ್ಶನ ಬಂದರೆ ಚೆನ್ನಾಗಿ ದುಡಿಯಬಹುದು. ಇದರಿಂದ ನಮ್ಮ ಕುಟುಂಬಕ್ಕೂ ಒಳ್ಳೆಯದಾಗುತ್ತದೆ ಎಂದಿದ್ದಾರೆ.

1 ಲಕ್ಷ 30 ಸಾವಿರ ಜೀವನಾಂಶ

ವಾಸ್ತವವಾಗಿ ಮೊಹಮ್ಮದ್ ಶಮಿ ಹಾಗೂ ಮಡದಿ ಹಸಿನ್ ಜಹಾನ್ ವೈವಾಹಿಕ ಜೀವನ ಹಳಿ ತಪ್ಪಿದ ರೈಲಾಗಿದೆ. 2014 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದ ಈ ಜೋಡಿಗೆ 2015 ರಲ್ಲಿ ಒಂದು ಮಗು ಕೂಡ ಜನಿಸಿತ್ತು. ಆದರೆ 2018 ರಲ್ಲಿ, ಹಸೀನ್ ವರದಕ್ಷಿಣೆ ಸೇರಿದಂತೆ ಹಲವು ವಿಷಯಗಳಲ್ಲಿ ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಶಮಿ ಹಾಗೂ ಅವರ ಕುಟುಂಬದ ವಿರುದ್ಧ ಕಿರುಕುಳ ಪ್ರಕರಣವನ್ನು ದಾಖಲಿಸಿದ್ದರು. 2018 ರಿಂದ ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಆದರೆ ಇತ್ತೀಚೆಗಷ್ಟೇ ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ತೀರ್ಪು ನೀಡಿರುವ ಕೋಲ್ಕತ್ತಾ ನ್ಯಾಯಾಲಯ ಶಮಿ ಹಸೀನ್‌ಗೆ ಪ್ರತಿ ತಿಂಗಳು 1 ಲಕ್ಷ 30 ಸಾವಿರ ಜೀವನಾಂಶ ನೀಡುವಂತೆ ಆದೇಶಿಸಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:13 am, Wed, 8 November 23

ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​
ಬಾಕ್ಸಿಂಗ್ ಡೇ ಟೆಸ್ಟ್​ಗಾಗಿ ಬೆವರಿಳಿಸಿದ ಟೀಮ್ ಇಂಡಿಯಾ ಬೌಲರ್​ಗಳು
ಬಾಕ್ಸಿಂಗ್ ಡೇ ಟೆಸ್ಟ್​ಗಾಗಿ ಬೆವರಿಳಿಸಿದ ಟೀಮ್ ಇಂಡಿಯಾ ಬೌಲರ್​ಗಳು