AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ರೇಸ್​ನಲ್ಲಿ ಮೊಹಮ್ಮದ್ ಶಮಿ: ವರದಿ

Mohammed Shami: ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಮೊಹಮ್ಮದ್ ಶಮಿ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದ್ದಾರೆ. ಡಿಸೆಂಬರ್ 26 ರಿಂದ ಆರಂಭವಾಗಲಿರುವ 2 ಪಂದ್ಯಗಳ ಈ ಸರಣಿಯಲ್ಲಿ ಶಮಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ.

ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ರೇಸ್​ನಲ್ಲಿ ಮೊಹಮ್ಮದ್ ಶಮಿ: ವರದಿ
Mohammed Shami
TV9 Web
| Edited By: |

Updated on: Dec 13, 2023 | 6:30 PM

Share

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ (Mohammed Shami) ಅವರ ಹೆಸರನ್ನು ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ವರದಿಯಾಗಿದೆ. ಇತ್ತೀಚೆಗಷ್ಟೇ ಮುಗಿದ ಏಕದಿನ ವಿಶ್ವಕಪ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಶಮಿ ಒಟ್ಟು 24 ವಿಕೆಟ್ ಕಬಳಿಸಿದ್ದರು. ಈ ಮೂಲಕ ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೇ ಕಾರಣದಿಂದಾಗಿ ಇದೀಗ ಬಿಸಿಸಿಐ ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಗೆ ಶಮಿಯ ಹೆಸರನ್ನು ಶಿಫಾರಸ್ಸು ಮಾಡಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಮಾಡಿದ ವರದಿಯ ಪ್ರಕಾರ, ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವಕ್ಕೆ ನಾಮನಿರ್ದೇಶನಗೊಂಡವರ ಪಟ್ಟಿಯಲ್ಲಿ ಶಮಿ ಹೆಸರು ಇರಲಿಲ್ಲ. ಇದೀಗ ಮೊದಲ ಪಟ್ಟಿಯಲ್ಲಿ ಕಾಣಿಸಿಕೊಳ್ಳದ ಟೀಮ್ ಇಂಡಿಯಾ ವೇಗಿಯ ಹೆಸರನ್ನು ಪರಿಗಣಿಸಲು ಬಿಸಿಸಿಐ ಕ್ರೀಡಾ ಸಚಿವಾಲಯಕ್ಕೆ ವಿಶೇಷ ವಿನಂತಿಯನ್ನು ಮಾಡಿದೆ. ಹೀಗಾಗಿ ಅರ್ಜುನ ಪ್ರಶಸ್ತಿ ರೇಸ್​ನಲ್ಲಿ ಮೊಹಮ್ಮದ್ ಶಮಿ ಹೆಸರು ಸೇರ್ಪಡೆಯಾಗಲಿದೆ ಎಂದು ವರದಿಯಾಗಿದೆ.

ಈ ಬಾರಿಯ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ಮೊಹಮ್ಮದ್ ಶಮಿ ಕೇವಲ 7 ಪಂದ್ಯಗಳನ್ನಾಡಿದ್ದರು. ಈ ವೇಳೆ 10.70 ರ ಸರಾಸರಿಲ್ಲಿ ಒಟ್ಟು 24 ವಿಕೆಟ್ ಕಬಳಿಸಿದ್ದರು. ಈ ಮೂಲಕ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಹೊರಹೊಮ್ಮಿದ್ದರು. ಈ ಅಮೋಘ ಪ್ರದರ್ಶನದ ಫಲವಾಗಿ ಇದೀಗ ದೇಶದ ಪ್ರತಿಷ್ಠಿತ ಕ್ರೀಡಾ ಗೌರವ ಅರ್ಜುನ ಪ್ರಶಸ್ತಿಗೆ ಶಮಿಯ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ.

ಇದನ್ನೂ ಓದಿ: 5 ವಿಕೆಟ್​ಗೆ 5 ದಾಖಲೆಗಳು: ಇದು ಮೊಹಮ್ಮದ್ ಶಮಿ ಮ್ಯಾಜಿಕ್

ಸದ್ಯ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಮೊಹಮ್ಮದ್ ಶಮಿ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದ್ದಾರೆ. ಡಿಸೆಂಬರ್ 26 ರಿಂದ ಆರಂಭವಾಗಲಿರುವ 2 ಪಂದ್ಯಗಳ ಈ ಸರಣಿಯಲ್ಲಿ ಶಮಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಅಂದರೆ ಏಕದಿನ ವಿಶ್ವಕಪ್​ ಬಳಿಕ ಮೊಹಮ್ಮದ್ ಶಮಿ, ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್​ ಸರಣಿಯೊಂದಿಗೆ ಕಂಬ್ಯಾಕ್ ಮಾಡಲಿದ್ದಾರೆ.

ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು