AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಸ್​ ಅಧಿಕಾರಿ ವಿರುದ್ದ ಮುಂದುವರೆದ ಧೋನಿಯ 100 ಕೋಟಿ ಮಾನನಷ್ಟ ಪ್ರಕರಣ

2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಮೂವರು ಕ್ರಿಕೆಟಿಗರನ್ನು ಬಂಧಿಸಲಾಗಿತ್ತು. ಇವರಲ್ಲಿ ಶ್ರೀಶಾಂತ್, ಅಂಕಿತ್ ಚೌಹಾನ್ ಮತ್ತು ಅಂಕಿತ್ ಚಾಂಡಿಲಾ ಸೇರಿದ್ದಾರೆ. ಇವರೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕ ಎನ್.ಶ್ರೀನಿವಾಸನ್ ಅವರ ಅಳಿಯ ಗುರುನಾಥ್ ಮೇಯಪ್ಪನ್ ಹೆಸರೂ ಬೆಟ್ಟಿಂಗ್ ನಲ್ಲಿ ಕೇಳಿ ಬಂದಿತ್ತು.

ಐಪಿಎಸ್​ ಅಧಿಕಾರಿ ವಿರುದ್ದ ಮುಂದುವರೆದ ಧೋನಿಯ 100 ಕೋಟಿ ಮಾನನಷ್ಟ ಪ್ರಕರಣ
ಧೋನಿ
TV9 Web
| Edited By: |

Updated on:Dec 09, 2021 | 10:31 PM

Share

ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ತಡೆ ನೀಡುವಂತೆ ಮಾಡಿದ ಮನವಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸಂಪತ್ ಕುಮಾರ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಈ ಬಗ್ಗೆ ತೀರ್ಪು ನೀಡಿರುವ ನ್ಯಾಯಮೂರ್ತಿ ಎನ್ ಶೇಷಸಾಯಿ, ಪ್ರಸ್ತುತ ಆದೇಶವು 2014 ರಿಂದ ನಡೆಯುತ್ತಿರುವ ಪ್ರಮುಖ ಪ್ರಕರಣದ ಪ್ರಗತಿಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು. ಈ ಮೂಲಕ ಐಪಿಎಸ್​ ಅಧಿಕಾರಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ್ದಾರೆ.

2014ರಲ್ಲಿ ಮಹೇಂದ್ರ ಸಿಂಗ್ ಧೋನಿ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ವಿರುದ್ದ 100 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಐಪಿಎಲ್ ಪಂದ್ಯಗಳಲ್ಲಿ ಮ್ಯಾಚ್ ಮತ್ತು ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ ಎಂದು ಟಿವಿ ಮಾಧ್ಯಮ ಕಂಪನಿ ಮತ್ತು ಇತರರು ಮಾನಹಾನಿಕರ ಸುದ್ದಿಯನ್ನು ಪ್ರಸಾರ ಮಾಡಿದ್ದಾರೆ ಎಂದು ಧೋನಿ ಸಲ್ಲಿಸಿರುವ ಮಾನನಷ್ಟ ಅರ್ಜಿಯಲ್ಲಿ ತಿಳಿಸಲಾಗಿದೆ. ಸಂಪತ್ ಕುಮಾರ್ ಐಪಿಎಲ್ ಬೆಟ್ಟಿಂಗ್ ಪ್ರಕರಣದ ತನಿಖೆಯಲ್ಲಿ ಭಾಗಿಯಾಗಿದ್ದರು.

ಫೆಬ್ರವರಿ 11, 2014 ರಿಂದ ಆರೋಪಿಗಳು ತಮ್ಮ ವಿರುದ್ಧ ಗಂಭೀರ, ಮಾನನಷ್ಟ, ಮಾನಹಾನಿಕರ ಮತ್ತು ಸುಳ್ಳು ಸುದ್ದಿ ಮತ್ತು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಧೋನಿ ಪರವಾಗಿ ಸಲ್ಲಿಸಲಾದ ಮಾನನಷ್ಟ ಅರ್ಜಿಯಲ್ಲಿ ತಿಳಿಸಲಾಗಿದೆ. ಪ್ರಪಂಚದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಮತ್ತು ಅಭಿಮಾನಿಗಳ ದೃಷ್ಟಿಯಲ್ಲಿ ಅವರ ಇಮೇಜ್ ಅನ್ನು ಹಾಳುಮಾಡುವುದು ಮತ್ತು ಕಳಂಕಗೊಳಿಸುವುದು ಅವರ ಏಕೈಕ ಉದ್ದೇಶವಾಗಿದೆ. ಹೀಗಾಗಿ ನೂರು ಕೋಟಿ ರೂ. ಮಾನನಷ್ಟ ಪರಿಹಾರ ನೀಡಬೇಕೆಂದು ಕೋರ್ಟ್ ಮೊರೆ ಹೋಗಲಾಗಿತ್ತು. ಜಿ ಸಂಪತ್ ಕುಮಾರ್ ಅವರು ಮಾನನಷ್ಟ ಮೊಕದ್ದಮೆಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.

ಏನಿದು ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣ? 2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಮೂವರು ಕ್ರಿಕೆಟಿಗರನ್ನು ಬಂಧಿಸಲಾಗಿತ್ತು. ಇವರಲ್ಲಿ ಶ್ರೀಶಾಂತ್, ಅಂಕಿತ್ ಚೌಹಾನ್ ಮತ್ತು ಅಂಕಿತ್ ಚಾಂಡಿಲಾ ಸೇರಿದ್ದಾರೆ. ಇವರೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕ ಎನ್.ಶ್ರೀನಿವಾಸನ್ ಅವರ ಅಳಿಯ ಗುರುನಾಥ್ ಮೇಯಪ್ಪನ್ ಹೆಸರೂ ಬೆಟ್ಟಿಂಗ್ ನಲ್ಲಿ ಕೇಳಿ ಬಂದಿತ್ತು. ಅಷ್ಟೇ ಅಲ್ಲದೆ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಚೆನ್ನೈ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳಿಗೆ ಎರಡು ವರ್ಷಗಳ ನಿಷೇಧ ಹೇರಲಾಗಿತ್ತು. ಈ ಪ್ರಕರಣದಲ್ಲಿ ಧೋನಿ ಕೂಡ ಭಾಗಿಯಾದ್ದಾರೆ ಎಂಬ ವಿಚಾರವಾಗಿ ಮಾಧ್ಯಮಗಳಲ್ಲಿ ಸುದ್ದಿ ಹರಡಲು ತನಿಖಾಧಿಕಾರಿ ಸಂಪತ್ ಕುಮಾರ್ ಸೇರಿದಂತೆ ಅನೇಕರು ಕಾರಣ ಎಂದು ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ.

ಇದನ್ನೂ ಓದಿ: World Record: ಬರೋಬ್ಬರಿ 15 ಸಿಕ್ಸ್​: ಕ್ರಿಕೆಟ್ ಇತಿಹಾಸದ ಅತೀ ವೇಗದ ಶತಕ

ಇದನ್ನೂ ಓದಿ: IPL 20222: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

ಇದನ್ನೂ ಓದಿ: Virat Kohli: ಭಾರತ ತಂಡ ಕಂಡ ಅತ್ಯಂತ ಯಶಸ್ವಿ ನಾಯಕ ವಿರಾಟ್ ಕೊಹ್ಲಿ…ಆದರೂ

(MS Dhoni defamation plaint Madras High Court rejects police officer plea to quash)

Published On - 10:30 pm, Thu, 9 December 21

ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ