ಇಡೀ ವಿಶ್ವದಲ್ಲೇ ನಿಮ್ಮಂತಹ ಅಭಿಮಾನಿಗಳಿಲ್ಲ: RCB ಅಭಿಮಾನಿಗಳಿಗೆ ಸಿರಾಜ್​​ ಭಾವನಾತ್ಮಕ ಪತ್ರ

Mohammed Siraj: 2018 ರಿಂದ 2024ರವರೆಗೆ ಆರ್​​ಸಿಬಿ ಪರ 87 ಪಂದ್ಯಗಳನ್ನಾಡಿರುವ ಮೊಹಮ್ಮದ್ ಸಿರಾಜ್ ಒಟ್ಟು 303.2 ಓವರ್​​ಗಳನ್ನು ಎಸೆದಿದ್ದಾರೆ. ಈ ವೇಳೆ 83 ವಿಕೆಟ್ ಕಬಳಿಸಿ ಆರ್​​​ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದ ಮೂರನೇ ಬೌಲರ್​​ ಎನಿಸಿಕೊಂಡಿದ್ದಾರೆ.

ಇಡೀ ವಿಶ್ವದಲ್ಲೇ ನಿಮ್ಮಂತಹ ಅಭಿಮಾನಿಗಳಿಲ್ಲ: RCB ಅಭಿಮಾನಿಗಳಿಗೆ ಸಿರಾಜ್​​ ಭಾವನಾತ್ಮಕ ಪತ್ರ
Mohammed Siraj
Follow us
ಝಾಹಿರ್ ಯೂಸುಫ್
|

Updated on: Nov 27, 2024 | 8:33 AM

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮೊಹಮ್ಮದ್ ಸಿರಾಜ್ ನಡುವಣ 7 ವರ್ಷಗಳ ಕೊಂಡಿ ಕಳಚಿದೆ. ಈ ಬಾರಿಯ ಐಪಿಎಲ್​​ ಮೆಗಾ ಹರಾಜಿನ ಮೂಲಕ ಸಿರಾಜ್​ ಗುಜರಾತ್ ಟೈಟಾನ್ಸ್ ತಂಡದ ಪಾಲಾಗಿದ್ದಾರೆ. ಅತ್ತ ಜಿಟಿ ತಂಡಕ್ಕೆ ಸೇರ್ಪಡೆಯಾಗುತ್ತಿದ್ದಂತೆ ಸಿರಾಜ್ ಆರ್​​ಸಿಬಿ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದು ಧನ್ಯವಾದಗಳನ್ನು ತಿಳಿಸಿದ್ದಾರೆ.

ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಮುಕ್ತ ಪತ್ರ ಹಂಚಿಕೊಂಡಿರುವ ಸಿರಾಜ್, ಏಳು ವರ್ಷಗಳ ಕಾಲ ಆರ್​​ಸಿಬಿ ಅಭಿಮಾನಿಗಳು ನೀಡಿದ ಪ್ರೀತಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಅಲ್ಲದೆ ನಾನು ಯಾವುದೇ ತಂಡದ ಪರ ಕಣಕ್ಕಿಳಿದರೂ, ಆರ್​​ಸಿಬಿ ಯಾವತ್ತಿದ್ದರೂ ನನ್ನ ಹೃದಯದಲ್ಲಿರಲಿದೆ ಎಂದು ಹೇಳಿದ್ದಾರೆ. ಮೊಹಮ್ಮದ್ ಸಿರಾಜ್ ಹಂಚಿಕೊಂಡಿರುವ ಪತ್ರದ ಸಾರಾಂಶ ಈ ಕೆಳಗಿನಂತಿದೆ…

“ನನ್ನ ಪ್ರೀತಿಯ ಆರ್‌ಸಿಬಿಗೆ, ಆರ್​​ಸಿಬಿ ಜೊತೆಗಿನ 7 ವರ್ಷಗಳು ನನ್ನ ಹೃದಯಕ್ಕೆ ತುಂಬಾ ಹತ್ತಿರವಾದ ದಿನಗಳು. ಆರ್‌ಸಿಬಿ ಶರ್ಟ್‌ನಲ್ಲಿ ನನ್ನ ಸಮಯವನ್ನು ಹಿಂತಿರುಗಿ ನೋಡಿದಾಗ ನನ್ನ ಹೃದಯವು ಕೃತಜ್ಞತೆ, ಪ್ರೀತಿ ಮತ್ತು ಭಾವುಕತೆಯಿಂದ ತುಂಬಿದೆ.

ನಾನು ಮೊದಲು RCB ಜರ್ಸಿಯನ್ನು ಧರಿಸಿದಾಗ, ಇಂತಹದೊಂದು ಬಂಧ ರೂಪುಗೊಳ್ಳಲಿದೆ ಎಂದು ಭಾವಿಸಿರಲಿಲ್ಲ. ಅಲ್ಲದೆ ನಾನು RCB ಪರ ಕಣಕ್ಕಿಳಿದು ಎಸೆದ ಮೊದಲ ಎಸೆತ, ತೆಗೆದುಕೊಂಡ ಪ್ರತಿ ವಿಕೆಟ್, ಆಡಿದ ಪ್ರತಿ ಪಂದ್ಯ, ನಿಮ್ಮೊಂದಿಗೆ ಹಂಚಿಕೊಂಡ ಪ್ರತಿ ಕ್ಷಣ ಎಲ್ಲವೂ ಅತ್ಯದ್ಭುತ.

ಇದರ ನಡುವೆ ಕೆಲ ಏರಿಳಿತಗಳಿವೆ. ಆದರೆ ಎಲ್ಲದರಲ್ಲೂ ಒಂದು ವಿಷಯ ಸ್ಥಿರವಾಗಿತ್ತು. ಅದುವೇ ನಿಮ್ಮ ಅಚಲ ಬೆಂಬಲ. RCB ನನ್ನ ಪಾಲಿಗೆ ಕೇವಲ ಫ್ರಾಂಚೈಸಿ ಆಗಿರಲಿಲ್ಲ, ಅದಕ್ಕಿಂತ ಹೆಚ್ಚು. ಅದೊಂದು ಭಾವನೆ, ಹೃದಯ ಬಡಿತ, ಮನೆಯಂತೆ ಭಾಸವಾಗುವ ಕುಟುಂಬ.

ಪಂದ್ಯಗಳಲ್ಲಿ ಸೋತಾಗ ಪದಗಳಲ್ಲಿ ವಿವರಿಸಲಾಗದಷ್ಟು ನೋವಿನಲ್ಲಿ ರಾತ್ರಿಗಳನ್ನು ಕಳೆದಿದ್ದೇನೆ. ಆದರೆ ಸ್ಟ್ಯಾಂಡ್‌ಗಳಲ್ಲಿ ನಿಮ್ಮ ಧ್ವನಿಗಳು, ಸಾಮಾಜಿಕ ಮಾಧ್ಯಮದಲ್ಲಿನ ನಿಮ್ಮ ಸಂದೇಶಗಳು, ನಿಮ್ಮ ನಿರಂತರ ನಂಬಿಕೆ ನನ್ನನ್ನು ಹೊಸ ಉತ್ಸಾಹದಿಂದ ಆಡುವಂತೆ ಮಾಡುತ್ತಿತ್ತು.

RCB ಅಭಿಮಾನಿಗಳಾದ ನೀವು ಈ ತಂಡದ ಆತ್ಮ. ನೀವು ತರುವ ಶಕ್ತಿ, ನೀವು ನೀಡುವ ಪ್ರೀತಿ, ನೀವು ತೋರಿಸುವ ನಂಬಿಕೆ, ಇದಕ್ಕೆ ಸಾಟಿಯಿಲ್ಲ. ಪ್ರತಿ ಬಾರಿ ನಾನು ಮೈದಾನಕ್ಕೆ ಕಾಲಿಟ್ಟಾಗ, ನಿಮ್ಮ ಕನಸುಗಳು ಮತ್ತು ಭರವಸೆಗಳ ಭಾರವನ್ನು ನಾನು ಅನುಭವಿಸಿದ್ದೇನೆ. ಅಲ್ಲದೆ ನನ್ನಿಂದಾಗುವ ಎಲ್ಲವನ್ನೂ ನೀಡಿದ್ದೇನೆ. ಏಕೆಂದರೆ ನೀವು ನನ್ನ ಹಿಂದೆಯೇ ಇದ್ದೀರಿ ಎಂದು ನನಗೆ ತಿಳಿದಿತ್ತು. ನೀವು ನೀಡಿದ ಬೆಂಬಲ ಮತ್ತು ಪ್ರೀತಿಯಿಂದಲೇ ನಾನು ಮತ್ತಷ್ಟು ಉತ್ತಮ ಪ್ರದರ್ಶನ ನೀಡುವಂತೆ ತಳ್ಳುತ್ತಿತ್ತು.

ನಾವು ಸೋತಾಗ, ನೀವು ಕಣ್ಣೀರು ಹಾಕುವುದನ್ನು ನಾನು ನೋಡಿದ್ದೇನೆ. ಗೆದ್ದಾಗ ನಿಮ್ಮ ಸಂಭ್ರಮಗಳಿಗೆ ನಾನು ಸಾಕ್ಷಿಯಾಗಿದ್ದೇನೆ. ನಿಜವಾಗಿಯೂ ಹೇಳುತ್ತಿದ್ದೇನೆ, ಆರ್​​ಸಿಬಿ ಅಭಿಮಾನಿಗಳೇ ನಿಮ್ಮಂತಹ ಫ್ಯಾನ್ಸ್​​ ಈ ಜಗತ್ತಿನಲ್ಲಿ ಯಾರೂ ಇಲ್ಲ.

ನಿಮ್ಮ ಪ್ರೀತಿ, ನಿಮ್ಮ ಸಮರ್ಪಣೆ, ನಿಮ್ಮ ನಿಷ್ಠೆ-ಇದು ನನ್ನ ಜೀವನದುದ್ದಕ್ಕೂ ನಾನು ಪಾಲಿಸುತ್ತೇನೆ. ನಾನು ಈಗ ನನ್ನ ವೃತ್ತಿಜೀವನದ ಹೊಸ ಅಧ್ಯಾಯಕ್ಕೆ ಕಾಲಿಟ್ಟರೂ, ಆರ್‌ಸಿಬಿ ಯಾವಾಗಲೂ ನನ್ನ ಹೃದಯದ ಭಾಗದಲ್ಲಿರುತ್ತದೆ. ಇದು ವಿದಾಯ ಅಲ್ಲ – ಇದು ನನ್ನ ಧನ್ಯವಾದಗಳು. ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ, ನನ್ನನ್ನು ಅಪ್ಪಿಕೊಂಡಿದ್ದಕ್ಕಾಗಿ ಮತ್ತು ಕ್ರಿಕೆಟ್‌ಗಿಂತಲೂ ದೊಡ್ಡದೊಂದು ಭಾಗವಾಗಿ ನನ್ನನ್ನು ಭಾವಿಸಿದ್ದಕ್ಕಾಗಿ ಧನ್ಯವಾದಗಳು”- ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: IPL 2025: ಐಪಿಎಲ್​ ಅಖಾಡದಲ್ಲಿ 13 ಕನ್ನಡಿಗರು

ಆರ್​​​ಸಿಬಿ ಅಭಿಮಾನಿಗಳನ್ನು ತಾನೆಷ್ಟು ಮಿಸ್ ಮಾಡಿಕೊಳ್ಳುತ್ತೇನೆ ಎಂದು ಬಹಿರಂಗವಾಗಿ ತಿಳಿಸಿರುವ ಮೊಹಮ್ಮದ್ ಸಿರಾಜ್ ಮುಂದಿನ ಸೀಸನ್​​ನಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯಲಿದ್ದಾರೆ. ಈ ಬಾರಿಯ ಐಪಿಎಲ್​ ಮೆಗಾ ಹರಾಜಿನಲ್ಲಿ ಗುಜರಾತ್ ಫ್ರಾಂಚೈಸಿ ಸಿರಾಜ್ ಅವರನ್ನು 12.25 ಕೋಟಿ ರೂ.ಗೆ ಖರೀದಿಸಿದೆ. ಇದಾಗ್ಯೂ ಆರ್​​ಸಿಬಿ ಆರ್​​ಟಿಎಂ ಆಯ್ಕೆಯ ಮೂಲಕ ಸಿರಾಜ್ ಅವರನ್ನು ತಂಡದಲ್ಲಿ ಉಳಿಸಿಕೊಂಡಿಲ್ಲ ಎಂಬುದು ಅಚ್ಚರಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ