MS Dhoni: ಗೆದ್ದ ಬಳಿಕ ಸಿಎಸ್​ಕೆ ಆಟಗಾರರು ಟ್ರೋಫಿ ಜೊತೆ ಸಂಭ್ರಮಿಸುತ್ತಿದ್ದರೆ ಅತ್ತ ಧೋನಿ ಏನು ಮಾಡ್ತಿದ್ರು ನೋಡಿ

CSK vs GT, IPL 2023 Final: ಸಿಎಸ್​ಕೆ ಗೆದ್ದ ಬಳಿಕ ಆಟಗಾರರು ಟ್ರೋಫಿ ಜೊತೆ ಸಂಭ್ರಮಿಸುತ್ತಿದ್ದರೆ ಅತ್ತ ಧೋನಿ ಮಾತ್ರ ಗ್ರೌಂಡ್ ಸಿಬ್ಬಂದಿಗಳೊಂದಿಗೆ ಮಾತನಾಡುತ್ತಾ ಅವರೊಂದಿಗೆ ಪೋಟೋ ಕ್ಲಿಕ್ಕಿಸಿಕೊಂಡು ಖಷಿ ಹಂಚಿಕೊಂಡಿದ್ದಾರೆ.

MS Dhoni: ಗೆದ್ದ ಬಳಿಕ ಸಿಎಸ್​ಕೆ ಆಟಗಾರರು ಟ್ರೋಫಿ ಜೊತೆ ಸಂಭ್ರಮಿಸುತ್ತಿದ್ದರೆ ಅತ್ತ ಧೋನಿ ಏನು ಮಾಡ್ತಿದ್ರು ನೋಡಿ
MS Dhoni Ground Staff
Follow us
Vinay Bhat
|

Updated on: Jun 01, 2023 | 7:48 AM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ಗೆ (IPL 2023) ತೆರೆ ಬಿದ್ದಾಗಿದೆ. ಎಂಎಸ್ ಧೋನಿ (MS Dhoni) ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿತು. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದಿದ್ದ ರಣರೋಚಕ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸಿಎಸ್​ಕೆ (CSK vs GT) ಡಕ್ವರ್ತ್ ಲುಯಿಸ್ ನಿಯಮದ ಅನ್ವಯ 5 ವಿಕೆಟ್​ಗಳಿಂದ ಗೆದ್ದು ಟ್ರೋಫಿ ಎತ್ತಿ ಹಿಡಿಯಿತು. ಮೀಸಲು ದಿನದ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರೂ ತಡ ರಾತ್ರಿ ವರೆಗೆ ಕಾದು ಅಂತಿಮವಾಗಿ ಫಲಿತಾಂಶ ಹೊರಬಿತ್ತು. ಪಂದ್ಯ ನಡೆಯಲು ಇಲ್ಲಿನ ಗ್ರೌಂಡ್ ಸಿಬ್ಬಂದಿಗಳು ಸಾಕಷ್ಟು ಶ್ರಮ ವಹಿಸಿದರು. ಇದನ್ನು ಮರೆಯದ ಎಂಎಸ್ ಧೋನಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಸಿಎಸ್​ಕೆ ಗೆದ್ದ ಬಳಿಕ ಆಟಗಾರರು ಟ್ರೋಫಿ ಜೊತೆ ಸಂಭ್ರಮಿಸುತ್ತಿದ್ದರೆ ಅತ್ತ ಧೋನಿ ಮಾತ್ರ ಗ್ರೌಂಡ್ ಸಿಬ್ಬಂದಿಗಳೊಂದಿಗೆ ಮಾತನಾಡುತ್ತಾ ಅವರೊಂದಿಗೆ ಪೋಟೋ ಕ್ಲಿಕ್ಕಿಸಿಕೊಂಡು ಖಷಿ ಹಂಚಿಕೊಂಡಿದ್ದಾರೆ. ಮಳೆಯಿಂದ ಪಿಚ್ ಗುಣಮಟ್ಟ ಹಾಳಾಗದಂತೆ ಗ್ರೌಂಡ್ ಸಿಬ್ಬಂದಿಗಳು ಮೇಲ್ ಹೊದಿಕೆ ಅಳವಡಿಸಲು ಸುರಿವ ಮಳೆಯನ್ನು ಲೆಕ್ಕಿಸದೆ ಶ್ರಮವಹಿಸಿದ್ದರು. ಇವರ ಈ ಕೆಲಸಕ್ಕೆ ಧೋನಿ ಧನ್ಯವಾದ ಅರ್ಪಿಸಿದರು. ಇದರ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದ್ದು, ಧೋನಿಯ ನಡೆಗೆ ಉತ್ತಮ ಪ್ರತಿಕ್ರಿಯೆ ಕೇಳಿಬರುತ್ತಿದೆ.

ಇದನ್ನೂ ಓದಿ
Image
IPL 2023: ಐಪಿಎಲ್​ನ ಅತ್ಯುತ್ತಮ ಆಡುವ ಬಳಗ ಹೆಸರಿಸಿದ ಮ್ಯಾಥ್ಯೂ ಹೇಡನ್
Image
IPL 2023: 74 ಪಂದ್ಯಗಳಲ್ಲಿ ಮೂಡಿಬಂದ ಒಟ್ಟು ರನ್ ಎಷ್ಟು ಗೊತ್ತಾ?
Image
IPL 2023: ನಾಯಕ ಹಾರ್ದಿಕ್ ಪಾಂಡ್ಯ ನಡೆಯ ಬಗ್ಗೆ ಕಿಡಿಕಾರಿದ ಸುನಿಲ್ ಗವಾಸ್ಕರ್
Image
IPL 2023: ಬರೋಬ್ಬರಿ 3298 ಬೌಂಡರಿಗಳು: ಅತೀ ಹೆಚ್ಚು ಸಿಕ್ಸ್​-ಫೋರ್ ಬಾರಿಸಿದ್ದು ಯಾರು ಗೊತ್ತಾ?

IPL 2023: RCB ಪಾಲಿಗೆ ಮಗ್ಗುಲ ಮುಳ್ಳಾಗಿರುವ ತವರು ಮೈದಾನ..!

ಈ ಹಿಂದೆ ಐಪಿಎಲ್ 2023 ಕ್ವಾಲಿಫೈಯರ್ 1 ಪಂದ್ಯ ನಡೆದಾಗ ಕೂಡ ಧೋನಿ ಅವರು ಗ್ರೌಂಡ್ ಸಿಬ್ಬಂದಿಗಳೊಂದಿಗೆ ಸಮಯ ಕಳೆದಿದ್ದರು. ಗುಜರಾತ್ ಟೈಟನ್ಸ್ ವಿರುದ್ಧ ಸಿಎಸ್​ಕೆ 15 ರನ್ ಗಳ ಗೆಲುವು ಸಾಧಿಸಿ ಫೈನಲ್​ಗೆ ತಲುಪಿದ ನಂತರ ಧೋನಿ ಚೆನ್ನೈ ನ ಎಂ.ಎ.ಚಿದಂಬರಂ ಕ್ರೀಡಾಂಗಣದ 20 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಭೇಟಿ ಮಾಡಿ ತಮ್ಮ ಹಸ್ತಾಕ್ಷರ ನೀಡಿದ್ದಲ್ಲದೆ ನಗದು ಬಹುಮಾನ ವಿತರಿಸಿದ್ದರು.

ಐಪಿಎಲ್ 2024ರಲ್ಲೂ ಧೋನಿ ಕಣಕ್ಕೆ?:

ಐಪಿಎಲ್ 2023 ಟೂರ್ನಿ ಆರಂಭವಾದಾಗಿನಿಂದ ಇದು ಮಹೇಂದ್ರ ಸಿಂಗ್ ಧೋನಿ ಅವರ ಕೊನೆಯ ಐಪಿಎಲ್ ಎಂದು ಹೇಳಲಾಗುತ್ತಿತ್ತು. ಆದರೆ, ಈ ಬಗ್ಗೆ ಧೋನಿ ಬಳಿ ಕೇಳಿದಾಗ ಸ್ಪಷ್ಟ ಉತ್ತರ ಬಂದಿರಲಿಲ್ಲ. ಆದರೆ, ಫೈನಲ್ ಪಂದ್ಯ ಮುಗಿದ ಬಳಿಕ ಎಲ್ಲ ಗೊಂದಲಗಳಿಗೆ ಧೋನಿ ತೆರೆ ಎಳೆದಿದ್ದಾರೆ.

ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಮಾತನಾಡಿದ್ದ ಧೋನಿ, ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ, ನನಗೆ ನಿವೃತ್ತಿ ಘೋಷಿಸಲು ಇದು ನನಗೆ ಸರಿಯಾದ ಸಮಯ. ಆದರೆ, ಈ ವರ್ಷ ನಾನು ಎಲ್ಲೇ ಹೋಗಿದ್ದರು ನನ್ನ ಮೇಲೆ ಪ್ರೀತಿ ಮತ್ತು ವಾತ್ಸಲ್ಯ ತೋರಿಸಿದರು. ಎಲ್ಲರಿಗೂ ತುಂಬಾ ಧನ್ಯವಾದಗಳು ಎಂದು ಹೇಳುವುದು ಸುಲಭದ ವಿಷಯ, ಆದರೆ ಕಠಿಣ ವಿಷಯವೆಂದರೆ ಇನ್ನೂ 9 ತಿಂಗಳು ಕಷ್ಟಪಟ್ಟು ಮುಂದಿನ ಐಪಿಎಲ್ ಆಡುವುದು. ಇದು ನನ್ನ ದೇಹಕ್ಕೆ ಸುಲಭವಾಗುವುದಿಲ್ಲ. ಆದರೆ, ಅಭಿಮಾನಿಗಳಿಗೆ ನನ್ನಿಂದ ಉಡುಗೊರೆಯಾಗಲಿದೆ ಎಂದು ಹೇಳಿದ್ದಾರೆ.

ನಾನು ಈ ಬಾರಿ ಮೊದಲ ಪಂದ್ಯ ಆಡುವಾಗ ಎಲ್ಲರೂ ನನ್ನ ಹೆಸರನ್ನು ಕೂಗುತ್ತಿದ್ದರು. ನಿಜ ಹೇಳಬೇಕೆಂದರೆ ಆಗ ನನ್ನ ಕಣ್ಣುಗಳು ಒದ್ದೆಯಾಗಿದ್ದವು. ಹಾಗಾಗಿ ಡಗೌಟ್‌ನಲ್ಲಿ ಸ್ವಲ್ಪ ಸಮಯ ತೆಗೆದುಕೊಂಡಿದ್ದೆ. ಅಭಿಮಾನಿಗಳ ಈ ಪ್ರೀತಿಯನ್ನು ಆನಂದಿಸಬೇಕು ಎಂದು ನಾನು ಅರಿತುಕೊಂಡಿದ್ದೇನೆ. ಇಂದು ನಾನು ಏನಾಗಿದ್ದೇನೆ ಅದಕ್ಕೆ ಮೂಲ ಕಾರಣವೇ ಅಭಿಮಾನಿಗಳ ಪ್ರೀತಿ. ಅಭಿಮಾನಿಗಳು ನನ್ನ ವೃತ್ತಿ ಜೀವನದ ಪ್ರಮುಖ ಭಾಗ ಎಂದು ಧೋನಿ ಹೇಳಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!
ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ