Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯ್​ ಶಾ ಬದಲಿಗೆ ಪಾಕಿಸ್ತಾನದ ಮೊಹ್ಸಿನ್ ನಖ್ವಿಗೆ ಅಧ್ಯಕ್ಷ ಸ್ಥಾನ..!

Asian Cricket Council: ಪಾಕಿಸ್ತಾನ ಕ್ರಿಕೆಟ್ ತಂಡದ ನಿರಂತರ ವೈಫಲ್ಯದ ನಡುವೆ, ಮೊಹ್ಸಿನ್ ನಖ್ವಿ ಅವರು ಏಷ್ಯನ್ ಕ್ರಿಕೆಟ್ ಕೌನ್ಸಿಲ್ನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಈ ಹಿಂದೆ ಈ ಹುದ್ದೆಯಲ್ಲಿದ್ದ ಜಯ್​ ಶಾ ಅವರ ಬದಲಿಗೆ ಮೊಹ್ಸಿನ್ ನಖ್ವಿ ಈ ಹುದ್ದೆಯನ್ನು ಅಲಂಕರಿಸಿದ್ದಾರೆ.ಈ ಬಾರಿಯ ಏಷ್ಯಾಕಪ್ ಭಾರತದಲ್ಲೇ ನಡೆಯುತ್ತಿರುವ ಕಾರಣ ನಖ್ವಿ ತಮ್ಮ ತಂಡವನ್ನು ಭಾರತಕ್ಕೆ ಕಳುಹಿಸುತ್ತಾರಾ ಎಂಬುದು ಕುತೂಹಲ ಮೂಡಿಸಿದೆ.

ಜಯ್​ ಶಾ ಬದಲಿಗೆ ಪಾಕಿಸ್ತಾನದ ಮೊಹ್ಸಿನ್ ನಖ್ವಿಗೆ ಅಧ್ಯಕ್ಷ ಸ್ಥಾನ..!
Mohsin Naqvi
Follow us
ಪೃಥ್ವಿಶಂಕರ
|

Updated on:Apr 04, 2025 | 8:02 AM

ಕ್ರಿಕೆಟ್ ಕ್ಷೇತ್ರದಲ್ಲಿ ನಿರಂತರ ವೈಫಲ್ಯ ಎದುರಿಸುತ್ತಿರುವ ಪಾಕಿಸ್ತಾನಕ್ಕೆ (Pakistan Cricket) ಒಂದು ಒಳ್ಳೆಯ ಸುದ್ದಿ ಸಿಕ್ಕಿದೆ. ವಾಸ್ತವವಾಗಿ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಮೊಹ್ಸಿನ್ ನಖ್ವಿ (Mohsin Naqvi) ಅವರಿಗೆ ಮತ್ತೊಂದು ಹುದ್ದೆ ಸಿಕ್ಕಿದೆ. ಅವರು ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ (ACC) ಅಧ್ಯಕ್ಷರಾಗಿದ್ದಾರೆ. ಇದಕ್ಕೂ ಮೊದಲು, ಜಯ್​ ಶಾ (Jay Shah) ಏಷ್ಯನ್ ಕ್ರಿಕೆಟ್ ಮುಖ್ಯಸ್ಥರಾಗಿದ್ದರು. 2021 ರಲ್ಲಿ ಈ ಹುದ್ದೆಗೇರಿದ್ದ ಜಯ್​ ಶಾ ಅವರ ಅಧಿಕಾರಾವದಿ ಮುಕ್ತಯಗೊಂಡಿದ್ದು, ಇದೀಗ ಮೊಹ್ಸಿನ್ ನಖ್ವಿ ಅವರಿಗೆ ಈ ಹುದ್ದೆ ಸಿಕ್ಕಿದೆ. ದೊಡ್ಡ ವಿಷಯವೆಂದರೆ ಭಾರತದಲ್ಲಿ ಏಷ್ಯಾಕಪ್ ನಡೆಯಲಿರುವ ವರ್ಷದಲ್ಲಿ ಮೊಹ್ಸಿನ್ ನಖ್ವಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ ಅಧ್ಯಕ್ಷರಾಗಿದ್ದಾರೆ. 2025 ರ ಏಷ್ಯಾಕಪ್ ಈ ಬಾರಿ ಭಾರತದಲ್ಲಿ ನಡೆಯಲಿದ್ದು, ಈ ಪಂದ್ಯಾವಳಿಯನ್ನು ಟಿ20 ಸ್ವರೂಪದಲ್ಲಿ ನಡೆಸಲಾಗುವುದು, ಇದರಲ್ಲಿ 6 ತಂಡಗಳು ಭಾಗವಹಿಸುತ್ತವೆ. ಆ 6 ತಂಡಗಳಲ್ಲಿ ಪಾಕಿಸ್ತಾನವೂ ಸೇರಿದೆ.

ಭಾರತಕ್ಕೆ ಬರುವುದಿಲ್ಲ ಪಾಕ್ ತಂಡ

ಏಷ್ಯಾಕಪ್ ಭಾರತದಲ್ಲಿ ನಡೆಯುತ್ತಿರುವ ಕಾರಣ ಪಾಕಿಸ್ತಾನ ತಂಡ ಇಲ್ಲಿಗೆ ಬರುವುದಿಲ್ಲ. ಇತ್ತೀಚೆಗೆ ಚಾಂಪಿಯನ್ಸ್ ಟ್ರೋಫಿಯನ್ನು ಪಾಕಿಸ್ತಾನ ಆಯೋಜಿಸಿತ್ತು. ಆ ಸಮಯದಲ್ಲಿ ಭಾರತ ತಂಡವು ಕೂಡ ಅಲ್ಲಿಗೆ ಹೋಗದೆ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಿತ್ತು. ಈಗ ಪಾಕಿಸ್ತಾನ ತಂಡ ಕೂಡ ಅದೇ ರೀತಿ ಮಾಡಲಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ ಅಧ್ಯಕ್ಷರು ಕೂಡ ಪಾಕಿಸ್ತಾನದವರಾಗಿರುವುದರಿಂದ ಅವರ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ.

ಇದನ್ನೂ ಓದಿ
Image
ಭಾರತ-ಪಾಕಿಸ್ತಾನ ಕ್ರಿಕೆಟ್ ಕುರಿತು ಪ್ರಧಾನಿ ಮೋದಿ ಮಾತು
Image
ಪಾಕ್ ಕ್ರಿಕೆಟಿಗನ ಮನೆಯಲ್ಲಿ ಹಗಲು ದರೋಡೆ
Image
ದಿ ಹಂಡ್ರೆಡ್ ಲೀಗ್​ನಲ್ಲಿ ಪಾಕ್ ಆಟಗಾರರನ್ನು ಖರೀದಿಸುವವರೇ ಇಲ್ಲ
Image
ಬಾಬರ್ ಮುಂದೆ ವಿರಾಟ್ ಶೂನ್ಯ ಎಂದ ಪಾಕ್ ಮಾಜಿ ಕೋಚ್

ಮೊಹ್ಸಿನ್ ನಖ್ವಿ ವಿರುದ್ಧ ವಾಗ್ದಾಳಿ

ಒಂದೆಡೆ ಮೊಹ್ಸಿನ್ ನಖ್ವಿ ಎಸಿಸಿ ಅಧ್ಯಕ್ಷರಾಗಿದ್ದರೆ, ಮತ್ತೊಂದೆಡೆ ಅವರ ಸ್ವಂತ ದೇಶದಲ್ಲಿ ಅವರ ಸ್ವಂತ ಮಾಜಿ ಕ್ರಿಕೆಟಿಗರು ಈಗ ಅವರ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಪಿಸಿಬಿ ಅಧ್ಯಕ್ಷ ಹುದ್ದೆಗೆ ನಖ್ವಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿರುವ ಕಮ್ರಾನ್ ಅಕ್ಮಲ್, ‘ಇದು ನಾಚಿಕೆಗೇಡಿನ ಸಂಗತಿ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷರು ಪರಿಸ್ಥಿತಿಯನ್ನು ನಿಯಂತ್ರಿಸಲು ಸಾಧ್ಯವಾಗದಿದ್ದರೆ, ರಾಜೀನಾಮೆ ನೀಡಿ ಹೊರಡಬೇಕು ಎಂದು ಯೋಚಿಸಬೇಕು. ನಿಮ್ಮ ಖ್ಯಾತಿಯನ್ನು ಹಾಳು ಮಾಡಿಕೊಳ್ಳಬೇಡಿ. ನೀವು ಇದನ್ನು ಮಾಡಲು ಬಯಸದಿದ್ದರೆ, ಈಗಿರುವ ತಂಡದ ಸ್ಥಿತಿಯನ್ನು ಸುಧಾರಿಸಿ ಎಂದಿದ್ದಾರೆ.

‘ಫಲಿತಾಂಶವೇ ಹೇಳುತ್ತದೆ’; ಭಾರತ- ಪಾಕ್ ನಡುವೆ ಯಾವುದು ಬೆಸ್ಟ್ ತಂಡ? ಮೋದಿ ಉತ್ತರ ಏನು ಗೊತ್ತಾ?

ವಾಸ್ತವವಾಗಿ ಪಾಕಿಸ್ತಾನದ ಇತ್ತೀಚಿನ ನ್ಯೂಜಿಲೆಂಡ್ ವಿರುದ್ಧದ ಪ್ರವಾಸವು ನಿರಾಶಾದಾಯಕವಾಗಿತ್ತು. ಮೊದಲು ನಡೆದಿದ್ದ ಟಿ20 ಸರಣಿಯಲ್ಲಿ 4-1 ಅಂತರದ ಹೀನಾಯ ಸೋಲನ್ನು ಅನುಭವಿಸಿದ್ದ ಪಾಕ್ ತಂಡ ಅದರ ನಂತರ, ನಡೆಯುತ್ತಿರುವ ಏಕದಿನ ಸರಣಿಯಲ್ಲಿಯೂ ಸಹ 0-2 ಅಂತರದಿಂದ ಸರಣಿಯನ್ನು ಕಳೆದುಕೊಂಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:58 am, Fri, 4 April 25

ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!