AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿಗೆ ತನ್ನ ದೇಶದ ಪ್ರಧಾನಿ ಹೆಸರೇ ಗೊತ್ತಿಲ್ಲ

Mohsin Naqvi Blunder: 2026ರ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನವೇ ಬಾಂಗ್ಲಾದೇಶವನ್ನು ಹೊರಹಾಕಿರುವುದು ವಿವಾದ ಹುಟ್ಟುಹಾಕಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಪಾಕಿಸ್ತಾನ, ಭಾರತದ ವಿರುದ್ಧ ಆಡದಿರುವ ಬೆದರಿಕೆ ಹಾಕಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಪ್ರಧಾನಿ ಭೇಟಿ ಮಾಡಿ, ತಮ್ಮ ಟ್ವೀಟ್‌ನಲ್ಲಿ ಪ್ರಧಾನಿಯ ಹೆಸರು ತಪ್ಪಾಗಿ ಉಲ್ಲೇಖಿಸಿ ಟ್ರೋಲ್‌ಗೆ ಒಳಗಾಗಿದ್ದಾರೆ. ವಿಶ್ವಕಪ್‌ನಲ್ಲಿ ಪಾಕ್ ಭಾಗವಹಿಸುವಿಕೆ ನಿರ್ಧಾರ ಶೀಘ್ರದಲ್ಲೇ ಪ್ರಕಟವಾಗಲಿದೆ.

ಪಾಕ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿಗೆ ತನ್ನ ದೇಶದ ಪ್ರಧಾನಿ ಹೆಸರೇ ಗೊತ್ತಿಲ್ಲ
Pakistan
ಪೃಥ್ವಿಶಂಕರ
|

Updated on: Jan 26, 2026 | 8:50 PM

Share

2026 ರ ಟಿ20 ವಿಶ್ವಕಪ್ (T20 World Cup 2026) ಫೆಬ್ರವರಿ 7 ರಂದು ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಬಾಂಗ್ಲಾದೇಶ ತಂಡವನ್ನು ಟೂರ್ನಿಯಿಂದ ಹೊರಹಾಕಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಅದರಲ್ಲೂ ಬಾಂಗ್ಲಾದೇಶದ ಮೇಲೆ ಇತ್ತೀಚಿಗೆ ಸಾಕಷ್ಟು ಪ್ರೀತಿ ತೋರಿಸುತ್ತಿರುವ ಪಾಕಿಸ್ತಾನ, ಇದೀಗ ಹೊಸ ವರಸೆ ತೆಗೆದಿದೆ. ಅದೆನೆಂದರೆ ಬಾಂಗ್ಲಾದೇಶವನ್ನು ಟಿ20 ವಿಶ್ವಕಪ್​ನಿಂದ ಹೊರಹಾಕಿದ ಐಸಿಸಿಯ (ICC) ನೀತಿಯನ್ನು ಪಾಕಿಸ್ತಾನ ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಪಂದ್ಯವನ್ನು ಆಡುವುದಿಲ್ಲ ಎಂಬ ಬೆದರಿಕೆಯನ್ನು ಹಾಕುತ್ತಿದೆ. ಅದರ ಸಲುವಾಗಿಯೇ ಇಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ, ದೇಶದ ಪ್ರದಾನಿ ಶಹಬಾಜ್ ಷರೀಫ್ ಅವರನ್ನು ಭೇಟಿಯಾಗಿದ್ದರು. ಆದಾಗ್ಯೂ ಈ ಭೇಟಿಯ ನಂತರ ಪಿಸಿಬಿ ಅಧ್ಯಕ್ಷರು ಮಾಡಿರುವ ಅದೊಂದು ಟ್ವೀಟ್ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದು, ಮೊಹ್ಸಿನ್ ನಖ್ವಿ ಜಾಗತೀಕವಾಗಿ ನಗೆಪಾಟಲಿಗೀಡಾಗಿದ್ದಾರೆ.

ಅಪಹಾಸ್ಯಕ್ಕೊಳಗಾದ ನಖ್ವಿ

ವಾಸ್ತವವಾಗಿ ಪಿಸಿಬಿ ಅಧ್ಯಕ್ಷ ನಖ್ವಿ ಕಳೆದೆರಡು ದಿನಗಳಿಂದ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡದ ಭಾಗವಹಿಸುವಿಕೆಯ ಕುರಿತು ಹೊಸ ನಾಟಕವನ್ನು ಪ್ರಾರಂಭಿಸಿದ್ದಾರೆ. ಆ ನಾಟಕದ ಮುಂದುವರೆದ ಭಾಗವಾಗಿ ಇಂದು ಅಂದರೆ ಜನವರಿ 26 ರ ಸೋಮವಾರದಂದು ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಅವರನ್ನು ಭೇಟಿಯಾಗಿದ್ದರು. ಪ್ರಧಾನಿಯೊಂದಿಗಿನ ಭೇಟಿಯ ಸಮಯದಲ್ಲಿ, ನಖ್ವಿ ವಿಶ್ವಕಪ್‌ಗೆ ಸಂಬಂಧಿಸಿದ ಸಮಸ್ಯೆಗಳು ಮತ್ತು ಆಯ್ಕೆಗಳ ಕುರಿತು ಚರ್ಚೆ ನಡೆಸಿದರು. ಈ ಸಭೆಯ ಬಗ್ಗೆ ಮಾಹಿತಿ ನೀಡುವ ಸಲವಾಗಿ ಮೊಹ್ಸಿನ್ ನಖ್ವಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದರು. ಆದರೆ ಆ ಪೋಸ್ಟ್​ನಲ್ಲಿ ಮಹಾ ಪ್ರಮಾದವೊಂದನ್ನು ಮಾಡಿ ಅಪಹಾಸ್ಯಕ್ಕೊಳಗಾಗಿದ್ದಾರೆ.

ಪ್ರಧಾನಿ ಹೆಸರು ತಪ್ಪಾಗಿ ಉಲ್ಲೇಖ

ಪ್ರಧಾನಿ ಶಹಬಾಜ್ ಷರೀಫ್ ಅವರೊಂದಿಗಿನ ಭೇಟಿಯ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ, ಅದರಲ್ಲಿ ದೇಶದ ಪ್ರಧಾನಿಯ ಹೆಸರನ್ನು ತಪ್ಪಾಗಿ ಬರೆದಿದ್ದಾರೆ. ಹಾಲಿ ಪ್ರಧಾನಿ ಶಹಬಾಜ್ ಷರೀಫ್ ಅವರ ಹೆಸರನ್ನು ಬರೆಯುವ ಬದಲಿಗೆ ಮಾಜಿ ಪ್ರಧಾನಿ ಮಿಯಾನ್ ಮುಹಮ್ಮದ್ ನವಾಜ್ ಷರೀಫ್ ಅವರ ಹೆಸರನ್ನು ಬರೆದಿದ್ದಾರೆ. ನವಾಜ್ ಷರೀಫ್ ಪಾಕಿಸ್ತಾನದ ಮಾಜಿ ಪ್ರಧಾನಿಯಾಗಿದ್ದು, ಶಹಬಾಜ್ ಷರೀಫ್ ಅವರ ಸಹೋದರ. ಹೀಗೆ ತನ್ನ ದೇಶದ ಪ್ರಧಾನಿಯ ಹೆಸರನ್ನು ತಪ್ಪಾಗಿ ಬರೆದಿರುವ ನಖ್ವಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ನಗೆಪಾಟಲಿಗೆ ಮತ್ತು ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. ಆ ಬಳಿಕ ನಖ್ವಿಗೆ ತನ್ನ ತಪ್ಪಿನ ಅರಿವಾಗಿದೆಯಾದರೂ ಅಷ್ಟರಲ್ಲಾಗಲೇ ಅದರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿವೆ.

T20 World Cup 2026: ಟಿ20 ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯ ನಡೆಯುವುದು ಅನುಮಾನ

ಟಿ20 ವಿಶ್ವಕಪ್ ಬಗ್ಗೆ ಚರ್ಚೆ

ಶಹಬಾಜ್ ಷರೀಫ್ ಅವರೊಂದಿಗಿನ ಭೇಟಿಯ ನಂತರ, ನಖ್ವಿ ಅವರು ಜನವರಿ 30ರ ಶುಕ್ರವಾರ ಅಥವಾ ಫೆಬ್ರವರಿ 2 ರಂದು ಸೋಮವಾರ ವಿಶ್ವಕಪ್ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡದ ಭಾಗವಹಿಸುವಿಕೆಯ ಬಗ್ಗೆ ಪಾಕಿಸ್ತಾನ ಸರ್ಕಾರ ನಿರ್ಧರಿಸುತ್ತದೆ ಎಂದು ನಖ್ವಿ ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದರು. ಇದೆಲ್ಲವನ್ನು ನೋಡಿದರೆ, ಪಾಕಿಸ್ತಾನ ಉದ್ದೇಶಪೂರ್ವಕವಾಗಿ ಇಲ್ಲದ ಸಮಸ್ಯೆಯನ್ನು ತನ್ನ ಮೈಮೇಲೆ ಎಳೆದುಕೊಳ್ಳುತ್ತಿದೆ ಎನ್ನಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ?
ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ?
ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್!
ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್!
ಕೇಸರಿ ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ಬೆಂಬಲಕ್ಕೆ ನಿಂತ ಹೆಬ್ಬಾಳ್ಕರ್!
ಕೇಸರಿ ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ಬೆಂಬಲಕ್ಕೆ ನಿಂತ ಹೆಬ್ಬಾಳ್ಕರ್!