AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಸೂಪರ್​ ಹೀರೋಗೆ… ವಿರಾಟ್ ಕೊಹ್ಲಿಗೆ ಮೊಹಮ್ಮದ್ ಸಿರಾಜ್ ಭಾವುಕ ಪತ್ರ

Virat Kohli retires: ಟೀಮ್ ಇಂಡಿಯಾ ಪರ 123 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ 210 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 16608 ಎಸೆತಗಳನ್ನು ಎದುರಿಸಿರುವ ಅವರು ಒಟ್ಟು 9230 ರನ್ ಕಲೆಹಾಕಿದ್ದಾರೆ. ಇದರ ನಡುವೆ 30 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿ ಮಿಂಚಿದ್ದಾರೆ.

ನನ್ನ ಸೂಪರ್​ ಹೀರೋಗೆ... ವಿರಾಟ್ ಕೊಹ್ಲಿಗೆ ಮೊಹಮ್ಮದ್ ಸಿರಾಜ್ ಭಾವುಕ ಪತ್ರ
Virat Kohli - Siraj
ಝಾಹಿರ್ ಯೂಸುಫ್
|

Updated on: May 13, 2025 | 12:23 PM

Share

14 ವರ್ಷಗಳ ಟೆಸ್ಟ್ ಕೆರಿಯರ್​ಗೆ ವಿರಾಟ್ ಕೊಹ್ಲಿ (Virat Kohli) ವಿದಾಯ ಹೇಳಿದ್ದಾರೆ. 2011 ರಲ್ಲಿ ಶುರುವಾದ ತಮ್ಮ ಕೆರಿಯರ್​ನಲ್ಲಿ ಕಿಂಗ್ ಕೊಹ್ಲಿ ಹಲವು ಆಟಗಾರರಿಗೆ ಬೆನ್ನೆಲುಬಾಗಿ ನಿಂತಿದ್ದರು. ಅಂತವರಲ್ಲಿ ಮೊಹಮ್ಮದ್ ಸಿರಾಜ್ ಕೂಡ ಒಬ್ಬರು. ಇದೀಗ ವಿರಾಟ್ ಕೊಹ್ಲಿಯ ನಿವೃತ್ತಿಯನ್ನು ಸಿರಾಜ್​ಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ಈ ನೋವಿನೊಂದಿಗೆ ಸೋಷಿಯಲ್ ಮೀಡಿಯಾದಲ್ಲಿ ಕೊಹ್ಲಿಗೆ ಧನ್ಯವಾದ ತಿಳಿಸಿ ಬಹಿರಂಗ ಪತ್ರ ಬರೆದಿದ್ದಾರೆ.

ಮೊಹಮ್ಮದ್ ಸಿರಾಜ್ ಅವರ ಬಹಿರಂಗ ಪತ್ರದ ಸಾರಾಂಶ ಹೀಗಿದೆ:

ನನ್ನ ಸೂಪರ್ ಹೀರೋಗೆ…  ಟೆಸ್ಟ್ ಕ್ರಿಕೆಟ್‌ನಲ್ಲಿ ನಿಮ್ಮ ಅದ್ಭುತ ವೃತ್ತಿಜೀವನಕ್ಕೆ ಅಭಿನಂದನೆಗಳು. ನಿಮ್ಮ ಪರಂಪರೆ ಶಾಶ್ವತವಾಗಿ ಉಳಿಯುತ್ತದೆ. ನೀವು ನನ್ನಂತಹ ಪೀಳಿಗೆಯ ಕ್ರಿಕೆಟಿಗರಿಗೆ ಸ್ಫೂರ್ತಿ ನೀಡಿದ್ದೀರಿ. ನಿಮ್ಮ ಸಾಧನೆಗಳನ್ನು ಮತ್ತು ಅದನ್ನು ಮುಂದುವರಿಸುತ್ತೀರಿ ಭಯ್ಯಾ. ನೀವು ಇಲ್ಲದ ಡ್ರೆಸ್ಸಿಂಗ್ ರೂಮ್, ಈ ಹಿಂದಿನಂತೆ ಇರುವುದಿಲ್ಲ.

ಯಾವಾಗಲೂ ನನ್ನನ್ನು ಬೆಂಬಲಿಸಿದ್ದಕ್ಕಾಗಿ ಮತ್ತು ಉತ್ತಮವಾಗಿ ಕಾರ್ಯನಿರ್ವಹಿಸಲು ನನ್ನನ್ನು ಪ್ರೇರೇಪಿಸಿದ್ದಕ್ಕಾಗಿ ಧನ್ಯವಾದಗಳು. ನಿಮಗೆ ಶುಭ ಹಾರೈಸುತ್ತೇನೆ. ಕಿಂಗ್ ವಿರಾಟ್ ಕೊಹ್ಲಿ ಭಯ್ಯಾ ಎಂದು ಮೊಹಮ್ಮದ್ ಸಿರಾಜ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ತನ್ನನ್ನು ಕೆರಿಯರ್​ನ ಉದ್ದಕ್ಕೂ ಬೆಂಬಲಿಸಿದ್ದಕ್ಕಾಗಿ ವಿರಾಟ್ ಕೊಹ್ಲಿಗೆ ಸಿರಾಜ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಸಿರಾಜ್​ಗೆ ಅವಕಾಶ:

ವಿರಾಟ್ ಕೊಹ್ಲಿ ನಾಯಕತ್ವದಲ್ಲಿ 2020 ರಲ್ಲಿ ಮೊಹಮ್ಮದ್ ಸಿರಾಜ್​ ಭಾರತ ಟೆಸ್ಟ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದರು. ಆ ಬಳಿಕ ಟೀಮ್ ಇಂಡಿಯಾದ ಖಾಯಂ ಸದಸ್ಯರಾಗಿ ಕಾಣಿಸಿಕೊಂಡ ಸಿರಾಜ್ ಈವರೆಗೆ ಒಟ್ಟು 36 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 67 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು ಒಟ್ಟು 100 ವಿಕೆಟ್​ಗಳನ್ನು ಕಬಳಿಸಿದ್ದಾರೆ.

ಅದರಲ್ಲೂ 2021 ರಲ್ಲಿ ಲಾರ್ಡ್ಸ್​ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಪಂದ್ಯವು ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್ ಪಾಲಿಗೆ ಸ್ಮರಣೀಯ. ಏಕೆಂದರೆ ಈ ಪಂದ್ಯದಲ್ಲಿ ಅತ್ಯಧ್ಭುತ ನಾಯಕತ್ವ ಪ್ರದರ್ಶಿಸಿದ್ದ ಕೊಹ್ಲಿ, ಸಿರಾಜ್ ಕಡೆಯಿಂದ ಮಾರಕ ದಾಳಿ ಸಂಘಟಿಸಿದ್ದರು.

ಈ ಪಂದ್ಯದಲ್ಲಿ ಒಟ್ಟು 8 ವಿಕೆಟ್ ಕಬಳಿಸುವ ಮೂಲಕ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾಗೆ 151 ರನ್​ಗಳ ಭರ್ಜರಿ ಜಯ ತಂದುಕೊಟ್ಟಿದ್ದರು. ಇದು ಕಿಂಗ್ ಕೊಹ್ಲಿಯ ನಾಯಕತ್ವದಲ್ಲಿ ಮೂಡಿಬಂದ ಮಿಯಾ ಮ್ಯಾಜಿಕ್ ಎಂದು ಈಗಲೂ ವರ್ಣಿಸಲಾಗುತ್ತದೆ.

2021ರ ಲಾರ್ಡ್ಸ್ ಟೆಸ್ಟ್ ಹೈಲೆಟ್ಸ್:

ಇದನ್ನೂ ಓದಿ: IPL 2025: PBKS vs DC ನಡುವೆ ಮರು ಪಂದ್ಯ: ಸೋತರೆ 1 ಪಾಯಿಂಟ್ ಮಿಸ್..!

ಇದೀಗ ಟೆಸ್ಟ್ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿ ಯುಗಾಂತ್ಯವಾಗಿದೆ. ಈ ಯುಗಾಂತ್ಯದ ಬೆನ್ನಲ್ಲೇ ಮೊಹಮ್ಮದ್ ಸಿರಾಜ್ ಭಾವುಕ ಪತ್ರ ಹಂಚಿಕೊಳ್ಳುವ ಮೂಲಕ ತನ್ನ ನೆಚ್ಚಿನ ನಾಯಕನಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!