Team India: ತನ್ನದೇ ದಾಖಲೆ ಮುರಿದು ಹೊಸ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Sachin Tendulkar Records: ಏಕದಿನ ಕ್ರಿಕೆಟ್ನಲ್ಲಿ ಒಂದೇ ವರ್ಷ ಅತ್ಯಧಿಕ ಶತಕ ಸಿಡಿಸಿದ ವಿಶ್ವ ದಾಖಲೆ ಇರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿ. 1998 ರಲ್ಲಿ 33 ಏಕದಿನ ಇನಿಂಗ್ಸ್ಗಳಲ್ಲಿ ಸಚಿನ್ ಬರೋಬ್ಬರಿ 9 ಶತಕ ಸಿಡಿಸಿದ್ದರು. ಹಾಗೆಯೇ 7 ಅರ್ಧಶತಕಗಳನ್ನು ಕೂಡ ಬಾರಿಸಿದ್ದರು.
ಪಾರ್ಲ್ನ ಬೋಲ್ಯಾಂಡ್ ಪಾರ್ಕ್ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 78 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಅದ್ಭುತ ಪ್ರದರ್ಶನ ನೀಡಿದ್ದು ಸಂಜು ಸ್ಯಾಮ್ಸನ್. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಯಾಮ್ಸನ್ 114 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 108 ರನ್ ಬಾರಿಸಿ ಮಿಂಚಿದ್ದರು.
ಈ ಶತಕದೊಂದಿಗೆ ಟೀಮ್ ಇಂಡಿಯಾ ಪಾಲಿಗೆ ವಿಶ್ವ ದಾಖಲೆಯೊಂದು ಸೇರ್ಪಡೆಯಾಗಿದ್ದು ವಿಶೇಷ. ಅಂದರೆ ಇದು ಈ ವರ್ಷ ಟೀಮ್ ಇಂಡಿಯಾ ಬ್ಯಾಟರ್ ಬಾರಿಸಿದ 19ನೇ ಏಕದಿನ ಶತಕವಾಗಿದೆ. ಇದರೊಂದಿಗೆ ಏಕದಿನ ಕ್ರಿಕೆಟ್ನಲ್ಲಿ ಒಂದೇ ವರ್ಷದಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ತಂಡ ಎಂಬ ದಾಖಲೆ ಟೀಮ್ ಇಂಡಿಯಾ ಪಾತ್ರವಾಗಿದೆ.
ವಿಶೇಷ ಎಂದರೆ ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಹೆಸರಿನಲ್ಲಿಯೇ ಇತ್ತು. 2017 ರಲ್ಲಿ ಭಾರತೀಯ ಬ್ಯಾಟರ್ಗಳು ಒಟ್ಟು 19 ಶತಕಗಳನ್ನು ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.
ಇದೀಗ 2023 ರಲ್ಲಿ ಟೀಮ್ ಇಂಡಿಯಾ ಬ್ಯಾಟರ್ಗಳಿಂದ ಮೂಡಿಬಂದಿರುವ ಶತಕಗಳ ಸಂಖ್ಯೆ 19. ಇದರೊಂದಿಗೆ ಏಕದಿನ ಕ್ರಿಕೆಟ್ನಲ್ಲಿನ ತನ್ನದೇ ದಾಖಲೆಯನ್ನು ಭಾರತ ತಂಡ ಸರಿಗಟ್ಟಿದಂತಾಗಿದೆ. ಈ ಮೂಲಕ ಒಡಿಐ ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ.
ಭಾರತದ ಶತಕವೀರರು:
- ಈ ವರ್ಷ ಭಾರತದ ಪರ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ಶತಕ ಸಿಡಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ 2023 ರಲ್ಲಿ ಒಟ್ಟು 6 ಸೆಂಚುರಿಗಳನ್ನು ಸಿಡಿಸಿದ್ದಾರೆ. ಹಾಗೆಯೇ 2ನೇ ಸ್ಥಾನದಲ್ಲಿರುವ ಶುಭ್ಮನ್ ಗಿಲ್ ಒಟ್ಟು 5 ಶತಕಗಳನ್ನು ಬಾರಿಸಿದ್ದಾರೆ.
- ಮೂರನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಇದ್ದು, ಅಯ್ಯರ್ ಒಟ್ಟು 3 ಶತಕಗಳನ್ನು ಸಿಡಿಸಿದ್ದಾರೆ.
- ಇನ್ನು ವಿಕೆಟ್ ಕೀಪರ್ ಬ್ಯಾಟರ್ ಕೆಎಲ್ ರಾಹುಲ್ ಈ ವರ್ಷ ಏಕದಿನ ಕ್ರಿಕೆಟ್ನಲ್ಲಿ 2 ಶತಕ ಬಾರಿಸಿದರೆ, ನಾಯಕ ರೋಹಿತ್ ಶರ್ಮಾ ಬ್ಯಾಟ್ನಿಂದ 2 ಸೆಂಚುರಿಗಳು ಮೂಡಿಬಂದಿವೆ. ಹಾಗೆಯೇ ಇದೀಗ ಸೌತ್ ಆಫ್ರಿಕಾ ವಿರುದ್ಧ ಸಂಜು ಸ್ಯಾಮ್ಸನ್ ಶತಕ ಸಿಡಿಸುವ ಮೂಲಕ ಒಟ್ಟು ಸೆಂಚುರಿಗಳ ಸಂಖ್ಯೆಯನ್ನು 19 ಕ್ಕೇರಿಸಿದ್ದಾರೆ.
ಇದನ್ನೂ ಓದಿ: IND vs SA: ಭಾರತ-ಸೌತ್ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ
ಸಚಿನ್ ಹೆಸರಿನಲ್ಲಿದೆ ವಿಶ್ವ ದಾಖಲೆ:
ಏಕದಿನ ಕ್ರಿಕೆಟ್ನಲ್ಲಿ ಒಂದೇ ವರ್ಷ ಅತ್ಯಧಿಕ ಶತಕ ಸಿಡಿಸಿದ ವಿಶ್ವ ದಾಖಲೆ ಇರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿ. 1998 ರಲ್ಲಿ 33 ಏಕದಿನ ಇನಿಂಗ್ಸ್ಗಳಲ್ಲಿ ಸಚಿನ್ ಬರೋಬ್ಬರಿ 9 ಶತಕ ಸಿಡಿಸಿದ್ದರು. ಹಾಗೆಯೇ 7 ಅರ್ಧಶತಕಗಳನ್ನು ಕೂಡ ಬಾರಿಸಿದ್ದರು. ಆ ವರ್ಷ ಮಾಸ್ಟರ್ ಬ್ಲಾಸ್ಟರ್ ಒಟ್ಟು 1894 ರನ್ ಕಲೆಹಾಕುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದರು.
Published On - 7:26 am, Sat, 23 December 23