AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammed Siraj: ಆಡಿದ್ದು 7 ಪಂದ್ಯ: 39 ವರ್ಷಗಳ ಹಳೆಯ ಕಪಿಲ್ ದೇವ್ ದಾಖಲೆ ಸರಿಗಟ್ಟಿದ ಮೊಹಮ್ಮದ್ ಸಿರಾಜ್

India vs England second Test: ಲಾರ್ಡ್ಸ್ ಅಂಗಳದಲ್ಲಿ ನಡೆದ ಪಂದ್ಯವೊಂದರಲ್ಲಿ 8 ವಿಕೆಟ್ ಪಡೆದ ಮೊಹಮ್ಮದ್ ಸಿರಾಜ್ 1982ರಲ್ಲಿ ಕಪಿಲ್ ದೇವ್ ಮಾಡಿದ್ದ ದಾಖಲೆಯನ್ನು ಸರಿದೂಗಿಸಿಕೊಂಡಿದ್ದಾರೆ

Mohammed Siraj: ಆಡಿದ್ದು 7 ಪಂದ್ಯ: 39 ವರ್ಷಗಳ ಹಳೆಯ ಕಪಿಲ್ ದೇವ್ ದಾಖಲೆ ಸರಿಗಟ್ಟಿದ ಮೊಹಮ್ಮದ್ ಸಿರಾಜ್
ಅದರಂತೆ ಕೇವಲ 7 ಟೆಸ್ಟ್​ಗಳಲ್ಲೇ 38ನೇ ಸ್ಥಾನ ಅಲಂಕರಿಸುವಲ್ಲಿ ಸಿರಾಜ್ (Mohammed Siraj) ಯಶಸ್ವಿಯಾಗಿದ್ದಾರೆ.
TV9 Web
| Edited By: |

Updated on: Aug 17, 2021 | 9:54 AM

Share

ಮೊಹಮ್ಮದ್ ಸಿರಾಜ್ (Mohammed Siraj) ಭಾರತ ಕ್ರಿಕೆಟ್ ತಂಡದಲ್ಲಿ ಮಿಂಚುತ್ತಿರುವ ಯುವ ವೇಗಿ. ಟೆಸ್ಟ್ ಕ್ರಿಕೆಟ್​ಗೆ ಹೇಳಿಮಾಡಿಸಿದಂತಹ ಬೌಲಿಂಗ್ ಶೈಲಿ ಹೊಂದಿರುವ ಸಿರಾಜ್ ಆಡಿದ ಕೆಲವೇ ಪಂದ್ಯಗಳಲ್ಲಿ ತಮ್ಮ ಸಾಮರ್ಥ್ಯ ತೋರ್ಪಡಿಸಿದ್ದಾರೆ. ಲಾರ್ಡ್ಸ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್​ ಪಂದ್ಯದಲ್ಲಿ ಇಂಗ್ಲೆಂಡ್ ಬ್ಯಾಟ್ಸ್​ಮನ್​ಗಳ ಹುಟ್ಟಡಗಿಸಿದ ಸಿರಾಜ್ ಹೊಸ ದಾಖಲೆ ಬರೆದರು. ಅದಕೂಡ 39 ವರ್ಷಗಳ ಹಳೆಯ ದಿಗ್ಗಜ ಕಪಿಲ್ ದೇವ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ಭಾರತ ನೀಡಿದ್ದ 272 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಆಂಗ್ಲರಿಗೆ ಸಿರಾಜ್ ಮಾರಕವಾಗಿ ಪರಿಣಮಿಸಿದರು. ಆರಂಭದಲ್ಲಿ ಪ್ರಮುಖ ವಿಕೆಟ್ ಕಳೆದುಕೊಂಡ ಬಳಿಕ ಡ್ರಾ ಮಾಡುವತ್ತ ಚಿತ್ತನೆಟ್ಟಿದ್ದ ಇಂಗ್ಲೆಂಡ್​ಗೆ ಆರ್​ಸಿಬಿ ವೇಗಿ ಶಾಕ್ ಮೇಲೆ ಶಾಕ್ ಕೊಟ್ಟರು. ಮೊದಲ ಇನ್ನಿಂಗ್ಸ್​ನಲ್ಲಿ 30 ಓವರ್ ಬೌಲಿಂಗ್ ಮಾಡಿ 94 ರನ್ ನೀಡಿದ 4 ವಿಕೆಟ್ ಕಿತ್ತರೆ, ಎರಡನೇ ಇನ್ನಿಂಗ್ಸ್​ನಲ್ಲೂ 10.5 ಓವರ್ ಬೌಲಿಂಗ್ ಮಾಡಿ 32 ರನ್ ನೀಡಿ 4 ವಿಕೆಟ್ ಕಬಳಿಸಿದರು.

ಈ ಮೂಲಕ ವಿಶ್ವ ಶ್ರೇಷ್ಠ ಲಾರ್ಡ್ಸ್ ಮೈದಾನದಲ್ಲಿ ಮೊಹಮ್ಮದ್ ಸಿರಾಜ್ ಒಟ್ಟು 8 ವಿಕೆಟ್‍ಗಳನ್ನು ಪಡೆದುಕೊಂಡಿದ್ದಾರೆ. ಹೀಗಾಗಿ ಲಾರ್ಡ್ಸ್ ಅಂಗಳದಲ್ಲಿ ನಡೆದ ಪಂದ್ಯವೊಂದರಲ್ಲಿ 8 ವಿಕೆಟ್ ಪಡೆದ ಮೊಹಮ್ಮದ್ ಸಿರಾಜ್ 1982ರಲ್ಲಿ ಕಪಿಲ್ ದೇವ್ ಮಾಡಿದ್ದ ದಾಖಲೆಯನ್ನು ಸರಿದೂಗಿಸಿಕೊಂಡಿದ್ದಾರೆ. ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್ ಪಂದ್ಯವೊಂದರಲ್ಲಿ 8 ವಿಕೆಟ್ ಪಡೆದ ಇಬ್ಬರು ಭಾರತೀಯರು ಎಂಬ ದಾಖಲೆ ಕಪಿಲ್ ದೇವ್ ಮತ್ತು ಮೊಹಮ್ಮದ್ ಸಿರಾಜ್ ಹೆಸರಿನಲ್ಲಿದೆ.

1982ರಲ್ಲಿ ಲಾರ್ಡ್ಸ್ ಅಂಗಳದಲ್ಲಿ ನಡೆದ ಟೆಸ್ಟ್ ಪಂದ್ಯವೊಂದರಲ್ಲಿ ಕಪಿಲ್ ದೇವ್ 8 ವಿಕೆಟ್ ಕಿತ್ತಿದ್ದರು. ಇದಾದ ಬಳಿಕ ಬೇರೆ ಯಾವುದೇ ಭಾರತೀಯ ಬೌಲರ್ ಕೂಡ ಈ ಸಾಧನೆಯನ್ನು ಮಾಡಿರಲಿಲ್ಲ. ಆದರೆ ಸದ್ಯ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೂಲಕ ಲಾರ್ಡ್ಸ್‌ನಲ್ಲಿ 8 ವಿಕೆಟ್ ಪಡೆದಿರುವ ಮೊಹಮ್ಮದ್ ಸಿರಾಜ್ 39 ವರ್ಷಗಳ ಹಳೆಯ ದಾಖಲೆಯನ್ನು ಸರಿದೂಗಿಸಿಕೊಂಡಿದ್ದಾರೆ.

ಈ ಹಿಂದೆ ಗಬ್ಬಾದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ನಲ್ಲಿ ಮೊಹಮ್ಮದ್ ಸಿರಾಜ್ ಮೊದಲನೇ ಇನ್ನಿಂಗ್ಸ್‌ನಲ್ಲಿ 1 ವಿಕೆಟ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಪಡೆಯುವುದರ ಮೂಲಕ ಆ ಪಂದ್ಯದಲ್ಲಿ ಒಟ್ಟು 6 ವಿಕೆಟ್ ಪಡೆದು ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು ಎಂಬುದನ್ನು ನಾವಿಲ್ಲಿ ನೆನಪಿಸಿಕೊಳ್ಳಬಹುದು.

ಇತ್ತೀಚೆಗಷ್ಟೆ ಸಿರಾಜ್ ಅವರು ವಿಕೆಟ್ ಪಡೆದಾಗ ತುಟಿಗಳ ಮೇಲೆ ಬೆರಳಿಟ್ಟಿ ಸಂಭ್ರಮಾಚರಣೆ ಮಾಡಲು ಕಾರಣವೇನು ಎಂಬುದನ್ನು ಬಹಿರಂಗ ಪಡಿಸಿದ್ದರು. “ಈ ಹೊಸ ರೀತಿಯ ಸಂಭ್ರಮಾಚರಣೆ ಹೇಟರ್ಸ್​ಗಳಿಗಾಗಿ. ಯಾಕಂದ್ರೆ ಅವರು ನನ್ನ ಬಗ್ಗೆ ಹಿಂದಿನಿಂದ ಸಾಕಷ್ಟು ಮಾತುಗಳನ್ನಾಡಿದ್ದಾರೆ. ಅವರು ನನಗೆ ಮಾಡಿದಂತೆ ನಾನು ಮಾಡುವುದಿಲ್ಲ, ಬದಲಾಗಿ ನನ್ನ ಆಟದ ಮೂಲಕ ಅಂತವರಿಗೆ ತಕ್ಕ ಉತ್ತರ ಕೊಡುತ್ತೇನೆ” ಎಂದು ಹೇಳಿದ್ದಾರೆ.

KL Rahul: ಇಲ್ಲಿ ನಮ್ಮ ಒಬ್ಬ ಆಟಗಾರನನ್ನು ಕೆಣಕಿದ್ರೆ ನಾವು 11 ಆಟಗಾರರು ತಿರುಗಿ ಬೀಳುತ್ತೇವೆ: ಕೆ.ಎಲ್ ರಾಹುಲ್

India vs England: ವಿರಾಟ್ ಕೊಹ್ಲಿ ತೆಗೆದುಕೊಂಡ ಆ ಒಂದು ನಿರ್ಧಾರ ಪಂದ್ಯದ ಗತಿಯನ್ನೇ ಬದಲಾಯಿಸಿತು

(Mohammed Siraj left Kapil behind creates a new history in Lords India vs England second Test)

Follow Us
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ: ಕುಸಿದು ಬೀಳುತ್ತಿರುವ ಬಂಡೆಗಲ್ಲುಗಳು
ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ: ಕುಸಿದು ಬೀಳುತ್ತಿರುವ ಬಂಡೆಗಲ್ಲುಗಳು
ಇಂಡೋನೇಷ್ಯಾದ ಭವ್ಯ 'ಪ್ರಂಬಾನನ್' ಶಿವ ದೇವಾಲಯಕ್ಕೆ ಪಿಎಂ ಮೋದಿ ಭೇಟಿ
ಇಂಡೋನೇಷ್ಯಾದ ಭವ್ಯ 'ಪ್ರಂಬಾನನ್' ಶಿವ ದೇವಾಲಯಕ್ಕೆ ಪಿಎಂ ಮೋದಿ ಭೇಟಿ
ಭಾರತ-ಇಂಡೋನೇಷ್ಯಾ ಸ್ನೇಹ ಅತ್ಯಂತ ಗಟ್ಟಿ ಮತ್ತು ರೋಮಾಂಚಕ: ಮೋದಿ
ಭಾರತ-ಇಂಡೋನೇಷ್ಯಾ ಸ್ನೇಹ ಅತ್ಯಂತ ಗಟ್ಟಿ ಮತ್ತು ರೋಮಾಂಚಕ: ಮೋದಿ