ಬಹುಮಾನ ಮೊತ್ತವನ್ನು ಮೈದಾನದ ಸಿಬ್ಬಂದಿಗಳಿಗೆ ನೀಡಿದ ಸಿರಾಜ್

Mohammed Siraj: ಸಿರಾಜ್ ಅವರ ಈ ಅದ್ಭುತ ಬೌಲಿಂಗ್ ಪ್ರದರ್ಶನದಿಂದಾಗಿ ಶ್ರೀಲಂಕಾ ತಂಡವು ಕೇವಲ 50 ರನ್​ಗಳಿಗೆ ಆಲೌಟ್ ಆಯಿತು. ಅಲ್ಲದೆ 51 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 6.1 ಓವರ್​ಗಳಲ್ಲಿ ಟಾರ್ಗೆಟ್ ತಲುಪುವ ಮೂಲಕ 10 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತು.

ಬಹುಮಾನ ಮೊತ್ತವನ್ನು ಮೈದಾನದ ಸಿಬ್ಬಂದಿಗಳಿಗೆ ನೀಡಿದ ಸಿರಾಜ್
Mohammed Siraj
Follow us
TV9 Web
| Updated By: ಝಾಹಿರ್ ಯೂಸುಫ್

Updated on:Sep 17, 2023 | 8:10 PM

ಏಷ್ಯಾಕಪ್​ನ ಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಕರಾರುವಾಕ್ ದಾಳಿ ಮೂಲಕ ಮಿಂಚಿದ್ದರು. ಈ ಅದ್ಭುತ ಪ್ರದರ್ಶನಕ್ಕೆ ಲಭಿಸಿದ ಪ್ರಶಸ್ತಿ ಮೊತ್ತವನ್ನು ಇದೀಗ ಮೈದಾನದ ಸಿಬ್ಬಂದಿಗಳಿಗೆ ನೀಡುವ ಮೂಲಕ ಎಲ್ಲರ ಮನಗೆದ್ದಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು.

ಆದರೆ ಟೀಮ್ ಇಂಡಿಯಾ ಬೌಲರ್​ಗಳ ಮಿಂಚಿನ ದಾಳಿ ಮುಂದೆ ಕ್ರೀಸ್ ಕಚ್ಚಿ ನಿಲ್ಲುವಲ್ಲಿ ಶ್ರೀಲಂಕಾ ಬ್ಯಾಟರ್​ಗಳು ಪರದಾಡಿದರು. ಅದರಲ್ಲೂ ಮೊಹಮ್ಮದ್ ಸಿರಾಜ್ 4ನೇ ಓವರ್​ನಲ್ಲಿ 4 ವಿಕೆಟ್ ಕಬಳಿಸುವ ಲಂಕಾ ತಂಡಕ್ಕೆ ಆಘಾತ ನೀಡಿದರು.

ಇದರ ಬೆನ್ನಲ್ಲೇ ದಸುನ್ ಶಾನಕ ರನ್ನು ಕ್ಲೀನ್ ಬೌಲ್ಡ್ ಮಾಡಿದ ಸಿರಾಜ್ 5 ವಿಕೆಟ್​ಗಳ ಸಾಧನೆ ಮಾಡಿದರು. ಆ ಬಳಿಕ ಕುಸಾಲ್ ಮೆಂಡಿಸ್​ಗೂ ಪೆವಿಲಿಯನ್ ಹಾದಿ ತೋರಿಸಿದರು. ಈ ಮೂಲಕ ಕೇವಲ 7 ಓವರ್​ಗಳಲ್ಲಿ 21 ರನ್ ನೀಡಿ 6 ವಿಕೆಟ್ ಉರುಳಿಸಿದರು.

ಸಿರಾಜ್ ಅವರ ಈ ಅದ್ಭುತ ಬೌಲಿಂಗ್ ಪ್ರದರ್ಶನದಿಂದಾಗಿ ಶ್ರೀಲಂಕಾ ತಂಡವು ಕೇವಲ 50 ರನ್​ಗಳಿಗೆ ಆಲೌಟ್ ಆಯಿತು. ಅಲ್ಲದೆ 51 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 6.1 ಓವರ್​ಗಳಲ್ಲಿ ಟಾರ್ಗೆಟ್ ತಲುಪುವ ಮೂಲಕ 10 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತು.

ಸಿರಾಜ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ:

ಈ ಪಂದ್ಯದಲ್ಲಿ ಕರಾರುವಾಕ್ ದಾಳಿ ಸಂಘಟಿಸಿದ ಸಿರಾಜ್ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿತು. ಆದರೆ ತನಗೆ ಸಿಕ್ಕಿದ 5 ಸಾವಿರ ಡಾಲರ್ ಪ್ರಶಸ್ತಿ ಮೊತ್ತವನ್ನು ಸಿರಾಜ್ ಕೊಲಂಬೊದ ಮೈದಾನದ ಸಿಬ್ಬಂದಿಗಳಿಗೆ ಅರ್ಪಿಸಿದರು. ಏಕೆಂದರೆ ಏಷ್ಯಾಕಪ್​ನ ಸೂಪರ್-4 ಪಂದ್ಯಗಳ ವೇಳೆ

ಈ ಬಗ್ಗೆ ಮಾತನಾಡಿದ ಸಿರಾಜ್, ಮೈದಾನದ ಸಿಬ್ಬಂದಿಗಳು ಇರದಿದ್ದರೆ ಈ ಟೂರ್ನಿಯನ್ನು ನಡೆಸಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಈ ನಗದು ಬಹುಮಾನ ಅವರಿಗೆ ಸಲ್ಲಬೇಕು. ಇದನ್ನು ನಾನು ಅವರಿಗೆ ನೀಡುತ್ತೇನೆ ಎಂದು ತಿಳಿಸಿದರು. ಇದೀಗ ಮೊಹಮ್ಮದ್ ಸಿರಾಜ್ ಅವರ ಮಾನವೀಯ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

50 ಸಾವಿರ ಡಾಲರ್ ನೀಡಿದ ಎಸಿಸಿ:

ಈ ಬಾರಿಯ ಏಷ್ಯಾಕಪ್​ ಸೂಪರ್-4 ಪಂದ್ಯಗಳು ಮಳೆಯ ಕಾರಣ ನಡೆಯುವುದು ಅನುಮಾನ ಎನ್ನಲಾಗಿತ್ತು. ಆದರೆ ಮೈದಾನ ಸಿಬ್ಬಂದಿಗಳ ಸತತ ಪರಿಶ್ರಮದ ಫಲವಾಗಿ ಎಲ್ಲಾ ಪಂದ್ಯಗಳು ನಿಗದಿಯಂತೆ ನಡೆಸಲು ಸಾಧ್ಯವಾಗಿದೆ. ಈ ಪರಿಶ್ರಮಕ್ಕೆ ಫಲವಾಗಿ ಇದೀಗ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮತ್ತು ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಮೈದಾನದ ಸಿಬ್ಬಂದಿಗಳಿಗೆ  ಮತ್ತು ಪಿಚ್ ಕ್ಯುರೇಟರ್‌ಗಳಿಗೆ 50000  ಯುಎಸ್​ ಡಾಲರ್​ ನಗದು ಬಹುಮಾನವನ್ನು ನೀಡಿದೆ.

Published On - 7:24 pm, Sun, 17 September 23

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ