Team India: ಜಸ್​ಪ್ರೀತ್ ಬುಮ್ರಾ ಸ್ಥಾನದಲ್ಲಿ RCB ಆಟಗಾರ ಆಯ್ಕೆ: ವರದಿ

Jasprit Bumrah: ಜಸ್​ಪ್ರೀತ್ ಬುಮ್ರಾ ಟಿ20 ವಿಶ್ವಕಪ್​ನಿಂದ ಹೊರಗುಳಿಯಲಿರುವುದು ಇನ್ನೂ ಕೂಡ ಖಚಿತವಾಗಿಲ್ಲ. ಅಂದರೆ ನ್ಯಾಷನಲ್​ ಕ್ರಿಕೆಟ್ ಅಕಾಡೆಮಿಯಲ್ಲಿ ಬುಮ್ರಾ ಅವರ ಫಿಟ್​ನೆಸ್​ ಟೆಸ್ಟ್​ ನಡೆಯಲಿದೆ.

Team India: ಜಸ್​ಪ್ರೀತ್ ಬುಮ್ರಾ ಸ್ಥಾನದಲ್ಲಿ RCB ಆಟಗಾರ ಆಯ್ಕೆ: ವರದಿ
Team India
Edited By:

Updated on: Sep 29, 2022 | 5:25 PM

ಟಿ20 ವಿಶ್ವಕಪ್​ಗೂ (T20 World Cup 2022) ಮುನ್ನ ಟೀಮ್ ಇಂಡಿಯಾಗೆ (Team India) ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಜಸ್​ಪ್ರೀತ್​ ಬುಮ್ರಾ (Jasprit Bumrah) ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿಯಲಿದ್ದಾರೆ. ಬೆನ್ನು ನೋವಿನ ಕಾರಣ ಬುಮ್ರಾ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯ ಆಡಿರಲಿಲ್ಲ. ಇದೀಗ ಬೆನ್ನು ನೋವಿನ ಸಮಸ್ಯೆ ಹೆಚ್ಚಾಗಿರುವ ಕಾರಣ ಬುಮ್ರಾರನ್ನು ಸೌತ್ ಆಫ್ರಿಕಾ ಸರಣಿಯಿಂದ ಕೈ ಬಿಡಲಾಗಿದೆ. ಅಲ್ಲದೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಗೆ ಕಳುಹಿಸಲಾಗಿದೆ. ಅಂದರೆ ಟಿ20 ವಿಶ್ವಕಪ್​ಗೂ ಮುನ್ನ ಅವರು ಚೇತರಿಸಿಕೊಂಡರೆ ಮಾತ್ರ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದೇ ಕಾರಣದಿಂದಾಗಿ ಇದೀಗ ಬಿಸಿಸಿಐ ಬದಲಿ ವೇಗಿಯನ್ನು ಟೀಮ್ ಇಂಡಿಯಾಗೆ ಆಯ್ಕೆ ಮಾಡಿದೆ ಎಂದು ವರದಿಯಾಗಿದೆ. ಈ ವರದಿ ಪ್ರಕಾರ, ಸೌತ್ ಆಫ್ರಿಕಾ ವಿರುದ್ಧದ ಉಳಿದ 2 ಟಿ20 ಪಂದ್ಯಗಳಿಗೆ ಜಸ್​ಪ್ರೀತ್ ಬುಮ್ರಾ ಬದಲಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಮೊಹಮ್ಮದ್ ಸಿರಾಜ್​ಗೆ ಬುಲಾವ್ ನೀಡಲಾಗಿದೆ. ಅದರಂತೆ ಸಿರಾಜ್ ದಕ್ಷಿಣ ಆಫ್ರಿಕಾ ವಿರುದ್ಧದ ಉಳಿದೆರಡು ಪಂದ್ಯಗಳಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಇದಾಗ್ಯೂ ಜಸ್​ಪ್ರೀತ್ ಬುಮ್ರಾ ಟಿ20 ವಿಶ್ವಕಪ್​ನಿಂದ ಹೊರಗುಳಿಯಲಿರುವುದು ಇನ್ನೂ ಕೂಡ ಖಚಿತವಾಗಿಲ್ಲ. ಅಂದರೆ ನ್ಯಾಷನಲ್​ ಕ್ರಿಕೆಟ್ ಅಕಾಡೆಮಿಯಲ್ಲಿ ಬುಮ್ರಾ ಅವರ ಫಿಟ್​ನೆಸ್​ ಟೆಸ್ಟ್​ ನಡೆಯಲಿದೆ. ಇದಾದ ಬಳಿಕ ಅವರ ಚೇತರಿಸಿಕೊಳ್ಳಲು ಎಷ್ಟು ದಿನಗಳು ಬೇಕಾಗಬಹುದು ಎಂಬುದು ನಿರ್ಧಾರವಾಗಲಿದೆ. ಒಂದು ವೇಳೆ ಅಕ್ಟೋಬರ್ 23 ರೊಳಗೆ ಜಸ್​ಪ್ರೀತ್ ಬುಮ್ರಾ ಚೇತರಿಸಿಕೊಳ್ಳುವುದು ಅನುಮಾನವಾದರೆ ತಂಡದಿಂದ ಹೊರಬೀಳಲಿದ್ದಾರೆ. ಅಲ್ಲದೆ ಅವರ ಬದಲಿ ಆಟಗಾರನನ್ನು ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಈಗಾಗಲೇ ಟಿ20 ವಿಶ್ವಕಪ್ ತಂಡದಲ್ಲಿ ಮೀಸಲು ಆಟಗಾರರಾಗಿ ಮೊಹಮ್ಮದ್ ಶಮಿ ಹಾಗೂ ದೀಪಕ್ ಚಹರ್ ಇದ್ದಾರೆ. ಇವರಲ್ಲಿ ಒಬ್ಬರನ್ನು ಮುಖ್ಯ ತಂಡಕ್ಕೆ ಆಯ್ಕೆ ಮಾಡುವ ಸಾಧ್ಯತೆಯಿದೆ. ಹಾಗೆಯೇ ಮೀಸಲು ಆಟಗಾರರ ಪಟ್ಟಿಗೆ ಮೊಹಮ್ಮದ್ ಸಿರಾಜ್​ರನ್ನು ಸೇರಿಸಿಕೊಳ್ಳಬಹುದು.

ಸದ್ಯ ಮೊಹಮ್ಮದ್ ಸಿರಾಜ್ ಅವರನ್ನು ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದ್ದು, ಅದರಂತೆ ಉಳಿದ 2 ಪಂದ್ಯಗಳಲ್ಲಿ ಸಿರಾಜ್ ಅವಕಾಶ ಪಡೆದು ಮಿಂಚಿದರೆ ಟಿ20 ವಿಶ್ವಕಪ್​ ಬಳಗದಲ್ಲಿ ಸ್ಥಾನ ಪಡೆಯುವುದು ಖಚಿತ ಎಂದೇ ಹೇಳಬಹುದು.

ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ಟಿ20 ತಂಡ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ದೀಪಕ್ ಚಹಾರ್, ಶಹಬಾಜ್ ಅಹ್ಮದ್.