IND vs WI: ಯುವ ಆಟಗಾರರಿಗೆ ಬ್ಯಾಟ್, ಶೂಸ್ ಗಿಫ್ಟ್ ನೀಡಿದ ಮೊಹಮ್ಮದ್ ಸಿರಾಜ್
India vs West Indies: ಭಾರತ-ವೆಸ್ಟ್ ಇಂಡೀಸ್ ನಡುವಣ ಸರಣಿಯು ಬುಧವಾರದಿಂದ ಶುರುವಾಗಲಿದ್ದು, ಈ ಸರಣಿಯಲ್ಲಿ ಮೊದಲಿಗೆ 2 ಟೆಸ್ಟ್ ಪಂದ್ಯಗಳನ್ನಾಡಲಾಗುತ್ತದೆ.
India vs West Indies: ಭಾರತ-ವೆಸ್ಟ್ ಇಂಡೀಸ್ ನಡುವಣ ಸರಣಿಗೆ ಕೌಂಟ್ ಡೌನ್ ಶುರುವಾಗಿದೆ. ಜುಲೈ 12 ರಿಂದ ಆರಂಭವಾಗಲಿರುವ ಈ ಸರಣಿಯಲ್ಲಿ ಭಾರತ ತಂಡವು 2 ಟೆಸ್ಟ್, 3 ಏಖದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ. ಇದಕ್ಕಾಗಿ ಇದೀಗ ಟೀಮ್ ಇಂಡಿಯಾ ಆಟಗಾರರು ಬಾರ್ಬಡೋಸ್ನಲ್ಲಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಈ ವೇಳೆ ಭಾರತೀಯ ಆಟಗಾರರ ಅಭ್ಯಾಸಕ್ಕೆ ವಿಂಡೀಸ್ನ ಯುವ ಆಟಗಾರರು ಸಾಥ್ ನೀಡಿದ್ದರು.
ಈ ಅಭ್ಯಾಸದ ಬಳಿಕ ಟೀಮ್ ಇಂಡಿಯಾ ಆಟಗಾರರು ವಿಂಡೀಸ್ನ ಯುವ ಆಟಗಾರರೊಂದಿಗೆ ಸೆಲ್ಫಿಗೆ ಪೋಸ್ ನೀಡಿದರು. ಇದೇ ವೇಳೆ ಮೊಹಮ್ಮದ್ ಸಿರಾಜ್ ಯುವ ಆಟಗಾರೊಬ್ಬರಿಗೆ ಬ್ಯಾಟ್ವೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಅಷ್ಟೇ ಅಲ್ಲದೆ ಮತ್ತೋರ್ವ ಯುವ ಬೌಲರ್ಗೆ ಶೂಸ್ ಗಿಫ್ಟ್ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಮೊಹಮ್ಮದ್ ಸಿರಾಜ್, ಕಳೆದ ಎರಡು ದಿನಗಳಿಂದ ಅಭ್ಯಾಸ ನಡೆಸಲು ಅವರು ನಮಗೆ ತುಂಬಾ ನೆರವಾಗಿದ್ದಾರೆ. ಹೀಗಾಗಿ ಏನಾದರೂ ಉಡುಗೊರೆ ನೀಡಬೇಕೆಂದು ಅನಿಸಿತು. ಅದಕ್ಕಾಗಿ ಬ್ಯಾಟ್ ಹಾಗೂ ಶೂಸ್ ನೀಡಿದ್ದೇನೆ ಎಂದಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ಬಿಸಿಸಿಐ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಭಾರೀ ವೈರಲ್ ಆಗಿದೆ.
Kind gestures ? Autographs ✍️ Selfies ? Dressing room meets ?#TeamIndia make it special for the local players and fans in Barbados ? #WIvIND pic.twitter.com/TaWmeqrNS6
— BCCI (@BCCI) July 7, 2023
ಇನ್ನು ಭಾರತ-ವೆಸ್ಟ್ ಇಂಡೀಸ್ ನಡುವಣ ಸರಣಿಯು ಬುಧವಾರದಿಂದ ಶುರುವಾಗಲಿದ್ದು, ಈ ಸರಣಿಯಲ್ಲಿ ಮೊದಲಿಗೆ 2 ಟೆಸ್ಟ್ ಪಂದ್ಯಗಳನ್ನಾಡಲಾಗುತ್ತದೆ. ಜುಲೈ 12 ರಿಂದ ಮೊದಲ ಟೆಸ್ಟ್ ಪಂದ್ಯ ಶುರುವಾಗಲಿದ್ದು, ಇದಾದ ಬಳಿಕ ಜುಲೈ 20 ರಿಂದ 2ನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ.
ಆ ಬಳಿಕ ಜುಲೈ 27, 29 ಮತ್ತು ಆಗಸ್ಟ್ 1 ರಂದು ಮೂರು ಏಕದಿನ ಪಂದ್ಯಗಳು ನಡೆಯಲಿದೆ. ಇನ್ನು ಆಗಸ್ಟ್ 3, 6, 8, 12 ಮತ್ತು ಆಗಸ್ಟ್ 13 ರಂದು ಕ್ರಮವಾಗಿ 5 ಟಿ20 ಪಂದ್ಯಗಳನ್ನು ಆಡಲಾಗುತ್ತದೆ. ಈ ಮೂರು ಸರಣಿಗಾಗಿ ಟೀಮ್ ಇಂಡಿಯಾ ಈ ಕೆಳಗಿನಂತಿದೆ.
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್, ಅಕ್ಷರ್ ಪಟೇಲ್, ಕೆಎಸ್ ಭರತ್ (ವಿಕೆಟ್ ಕೀಪರ್), ಅಜಿಂಕ್ಯ ರಹಾನೆ (ಉಪನಾಯಕ), ರವಿಚಂದ್ರನ್ ಅಶ್ವಿನ್, ರುತುರಾಜ್ ಗಾಯಕ್ವಾಡ್, ಜೈಸ್ವಾಲ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಜಯದೇವ್ ಉನಾದ್ಕತ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ನವದೀಪ್ ಸೈನಿ.
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ ಪಟೇಲ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನಾದ್ಕತ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.
ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್ನಲ್ಲಿನ ಟೀಮ್ ಇಂಡಿಯಾದ 9 ಎದುರಾಳಿಗಳು ಇವರೇ..!
ಭಾರತ ಟಿ20 ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯ ಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.