AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammed Siraj: ಮೊಹಮ್ಮದ್ ಸಿರಾಜ್​ಗೆ ಅದ್ಧೂರಿ ಸ್ವಾಗತ

Mohammed Siraj: ಮೊಹಮ್ಮದ್ ಸಿರಾಜ್​ಗೆ ಅದ್ಧೂರಿ ಸ್ವಾಗತ

ಝಾಹಿರ್ ಯೂಸುಫ್
|

Updated on: Jul 06, 2024 | 10:09 AM

Share

T20 World Cup 2024: ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್​ಗಳಲ್ಲಿ 176 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ 7 ರನ್​ಗಳ ರೋಚಕ ಜಯ ಸಾಧಿಸಿ ಟೀಮ್ ಇಂಡಿಯಾ 2ನೇ ಬಾರಿಗೆ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಈ ವಿಶ್ವಕಪ್​ನಲ್ಲಿ ಭಾರತದ ಪರ ಆಡಿದ ಸಿರಾಜ್ ಅವರಿಗೆ ಇದೀಗ ಹೈದರಾಬಾದ್​ನಲ್ಲಿ ಅದ್ಧೂರಿ ಸ್ವಾಗತ ನೀಡಲಾಗಿದೆ.

ಟಿ20 ವಿಶ್ವಕಪ್ ಗೆದ್ದು ತವರಿಗೆ ಆಗಮಿಸಿರುವ ಮೊಹಮ್ಮದ್ ಸಿರಾಜ್​ಗೆ (Mohammed Siraj) ಅದ್ಧೂರಿ ಸ್ವಾಗತ ನೀಡಲಾಗಿದೆ. ಮುಂಬೈನಲ್ಲಿ ವಿಜಯೋತ್ಸವ ಆಚರಿಸಿ ಹೈದರಾಬಾದ್​ಗೆ ಬಂದಿಳಿದ ಸಿರಾಜ್ ಅವರನ್ನು ಕಾರಿನಲ್ಲಿ ನಿಲ್ಲಿಸಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಅಭಿಮಾನಿಗಳು ಟೀಮ್ ಇಂಡಿಯಾ ಪರ ಹಾಗೂ ಸಿರಾಜ್​ಗೆ ಜೈಕಾರ ಹಾಕಿದರು. ಇದೀಗ ಮೊಹಮ್ಮದ್ ಸಿರಾಜ್​ಗೆ ನೀಡಲಾದ ಅದ್ಧೂರಿ ಸ್ವಾಗತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಮೊಹಮ್ಮದ್ ಸಿರಾಜ್ ಮೂರು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ನ್ಯೂಯಾರ್ಕ್ ಪಿಚ್​ನಲ್ಲಿ ಆಡಲಾದ ಮೂರು ಪಂದ್ಯಗಳಲ್ಲೂ ಸಿರಾಜ್​ ಅವಕಾಶ ಪಡೆದಿದ್ದರು. ಈ ವೇಳೆ ಒಂದು ವಿಕೆಟ್ ಪಡೆಯಲಷ್ಟೇ ಶಕ್ತರಾಗಿದ್ದರು. ಹಾಗೆಯೇ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಸಿರಾಜ್ 7 ರನ್ ಬಾರಿಸುವ ಮೂಲಕ ಉಪಯುಕ್ತ ಕಾಣಿಕೆ ನೀಡಿದ್ದರು. ಅಂತಿಮವಾಗಿ ಈ ಪಂದ್ಯದಲ್ಲಿ ಭಾರತ ತಂಡ 6 ರನ್​ಗಳಿಂದ ರೋಚಕ ಜಯ ಸಾಧಿಸಿತ್ತು.

ಇನ್ನು ಮೂರು ಪಂದ್ಯಗಳಲ್ಲಿ ಅತ್ಯುತ್ತಮ ಫೀಲ್ಡಿಂಗ್ ಮೂಲಕ ಗಮನ ಸೆಳೆದಿದ್ದ ಸಿರಾಜ್, ಎರಡು ಬಾರಿ ಡ್ರೆಸ್ಸಿಂಗ್ ರೂಮ್​ನಲ್ಲಿ ನೀಡಲಾಗುವ ಬೆಸ್ಟ್ ಫೀಲ್ಡರ್ ಪ್ರಶಸ್ತಿ ಪಡೆದಿದ್ದರು. ಇದೀಗ ವಿಶ್ವಕಪ್ ಗೆದ್ದ ತಂಡದ ಭಾಗವಾಗಿರುವ ಹೈದರಾಬಾದ್​ ಆಟಗಾರನಿಗೆ ತವರಿನ ಅಭಿಮಾನಿಗಳು ಅದ್ದೂರಿ ಸ್ವಾಗತ ನೀಡಿದ್ದಾರೆ.

ಸದ್ಯ ಝಿಂಬಾಬ್ವೆ ಸರಣಿಯಿಂದ ಹೊರಗುಳಿದಿರುವ ಟೀಮ್ ಇಂಡಿಯಾ ಮೊಹಮ್ಮದ್ ಸಿರಾಜ್ ಇದೇ ತಿಂಗಳ ಅಂತ್ಯದಲ್ಲಿ ಶುರುವಾಗಲಿರುವ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

 

 

 

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More