ಟ್ರಾವಿಸ್ ಹೆಡ್ಗೆ ದಾಟು ಎಂದ ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿಗೆ ವಾರ್ನಿಂಗ್..!
Mohammed Siraj - Travis Head: ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಮೊಹಮ್ಮದ್ ಸಿರಾಜ್ 4 ವಿಕೆಟ್ ಕಬಳಿಸಿದ್ದಾರೆ. ಈ ವಿಕೆಟ್ನೊಂದಿಗೆ ಟ್ರಾವಿಸ್ ಹೆಡ್ ಅವರ ಜೊತೆ ಮಾತಿನ ಚಕಮಕಿ ಕೂಡ ನಡೆಸಿದರು.
ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಪಿಂಕ್ ಬಾಲ್ ಟೆಸ್ಟ್ ಪಂದ್ಯವು ರಣರೋಚಕ ಪೈಪೋಟಿಗೆ ಸಾಕ್ಷಿಯಾಗುತ್ತಿದೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್ ವೇಳೆ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಹಾಗೂ ಆಸ್ಟ್ರೇಲಿಯಾ ಬ್ಯಾಟರ್ ಟ್ರಾವಿಸ್ ಹೆಡ್ ನಡುವೆ ಮಾತಿನ ಚಕಮಕಿ ನಡೆದಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕೇವಲ 180 ರನ್ಗಳಿಗೆ ಆಲೌಟ್ ಆಗಿತ್ತು. ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ.
ಅದರಲ್ಲೂ ದ್ವಿತೀಯ ದಿನದಾಟದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಮಾರ್ನಸ್ ಲಾಬುಶೇನ್ 64 ರನ್ಗಳಿಸಿದರು. ಇನ್ನು ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟ್ರಾವಿಸ್ ಹೆಡ್ ವಿಸ್ಪೋಟಕ ಬ್ಯಾಟಿಂಗ್ನೊಂದಿಗೆ ಅಬ್ಬರಿಸಿದರು.
ಭಾರತೀಯ ಬೌಲರ್ಗಳನ್ನು ಹಿಗ್ಗಾಮುಗ್ಗಾ ದಂಡಿಸಿದ ಹೆಡ್ ಕೇವಲ 111 ಎಸೆತಗಳಲ್ಲಿ ಶತಕ ಪೂರೈಸಿದರು. ಶತಕದ ಬಳಿಕ ಕೂಡ ಟ್ರಾವಿಸ್ ಅಬ್ಬರ ಮುಂದುವರೆಯಿತು. ಅದರಲ್ಲೂ ಸಿರಾಜ್ ಎಸೆದ 82ನೇ ಓವರ್ನ ಮೊದಲ ಎಸೆತದಲ್ಲಿ ಹೆಡ್ ಫೋರ್ ಬಾರಿಸಿದರು. ಅಲ್ಲದೆ ಮೂರನೇ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದರು.
ನಾಲ್ಕನೇ ಎಸೆತದಲ್ಲಿ ಟ್ರಾವಿಸ್ ಹೆಡ್ (140) ಮೊಹಮ್ಮದ್ ಸಿರಾಜ್ ಕ್ಲೀನ್ ಬೌಲ್ಡ್ ಮಾಡಿದರು. ಅತ್ತ ಬೌಲ್ಡ್ ಆಗುತ್ತಿದ್ದಂತೆ ಹೆಡ್ ಅದೇನೋ ಗೊಣಗಿದ್ದಾರೆ. ಇದರಿಂದ ಕುಪಿತಗೊಂಡ ಮೊಹಮ್ಮದ್ ಸಿರಾಜ್ ಕೂಡ ವಾಗ್ದಾಳಿಗೆ ಇಳಿದಿದ್ದಾರೆ. ಇದರ ನಡುವೆ ಸಿರಾಜ್ ಹೋಗಲೋ ಎನ್ನುವಂತೆ ಕೈ ಸನ್ನೇ ಮಾಡಿದ್ದಾರೆ.
ಇದನ್ನು ಗಂಭೀರವಾಗಿ ಪರಿಗಣಿಸಿರುವ ಅಂಪೈರ್ಗಳು ಮೊಹಮ್ಮದ್ ಸಿರಾಜ್ ಅವರಿಗೆ ವಾರ್ನಿಂಗ್ ನೀಡಿದ್ದಾರೆ. ಇದೀಗ ಟ್ರಾವಿಸ್ ಹೆಡ್ ಹಾಗೂ ಮೊಹಮ್ಮದ್ ಸಿರಾಜ್ ನಡುವಣ ಮಾತಿನ ಚಕಮಕಿಯ ವಿಡಿಯೋ ವೈರಲ್ ಆಗಿದೆ.
ಇನ್ನು ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ಆಸ್ಟ್ರೇಲಿಯಾ ತಂಡವು 337 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಮೊದಲ ಇನಿಂಗ್ಸ್ನಲ್ಲಿ 157 ರನ್ಗಳ ಮುನ್ನಡೆದುಕೊಂಡಿದೆ. ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್ ಹಾಗೂ ಜಸ್ಪ್ರೀತ್ ಬುಮ್ರಾ ತಲಾ 4 ವಿಕೆಟ್ ಕಬಳಿಸಿದ್ದಾರೆ.