AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಬ್ಯೂಟಿ ಜೊತೆ ಸಿರಾಜ್ ಪ್ರೀತಿ ಪ್ರೇಮ ಪ್ರಣಯ? ವಿಡಿಯೋ ವೈರಲ್

Mohammed Siraj, Mahira Sharma Dating: 2025ರ ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ಸೇರಿರುವ ಮೊಹಮ್ಮದ್ ಸಿರಾಜ್, ಟಿ20 ತಂಡದಲ್ಲಿ ಸ್ಥಾನ ಪಡೆಯುವ ಗುರಿ ಹೊಂದಿದ್ದಾರೆ. ಇದೇ ವೇಳೆ, ಬಿಗ್ ಬಾಸ್ ಬ್ಯೂಟಿ ಮಹಿರಾ ಶರ್ಮಾ ಜೊತೆ ಪ್ರೀತಿಯಲ್ಲಿ ಬಿದ್ದಿದ್ದಾರೆಂಬ ವದಂತಿ ಮತ್ತೆ ಹರಿದಾಡುತ್ತಿದೆ. ಮುಂಬೈನ ರೆಸ್ಟೋರೆಂಟ್‌ನಲ್ಲಿ ಇಬ್ಬರೂ ಕಾಣಿಸಿಕೊಂಡ ವಿಡಿಯೋ ವೈರಲ್ ಆಗಿದ್ದು, ಸಿರಾಜ್ ತಮ್ಮ ನಿರಾಕರಣೆ ಪೋಸ್ಟ್ ಡಿಲೀಟ್ ಮಾಡಿರುವುದು ಅನುಮಾನಗಳನ್ನು ಮತ್ತಷ್ಟು ಹೆಚ್ಚಿಸಿದೆ.

ಬಿಗ್ ಬಾಸ್ ಬ್ಯೂಟಿ ಜೊತೆ ಸಿರಾಜ್ ಪ್ರೀತಿ ಪ್ರೇಮ ಪ್ರಣಯ? ವಿಡಿಯೋ ವೈರಲ್
Mohammed Siraj
ಪೃಥ್ವಿಶಂಕರ
|

Updated on:Mar 29, 2026 | 8:25 PM

Share

2025 ರ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ತಂಡದ ಬೌಲಿಂಗ್ ಜೀವಾಳ ಎನಿಸಿಕೊಂಡಿದ್ದ ವೇಗಿ ಮೊಹಮ್ಮದ್ ಸಿರಾಜ್ (Mohammed Siraj), ಮೆಗಾ ಹರಾಜಿನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಸೇರಿಕೊಂಡಿದ್ದರು. ಪ್ರಸ್ತುತ ಗುಜರಾತ್ ತಂಡದಲ್ಲಿರುವ ಸಿರಾಜ್, ಐಪಿಎಲ್‌ನಲ್ಲಿ ಘರ್ಜಿಸಲು ತಯಾರಿ ನಡೆಸುತ್ತಿದ್ದಾರೆ. ಈ ಮೂಲಕ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆಯುವುದು ಸಿರಾಜ್ ಗುರಿಯಾಗಿದೆ. ಆದರೆ ಇದೆಲ್ಲದರ ನಡುವೆ ಸಿರಾಜ್ ತಮ್ಮ ವೈಯಕ್ತಿಕ ಬದುಕಿಗೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು ಆಧಾರಿಸಿದ ಸುದ್ದಿಯ ಪ್ರಕಾರ ಸಿರಾಜ್, ಬಿಗ್ ಬಾಸ್ ಬ್ಯೂಟಿ ಮಹಿರಾ ಶರ್ಮಾ (Mahira Sharma) ಜೊತೆ ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂದು ವರದಿಯಾಗಿದೆ.

ಪ್ರೀತಿಯಲ್ಲಿ ಬಿದ್ದ ಸಿರಾಜ್

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವೀಡಿಯೊವೊಂದರಲ್ಲಿ, ಸಿರಾಜ್ ಮತ್ತು ನಟಿ ಮಹಿರಾ ಶರ್ಮಾ ಮುಂಬೈನ ಒಂದೇ ರೆಸ್ಟೋರೆಂಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ, ಇಬ್ಬರೂ ಅಕ್ಕಪಕ್ಕದಲ್ಲಿ ಕಾಣಿಸಿಕೊಂಡಿರಲಿಲ್ಲ. ಬದಲಿಗೆ, ಸಿರಾಜ್ ರೆಸ್ಟೋರೆಂಟ್‌ ಹೊರಗೆ ಅಭಿಮಾನಿಗಳಿಗೆ ಆಟೋಗ್ರಾಫ್ ನೀಡುತ್ತಿದ್ದರೆ, ಇತ್ತ ಮಹಿರಾ ರೆಸ್ಟೋರೆಂಟ್‌ನಿಂದ ಹೊರಬಂದು ತನ್ನ ಕಾರಿನ ಕಡೆಗೆ ಹೋಗುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದಾಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಇಬ್ಬರ ನಡುವೆ ಏನೋ ನಡೆಯುತ್ತಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ.

ಈ ಹಿಂದೆಯೂ ಸುದ್ದಿ ಹಬ್ಬಿತ್ತು

ಸಿರಾಜ್ ಮತ್ತು ಮಹಿರಾ ಶರ್ಮಾಗೆ ಸಂಬಂಧಿಸಿದಂತೆ ಈ ರೀತಿಯ ಸುದ್ದಿ ಹರಿದಾಡುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷವೂ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂದು ವರದಿಯಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಇಬ್ಬರು ಪರಸ್ಪರರ ಪೋಸ್ಟ್‌ಗಳಿಗೆ ಲೈಕ್ ಕೊಡುವುದು ಅಭಿಮಾನಿಗಳ ಗಮನ ಸೆಳೆದಿತ್ತು. ಆ ಸಮಯದಲ್ಲಿ, ಮಹಿರಾ ಶರ್ಮಾ ಈ ವರದಿಗಳಿಗೆ ಪ್ರತಿಕ್ರಿಯಿಸಿ, ತಾನು ಯಾರೊಂದಿಗೂ ಡೇಟಿಂಗ್ ಮಾಡುತ್ತಿಲ್ಲ ಮತ್ತು ಯಾರು ವದಂತಿಗಳನ್ನು ಹರಡಬಾರದು ಎಂದು ಮನವಿ ಮಾಡಿದ್ದರು.

MI vs KKR IPL 2026 Live Score: ಅರ್ಧಶತಕ ಪೂರೈಸಿದ ರಹಾನೆ

ಹಾಗೆಯೇ ಮೊಹಮ್ಮದ್ ಸಿರಾಜ್ ಕೂಡ ಇನ್‌ಸ್ಟಾಗ್ರಾಮ್‌ನಲ್ಲಿ ಈ ವದಂತಿ ಬಗ್ಗೆ ಪ್ರತಿಕ್ರಿಯಿಸಿ, ತಮ್ಮ ಬಗ್ಗೆ ಹರಿದಾಡುತ್ತಿರುವ ಸುದ್ದಿ ಸಂಪೂರ್ಣವಾಗಿ ಆಧಾರರಹಿತವಾಗಿದೆ ಎಂದು ಪೋಸ್ಟ್ ಮಾಡಿದ್ದರು. ಆದರೆ, ಆಶ್ಚರ್ಯಕರವಾಗಿ, ಈ ಪೋಸ್ಟ್ ಮಾಡಿದ ಸ್ವಲ್ಪ ಸಮಯದ ನಂತರ ಸಿರಾಜ್ ಆ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದರು. ಇದು ಅಭಿಮಾನಿಗಳಲ್ಲಿನ ಅನುಮಾನಗಳನ್ನು ಮತ್ತಷ್ಟು ಹೆಚ್ಚಿಸಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:25 pm, Sun, 29 March 26

Follow Us
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ