T20 World Cup 2021: ಕೆಎಲ್ ರಾಹುಲ್ ಜೊತೆಗೂಡಿ ತನ್ನದೇ ದಾಖಲೆಯನ್ನು ಸರಿಗಟ್ಟಿದ ರೋಹಿತ್ ಶರ್ಮಾ

| Updated By: ಝಾಹಿರ್ ಯೂಸುಫ್

Updated on: Nov 03, 2021 | 10:57 PM

Rohit Sharma-KL Rahul: ಇನ್ನು ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಶತಕದ ಜೊತೆಯಾಟವಾಡಿದ ದಾಖಲೆ ಪಾಕಿಸ್ತಾನ್ ಆರಂಭಿಕ ಜೋಡಿ ಬಾಬರ್ ಆಜಂ ಹಾಗೂ ಮೊಹಮ್ಮದ್ ರಿಜ್ವಾನ್ ಹೆಸರಿನಲ್ಲಿದೆ.

T20 World Cup 2021: ಕೆಎಲ್ ರಾಹುಲ್ ಜೊತೆಗೂಡಿ ತನ್ನದೇ ದಾಖಲೆಯನ್ನು ಸರಿಗಟ್ಟಿದ ರೋಹಿತ್ ಶರ್ಮಾ
Rahul-Rohit
Follow us on

ಟಿ20 ವಿಶ್ವಕಪ್​ನ 33ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ್​ ವಿರುದ್ದ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಟೀಮ್ ಇಂಡಿಯಾಗೆ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಭರ್ಜರಿ ಆರಂಭ ಒದಗಿಸಿದ್ದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಈ ಜೋಡಿ ಅಫ್ಘಾನ್ ಬೌಲರುಗಳ ಬೆಂಡೆತ್ತಿದರು. ಅದರಂತೆ 12ನೇ ಓವರ್​ ಮುಕ್ತಾಯದ ವೇಳೆಗೆ ತಂಡದ ಮೊತ್ತವನ್ನು 100 ರ ಗಡಿದಾಟಿಸಿದರು. ಇದರೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 8 ಬಾರಿ ಶತಕದ ಜೊತೆಯಾಟವಾಡಿದ ಆರಂಭಿಕ ಆಟಗಾರ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ನಿರ್ಮಿಸಿದರು. ಅಷ್ಟೇ ಅಲ್ಲದೆ ಈ ಹಿಂದೆ ಶಿಖರ್ ಧವನ್ ಜೊತೆಗೂಡಿದ ನಿರ್ಮಿಸಿದ್ದ ದಾಖಲೆಯನ್ನು ಈ ಬಾರಿ ಕೆಎಲ್ ರಾಹುಲ್ ಜೊತೆಗೂಡಿ ಸರಿಗಟ್ಟಿದರು.

ರೋಹಿತ್ ಶರ್ಮಾ-ಶಿಖರ್ ಧವನ್ ಜೋಡಿ ಟಿ20 ಕ್ರಿಕೆಟ್​ನಲ್ಲಿ 4 ಬಾರಿ ಶತಕದ ಜೊತೆಯಾಟವಾಡಿದ್ದಾರೆ. ಇದೀಗ ಅಫ್ಘಾನಿಸ್ತಾನ್ ವಿರುದ್ದ ರಾಹುಲ್-ರೋಹಿತ್ ಜೋಡಿ ಶತಕದ ಪಾಲುದಾರಿಕೆ ನೀಡಿದ್ದಾರೆ. ಇದು ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಅವರ 4ನೇ ಟಿ20 ಶತಕದ ಜೊತೆಯಾಟವಾಗಿದೆ. ಈ ಮೂಲಕ ಶಿಖರ್ ಧವನ್ ಜೊತೆಗೂಡಿ ನಿರ್ಮಿಸಿದ್ದ ದಾಖಲೆಯನ್ನು ಹಿಟ್​ಮ್ಯಾನ್ ರಾಹುಲ್ ಜೊತೆಯಾಗಿ ಸರಿಗಟ್ಟಿದ್ದಾರೆ.

ಇನ್ನು ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಶತಕದ ಜೊತೆಯಾಟವಾಡಿದ ದಾಖಲೆ ಪಾಕಿಸ್ತಾನ್ ಆರಂಭಿಕ ಜೋಡಿ ಬಾಬರ್ ಆಜಂ ಹಾಗೂ ಮೊಹಮ್ಮದ್ ರಿಜ್ವಾನ್ ಹೆಸರಿನಲ್ಲಿದೆ. ಈ ಜೋಡಿ 5 ಬಾರಿ ಶತಕದ ಜೊತೆಯಾಟವಾಡಿದ್ದಾರೆ. ಇನ್ನು ನಂತರದ ಸ್ಥಾನದಲ್ಲಿ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಜೋಡಿಯಿದ್ದು, ಈ ಜೋಡಿ 4 ಬಾರಿ ಶತಕದ ಪಾಲುದಾರಿಕೆ ನೀಡಿದ್ದಾರೆ. ಹಾಗೆಯೇ ಮೂರನೇ ಸ್ಥಾನದಲ್ಲಿ ನ್ಯೂಜಿಲೆಂಡ್​ನ ಕೇನ್ ವಿಲಿಯಮ್ಸನ್ ಹಾಗೂ ಮಾರ್ಟಿನ್ ಗಪ್ಟಿಲ್ ಇದ್ದಾರೆ. ಅಲ್ಲದೆ ನಾಲ್ಕನೇ ಸ್ಥಾನವನ್ನು ರೋಹಿತ್ ಶರ್ಮಾ-ಕೆಎಲ್ ರಾಹುಲ್ ಅಲಂಕರಿಸಿದ್ದಾರೆ.

ಇದನ್ನೂ ಓದಿ: ICC T20 Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಎಲ್ಲರನ್ನು ಹಿಂದಿಕ್ಕಿದ ಬಾಬರ್

ಇದನ್ನೂ ಓದಿ: IPL 2022: RCB ಈ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದು..!

ಇದನ್ನೂ ಓದಿ: IPL 2022: ನಾಲ್ವರು ಆಟಗಾರರಿಗೆ 42 ಕೋಟಿ ರೂ. ನಿಗದಿ: ಐಪಿಎಲ್ ಹೊಸ ರಿಟೈನ್ ನಿಯಮ

(Most century partnerships in T20 Internationals)