Jasprit Bumrah: ಜಸ್​ಪ್ರಿತ್ ಬುಮ್ರಾ ಜಾಗಕ್ಕೆ ಮತ್ತೊಬ್ಬ ಸ್ಟಾರ್ ವೇಗಿಯನ್ನು ಆಯ್ಕೆ ಮಾಡಿದ ಬಿಸಿಸಿಐ

Mohammed Siraj, IND vs SA: ಬಿಸಿಸಿಐ ಜಸ್​ಪ್ರಿತ್ ಬುಮ್ರಾ ಜಾಗಕ್ಕೆ ಮತ್ತೊಬ್ಬ ವೇಗಿಯನ್ನು ಆಯ್ಕೆ ಮಾಡಿದೆ. ದ. ಆಫ್ರಿಕಾ ವಿರುದ್ಧ ಬಾಕಿ ಇರುವ ಎರಡು ಟಿ20 ಪಂದ್ಯಕ್ಕೆ ಬುಮ್ರಾ ಬದಲು ಮೊಹಮ್ಮದ್ ಸಿರಾಜ್​ಗೆ ಸ್ಥಾನ ನೀಡಲಾಗಿದೆ.

Jasprit Bumrah: ಜಸ್​ಪ್ರಿತ್ ಬುಮ್ರಾ ಜಾಗಕ್ಕೆ ಮತ್ತೊಬ್ಬ ಸ್ಟಾರ್ ವೇಗಿಯನ್ನು ಆಯ್ಕೆ ಮಾಡಿದ ಬಿಸಿಸಿಐ
Jasprit Bumrah and Team India
Follow us
TV9 Web
| Updated By: Vinay Bhat

Updated on: Sep 30, 2022 | 11:22 AM

ಕಾಂಗರೂಗಳ ನಾಡಿನಲ್ಲಿ ಮುಂದಿನ ತಿಂಗಳು ಆರಂಭವಾಗಲಿರುವ ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್​ಗೂ (T20 World Cup 2022) ಮುನ್ನ ಟೀಮ್ ಇಂಡಿಯಾಗೆ ದೊಡ್ಡ ಆಘಾತ ಉಂಟಾಗಿದೆ. ತಂಡದ ಪ್ರಮುಖ ವೇಗಿ ಜಸ್​ಪ್ರೀತ್​ ಬುಮ್ರಾ (Jasprit Bumrah) ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿ ಸೇರಿದಂತೆ ಟಿ20 ವಿಶ್ವಕಪ್​ನಿಂದ ಹೊರಬಿದ್ದಿದ್ದಾರೆ. ಬೆನ್ನು ನೋವಿನ ಕಾರಣ ಬುಮ್ರಾ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯ ಆಡಿರಲಿಲ್ಲ. ಇದೀಗ ಬೆನ್ನು ನೋವಿನ ಸಮಸ್ಯೆ ಹೆಚ್ಚಾಗಿರುವ ಕಾರಣ ಬುಮ್ರಾಗೆ ಶಸ್ತ್ರ ಚಿಕಿತ್ಸೆಯ ಅಗತ್ಯವಿಲ್ಲದಿದ್ದರೂ 4 ರಿಂದ 6 ತಿಂಗಳುಗಳ ಕಾಲ ವಿಶ್ರಾಂತಿ ಬೇಕಾಗಿದೆ ಎಂದು ಬಿಸಿಸಿಐ ವೈದ್ಯಕೀಯ ತಂಡ ಹೇಳಿದೆ. ಇದರ ಬೆನ್ನಲ್ಲೇ ಬಿಸಿಸಿಐ ಬುಮ್ರಾ ಜಾಗಕ್ಕೆ ಮತ್ತೊಬ್ಬ ವೇಗಿಯನ್ನು ಆಯ್ಕೆ ಮಾಡಿದೆ. ದ. ಆಫ್ರಿಕಾ ವಿರುದ್ಧ ಬಾಕಿ ಇರುವ ಎರಡು ಟಿ20 ಪಂದ್ಯಕ್ಕೆ ಬುಮ್ರಾ ಬದಲು ಮೊಹಮ್ಮದ್ ಸಿರಾಜ್​ಗೆ (Mohammed Siraj) ಸ್ಥಾನ ನೀಡಲಾಗಿದೆ.

ಭಾರತ ಕ್ರಿಕೆಟ್ ತಂಡ ಹಿರಿಯ ಆಯ್ಕೆ ಸಮಿತಿಯು ಮೊಹಮ್ಮದ್ ಸಿರಾಜ್ ಅವರನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಉಳಿದ ಟಿ20 ಸರಣಿಗೆ ಗಾಯಾಳು ಜಸ್ಪ್ರೀತ್ ಬುಮ್ರಾಗೆ ಬದಲಿಯಾಗಿ ನೇಮಿಸಿದೆ ಎಂದು ಬಿಸಿಸಿಐ ತನ್ನ ಹೇಳಿಕಯಲ್ಲಿ ತಿಳಿಸಿದೆ. ಸಿರಾಜ್ ಭಾರತ ಪರ ಐದು ಟಿ ಪಂದ್ಯಗಳನ್ನು ಆಡಿದ್ದಾರೆ, ಕೊನೆಯ T20I ಈ ವರ್ಷದ ಆರಂಭದಲ್ಲಿ ಶ್ರೀಲಂಕಾ ವಿರುದ್ಧ ಆಡಿದ್ದರು. ಉಳಿದ 2 ಪಂದ್ಯಗಳಲ್ಲಿ ಸಿರಾಜ್ ಅವಕಾಶ ಪಡೆದು ಮಿಂಚಿದರೆ ಟಿ20 ವಿಶ್ವಕಪ್​ ಬಳಗದಲ್ಲಿ ಸ್ಥಾನ ಪಡೆಯುವುದು ಖಚಿತ ಎಂದೇ ಹೇಳಬಹುದು.

ಐಸಿಸಿಯ ಬಹುದೊಡ್ಡ ಟೂರ್ನಿ ಆರಂಭಕ್ಕೂ ಮುನ್ನ ಭಾರತದ ಆಟಗಾರರು ಇಂಜುರಿಗೆ ತುತ್ತಾಗುತ್ತಿರುವುದು ಮ್ಯಾನೇಜ್ಮೆಂಟ್​ಗೆ ತಲೆನೋವಾಗಿದೆ. ಈಗಾಗಲೇ ಕಾಲಿಗೆ ಗಾಯ ಮಾಡಿಕೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಆಲ್​ರೌಂಡರ್​ ರವೀಂದ್ರ ಜಡೇಜಾ ವಿಶ್ವಕಪ್​ನಿಂದ ಹೊರಬಿದ್ದಿದ್ದಾರೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಪಂದ್ಯಗಳಲ್ಲಿ ಬೂಮ್ರಾ ಕೂಡ ಕಣಕ್ಕಿಯದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರದ ಕಾರಣ ಅವರು ಸರಣಿಯ ಎಲ್ಲ ಪಂದ್ಯಗಳಲ್ಲಿ ಭಾಗವಹಿಸುತ್ತಿಲ್ಲ ಎಂಬ ವಾದ ಕೇಳಿ ಬಂದಿತ್ತು. ಆದರೆ ಬೆನ್ನು ಮೂಳೆ ಗಾಯಕ್ಕೆ ತುತ್ತಾಗಿದ್ದಾರೆ ಎಂಬ ಸುದ್ದಿ ಅಭಿಮಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿದೆ.

ಇದನ್ನೂ ಓದಿ
Image
Suryakumar Yadav: ಆತ ಆರೆಂಜ್ ಕ್ಯಾಪ್, ಪಂದ್ಯಶ್ರೇಷ್ಠ ಗೆಲ್ಲದಿರಬಹುದು ಆದ್ರೆ ಪಂದ್ಯ ಗೆಲ್ಲಿಸಿಕೊಡುತ್ತಾನೆ ಎಂದ ಕೈಫ್
Image
Suryakumar Yadav: ಧೋನಿ, ಕೊಹ್ಲಿ, ರೋಹಿತ್​ರೊಂದಿಗೆ ವಿಶೇಷ ಸ್ಥಾನ ಹಂಚಿಕೊಳ್ಳಲು ತಯಾರಾದ ಸೂರ್ಯಕುಮಾರ್
Image
Mohammad Rizwan: ಕೊಹ್ಲಿ-ರಾಹುಲ್ ಸಾಧನೆ ಹಿಂದಿಕ್ಕಿ ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ಮೊಹಮ್ಮದ್ ರಿಜ್ವಾನ್
Image
National Games 2022: 36ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ

ಗುವಾಹಟಿಗೆ ಬಂದಿಳಿದ ಭಾರತ:

ತಿರುವನಂತಪುರದಲ್ಲಿ ನಡೆದ ಮೊದಲನೇ ಟಿ20 ಪಂದ್ಯದಲ್ಲಿ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಭಾರತ ತಂಡ ಇದೀಗ ಎರಡನೇ ಟಿ20 ಪಂದ್ಯಕ್ಕಾಗಿ ಗುವಾಹಟಿಗೆ ಬಂದಿಳಿದಿದೆ. ಅಕ್ಟೋಬರ್ 2ರಂದು ಭಾನುವಾರ ಅಸ್ಸಾಂನ ಗುವಾಹಟಿಯ ಬರ್ಸಾಪರಾ ಕ್ರೀಡಾಂಗಣದಲ್ಲಿ ಎರಡನೇ ಟಿ20 ಪಂದ್ಯ ನಿಗದಿಯಾಗಿದೆ. ಭಾರತೀಯ ಆಟಗಾರರು ಶುಕ್ರವಾರ ಸಂಪೂರ್ಣ ತರಬೇತಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಪ್ರಾರಂಭಿಸಲು ನಿಗದಿಪಡಿಸಲಾಗಿದೆ. ಕೆಲವು ಭಾರತೀಯ ಆಟಗಾರರು ಗುವಾಹಟಿಗೆ ತೆರೆಳಲು ವಿಮಾನ ಹತ್ತುವ ಮುನ್ನ ಸಾಮಾಜಿಕ ಮಾಧ್ಯಮದಲ್ಲಿ ಚಿತ್ರಗಳನ್ನು ಪೋಸ್ಟ್ ಮಾಡಿದ್ದು ಸಖತ್ ವೈರಲ್ ಆಗುತ್ತಿದೆ.

ಬಿಪಿಎಲ್ ಕಾರ್ಡ್ ರದ್ದು: ಸರ್ಕಾರ ನಡೆ ಸ್ವಾಗತಿಸಿದ ಬಿಜೆಪಿ ಎಂಪಿ ರಾಘವೇಂದ್ರ
ಬಿಪಿಎಲ್ ಕಾರ್ಡ್ ರದ್ದು: ಸರ್ಕಾರ ನಡೆ ಸ್ವಾಗತಿಸಿದ ಬಿಜೆಪಿ ಎಂಪಿ ರಾಘವೇಂದ್ರ
ಬಾಲನಟ ರೋಹಿತ್​ಗೆ ಅಪಘಾತ ಆಗಿದ್ದು ಹೇಗೆ? ಈಗ ಆರೋಗ್ಯ ಹೇಗಿದೆ?
ಬಾಲನಟ ರೋಹಿತ್​ಗೆ ಅಪಘಾತ ಆಗಿದ್ದು ಹೇಗೆ? ಈಗ ಆರೋಗ್ಯ ಹೇಗಿದೆ?
PDO ಪರೀಕ್ಷೆಯಲ್ಲೂ ಎಡವಟ್ಟು, ಅರ್ಧಂಬರ್ಧ ಪ್ರಶ್ನೆ ಪತ್ರಿಕೆ ಕಳುಹಿಸಿದ KPSC
PDO ಪರೀಕ್ಷೆಯಲ್ಲೂ ಎಡವಟ್ಟು, ಅರ್ಧಂಬರ್ಧ ಪ್ರಶ್ನೆ ಪತ್ರಿಕೆ ಕಳುಹಿಸಿದ KPSC
ಎಸ್​ಎಸ್​ಎಲ್​ಸಿಯಲ್ಲಿ ಫೇಲ್ ಆಗಿದ್ದಕ್ಕೆ ವಿಗ್ರಹ ವಿರೂಪಗೊಳಿಸಿದ ಬಾಲಕ
ಎಸ್​ಎಸ್​ಎಲ್​ಸಿಯಲ್ಲಿ ಫೇಲ್ ಆಗಿದ್ದಕ್ಕೆ ವಿಗ್ರಹ ವಿರೂಪಗೊಳಿಸಿದ ಬಾಲಕ
ಪ್ರಧಾನಿ ಮೋದಿಯನ್ನು ಆತ್ಮೀಯತೆಯಿಂದ ಬರಮಾಡಿಕೊಂಡ ನೈಜೀರಿಯಾದ ಜನ
ಪ್ರಧಾನಿ ಮೋದಿಯನ್ನು ಆತ್ಮೀಯತೆಯಿಂದ ಬರಮಾಡಿಕೊಂಡ ನೈಜೀರಿಯಾದ ಜನ
ಮಣಿಪುರ ಹಿಂಸಾಚಾರ, ಮುಖ್ಯಮಂತ್ರಿ, ಶಾಸಕರ ಮನೆಗೆ ನುಗ್ಗಲು ಯತ್ನ
ಮಣಿಪುರ ಹಿಂಸಾಚಾರ, ಮುಖ್ಯಮಂತ್ರಿ, ಶಾಸಕರ ಮನೆಗೆ ನುಗ್ಗಲು ಯತ್ನ
ಪತಿ-ಪತ್ನಿ ಒಂದೇ ರಾಶಿಯವರಾಗಿದ್ದರೆ ಏನರ್ಥ? ವಿಡಿಯೋ ನೋಡಿ
ಪತಿ-ಪತ್ನಿ ಒಂದೇ ರಾಶಿಯವರಾಗಿದ್ದರೆ ಏನರ್ಥ? ವಿಡಿಯೋ ನೋಡಿ
ವಾರ ಭವಿಷ್ಯ: ನವೆಂಬರ್​ 18 ರಿಂದ 24ರವರೆಗೆ ವಾರ ಭವಿಷ್
ವಾರ ಭವಿಷ್ಯ: ನವೆಂಬರ್​ 18 ರಿಂದ 24ರವರೆಗೆ ವಾರ ಭವಿಷ್
Nithya Bhavishya: ಈ ರಾಶಿಯವರಿಗೆ ಇಂದು ನಿವೇಶನ ಖರೀದಿಸುವ ಯೋಗವಿದೆ
Nithya Bhavishya: ಈ ರಾಶಿಯವರಿಗೆ ಇಂದು ನಿವೇಶನ ಖರೀದಿಸುವ ಯೋಗವಿದೆ
ರೇಷನ್‌ ಕಾರ್ಡ್ ರದ್ದಾಗಿರುವುದಕ್ಕೆ ಸರ್ಕಾರದ ವಿರುದ್ಧ ಮಹಿಳೆಯರು ಕಿಡಿ
ರೇಷನ್‌ ಕಾರ್ಡ್ ರದ್ದಾಗಿರುವುದಕ್ಕೆ ಸರ್ಕಾರದ ವಿರುದ್ಧ ಮಹಿಳೆಯರು ಕಿಡಿ