ಟೀಮ್ ಇಂಡಿಯಾ ಬೌಲಿಂಗ್ ಕೋಚ್ ಜೊತೆ ‘ಲೆಜೆಂಡ್’ ಸಿರಾಜ್ ಹುಡುಗಾಟ
India vs Australia: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊರಗುಳಿದಿದ್ದಾರೆ. ಹೀಗಾಗಿ ಪರ್ತ್ ಟೆಸ್ಟ್ನಲ್ಲಿ ಭಾರತ ತಂಡದ ನಾಯಕರಾಗಿ ಜಸ್ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಪರ್ತ್ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ. ವೆಸ್ಟರ್ನ್ ಆಸ್ಟ್ರೇಲಿಯಾ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಅಭ್ಯಾಸ ಪಂದ್ಯದ ನಡುವೆ ಟೀಮ್ ಇಂಡಿಯಾ ಕೋಚ್ ಬೌಲಿಂಗ್ ಕೋಚ್ ಮೊರ್ನೆ ಮೋರ್ಕೆಲ್ ಚಿಟ್ಚಾಟ್ನಲ್ಲಿ ಕಾಣಿಸಿಕೊಂಡಿದ್ದಾರೆ.
ಈ ವೇಳೆ ಅಭ್ಯಾಸದ ಕುರಿತು ಮಾಹಿತಿ ನೀಡಿದ್ದರು. ಆದರೆ ಇತ್ತ ಮೊರ್ನೆ ಮೋರ್ಕೆಲ್ ಮಾತನಾಡುತ್ತಿದ್ದರೆ, ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಹಿಂಬದಿಯಿಂದ ಬಂದು ಅಣಕಿಸಿದ್ದಾರೆ. ಇನ್ನು ಗಮನಿಸಿದ ಮೊರ್ಕೆಲ್ ಸಿರಾಜ್ ಅವರನ್ನು ಲೆಜೆಂಡ್ ಎಂದು ಕರೆಯುವ ಮೂಲಕ ಒಂದಷ್ಟು ಮಾಹಿತಿ ಹಂಚಿಕೊಂಡರು.
ಮೊಹಮ್ಮದ್ ಸಿರಾಜ್ ದೊಡ್ಡ ಹೃದಯವಂತ. ಆಕ್ರಮಣಕಾರಿ ಮನಸ್ಥಿತಿಯನ್ನು ಹೊಂದಿದ್ದಾನೆ. ನಮ್ಮ ವೇಗಾಸ್ತ್ರಗಳಲ್ಲಿ ಸಿರಾಜ್ ಕೂಡ ಒಬ್ಬರು. ಅವರು ಈ ಹಿಂದಿನ ಆಸ್ಟ್ರೇಲಿಯಾ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಬಾರಿ ಹೇಗೆ ಪ್ರದರ್ಶನ ನೀಡಲಿದ್ದಾರೆ ಎಂಬುದನ್ನು ನೋಡಲು ನಾನು ಉತ್ಸುಕನಾಗಿದ್ದೇನೆ ಎಂದು ಮೊರ್ನೆ ಮೋರ್ಕೆಲ್ ಹೇಳಿದ್ದಾರೆ. ಇದೀಗ ಮೊಹಮ್ಮದ್ ಸಿರಾಜ್ ಅವರ ಈ ಹುಡುಗಾಟದ ವಿಡಿಯೋ ವೈರಲ್ ಆಗಿದ್ದು, ಕ್ರಿಕೆಟ್ ಪ್ರೇಮಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ ಶುಕ್ರವಾರದಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯಕ್ಕೆ ಪರ್ತ್ನ ಒಪ್ಟಸ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ.