MS Dhoni: ಕ್ಯಾಪ್ಟನ್ ಧೋನಿ ಅಡಿಯಲ್ಲಿ ಚೆನ್ನೈಗೆ ಸೂಪರ್ ಗೆಲುವು: ಟ್ವಿಟರ್​ನಲ್ಲಿ ಸಂಭ್ರಮವೋ ಸಂಭ್ರಮ

CSK, IPL 2022: ರವೀಂದ್ರ ಜಡೇಜಾ (Ravindra Jadeja) ಅವರು ನಾಯಕತ್ವವನ್ನು ಎಂಎಸ್ ಧೋನಿ ಅವರಿಗೆ ಪುನಃ ನೀಡಿದ್ದು ಚೆನ್ನೈ ಸೂಪರ್ ಕಿಂಗ್ಸ್​ ಅದೃಷ್ಟ ಬದಲಾದಂತಿದೆ. ಈ ಬಗ್ಗೆ ಟ್ವಿಟರ್​​ನಲ್ಲಿ ಅಭಿಮಾನಿಗಳು ಸಂಭ್ರಮ ಹಂಚಿಕೊಂಡಿದ್ದಾರೆ.

MS Dhoni: ಕ್ಯಾಪ್ಟನ್ ಧೋನಿ ಅಡಿಯಲ್ಲಿ ಚೆನ್ನೈಗೆ ಸೂಪರ್ ಗೆಲುವು: ಟ್ವಿಟರ್​ನಲ್ಲಿ ಸಂಭ್ರಮವೋ ಸಂಭ್ರಮ
MS Dhoni Mems
Follow us
TV9 Web
| Updated By: Vinay Bhat

Updated on:May 02, 2022 | 11:37 AM

ಐಪಿಎಲ್ 2022 ರಲ್ಲಿ (IPL 2022) ಭಾನುವಾರ ನಡೆದ 46ನೇ ಪಂದ್ಯದಲ್ಲಿ ಎಂಎಸ್ ಧೋನಿ ನಾಯಕತ್ವದ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಪುನಃ ಗೆಲುವಿನ ಹಳಿಗೆ ಮರಳಿದೆ. ಆರಂಭಿಕ ರುತುರಾಜ್ ಗಾಯಕ್ವಾಡ್ (Ruturaj Gaikwad) ಶತಕವಂಚಿತ ಬ್ಯಾಟಿಂಗ್ ಹಾಗೂ ಡೆವೊನ್ ಕಾನ್‌ವೇ ನೀಡಿದ ಸಮರ್ಥ ಬೆಂಬಲದಿಂದ ಚೆನ್ನೈ 20 ಓವರ್​​ಗೆ 2 ವಿಕೆಟ್‌ ನಷ್ಟಕ್ಕೆ 202 ರನ್ ಕಲೆಹಾಕಿತು. ಪ್ರತಿಯಾಗಿ ಮುಕೇಶ್ ಚೌಧರಿ ದಾಳಿಗೆ ನಲುಗಿದ ಸನ್‌ರೈಸರ್ಸ್‌ 6 ವಿಕೆಟ್‌ಗೆ 189 ರನ್‌ಗಳಿಸಲಷ್ಟೇ ಶಕ್ತವಾಯಿತು. ನಿಕೋಲಸ್ ಪೂರನ್ ಏಕಾಂಗಿ ಹೋರಾಟ ನಡೆಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಧೋನಿಯ ಚುರುಕಿನ ನಾಯಕತ್ವ ಚೆನ್ನೈಗೆ ಗೆಲುವಿನ ಸಿಹಿ ನೀಡಿತು. ರವೀಂದ್ರ ಜಡೇಜಾ (Ravindra Jadeja) ಅವರು ನಾಯಕತ್ವವನ್ನು ಎಂಎಸ್ ಧೋನಿ ಅವರಿಗೆ ಪುನಃ ನೀಡಿದ್ದು ಚೆನ್ನೈ ಸೂಪರ್ ಕಿಂಗ್ಸ್​ ಅದೃಷ್ಟ ಬದಲಾದಂತಿದೆ. ಈ ಬಗ್ಗೆ ಟ್ವಿಟರ್​​ನಲ್ಲಿ ಅಭಿಮಾನಿಗಳು ಸಂಭ್ರಮ ಹಂಚಿಕೊಂಡಿದ್ದಾರೆ.

ಪಂದ್ಯ ಮುಗಿದ ಬಳಿಕ ನಾಯಕತ್ವದ ಬಗ್ಗೆ ಮಾತನಾಡಿದ ಎಂಎಸ್ ಧೋನಿ, “ಈ ವರ್ಷ ಸಿಎಸ್​ಕೆ ತಂಡದ ನಾಯಕನ ಜವಬ್ದಾರಿ ರವೀಂದ್ರ ಜಡೇಜಾ ಅವರಿಗೆ ಎಂದು ಕಳೆದ ಸೀಸನ್​ನಲ್ಲಿಯೇ ತೀರ್ಮಾನವಾಗಿತ್ತು. ಇದಕ್ಕಾಗಿ ಅವರು ಸಾಕಷ್ಟು ಸಮಯದಿಂದ ಸಜ್ಜಾಗುತ್ತಿದ್ದರು. ನನ್ನ ಆಶಯ ಕೂಡ ಅದೇ ಆಗಿತ್ತು. ಮೊದಲ ಎರಡು ಪಂದ್ಯಗಳಲ್ಲಿ ನಾವಿಬ್ಬರು ಮಾಹಿತಿ ಹಂಚಿಕೊಳ್ಳುತ್ತಿದ್ದೆವು. ನಂತರ ಬೌಲಿಂಗ್, ಫೀಲ್ಡಿಂಗ್ ಆಯ್ಕೆ ಎಲ್ಲವನ್ನು ಅವರಿಗೆ ಬಿಟ್ಟುಕೊಟ್ಟೆ. ಯಾಕೆಂದರೆ ನಾಯಕತ್ವ ಅವನು ಮಾಡಿದ, ನಾನು ಕೇವಲ ಟಾಸ್​ಗೆ ಹೋಗಲು ಮಾತ್ರ ಎಂಬ ಭಾವನೆ ಕೊನೆಯಲ್ಲಿ ಅವರಿಗೆ ಮೂಡಬಾರದು. ಮೈದಾನದಲ್ಲಿ ನಾಯಕ ಕೆಲ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಮತ್ತು ಆ ನಿರ್ಧಾರಕ್ಕೆ ಆತನೇ ಜವಾಬ್ದಾರಿ ಆಗಿರಬೇಕು,” ಎಂಬುದು ಎಂಎಸ್​ಡಿ ಮಾತು.

ಕ್ರೀಡಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:36 am, Mon, 2 May 22

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್