16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ಗೆ (IPL 2023) ತೆರೆ ಬಿದ್ದಾಗಿದೆ. ಎಂಎಸ್ ಧೋನಿ (MS Dhoni) ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿತು. ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದಿದ್ದ ರಣರೋಚಕ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸಿಎಸ್ಕೆ (CSK vs GT) ಡಕ್ವರ್ತ್ ಲುಯಿಸ್ ನಿಯಮದ ಅನ್ವಯ 5 ವಿಕೆಟ್ಗಳಿಂದ ಗೆದ್ದು ಟ್ರೋಫಿ ಎತ್ತಿ ಹಿಡಿಯಿತು. ಮೀಸಲು ದಿನದ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರೂ ತಡ ರಾತ್ರಿ ವರೆಗೆ ಕಾದು ಅಂತಿಮವಾಗಿ ಫಲಿತಾಂಶ ಹೊರಬಿತ್ತು. ಪಂದ್ಯ ನಡೆಯಲು ಇಲ್ಲಿನ ಗ್ರೌಂಡ್ ಸಿಬ್ಬಂದಿಗಳು ಸಾಕಷ್ಟು ಶ್ರಮ ವಹಿಸಿದರು. ಇದನ್ನು ಮರೆಯದ ಎಂಎಸ್ ಧೋನಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಸಿಎಸ್ಕೆ ಗೆದ್ದ ಬಳಿಕ ಆಟಗಾರರು ಟ್ರೋಫಿ ಜೊತೆ ಸಂಭ್ರಮಿಸುತ್ತಿದ್ದರೆ ಅತ್ತ ಧೋನಿ ಮಾತ್ರ ಗ್ರೌಂಡ್ ಸಿಬ್ಬಂದಿಗಳೊಂದಿಗೆ ಮಾತನಾಡುತ್ತಾ ಅವರೊಂದಿಗೆ ಪೋಟೋ ಕ್ಲಿಕ್ಕಿಸಿಕೊಂಡು ಖಷಿ ಹಂಚಿಕೊಂಡಿದ್ದಾರೆ. ಮಳೆಯಿಂದ ಪಿಚ್ ಗುಣಮಟ್ಟ ಹಾಳಾಗದಂತೆ ಗ್ರೌಂಡ್ ಸಿಬ್ಬಂದಿಗಳು ಮೇಲ್ ಹೊದಿಕೆ ಅಳವಡಿಸಲು ಸುರಿವ ಮಳೆಯನ್ನು ಲೆಕ್ಕಿಸದೆ ಶ್ರಮವಹಿಸಿದ್ದರು. ಇವರ ಈ ಕೆಲಸಕ್ಕೆ ಧೋನಿ ಧನ್ಯವಾದ ಅರ್ಪಿಸಿದರು. ಇದರ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದ್ದು, ಧೋನಿಯ ನಡೆಗೆ ಉತ್ತಮ ಪ್ರತಿಕ್ರಿಯೆ ಕೇಳಿಬರುತ್ತಿದೆ.
IPL 2023: RCB ಪಾಲಿಗೆ ಮಗ್ಗುಲ ಮುಳ್ಳಾಗಿರುವ ತವರು ಮೈದಾನ..!
he is lke one of our family…♥️
— ˙❥˙????°???^♡…?? (@DvSuruli02) May 29, 2023
MS Dhoni went alone & thanked all the fans in the stadium.
He is winning hearts as always. pic.twitter.com/1nmmfHmM9E
— Johns. (@CricCrazyJohns) May 30, 2023
ಈ ಹಿಂದೆ ಐಪಿಎಲ್ 2023 ಕ್ವಾಲಿಫೈಯರ್ 1 ಪಂದ್ಯ ನಡೆದಾಗ ಕೂಡ ಧೋನಿ ಅವರು ಗ್ರೌಂಡ್ ಸಿಬ್ಬಂದಿಗಳೊಂದಿಗೆ ಸಮಯ ಕಳೆದಿದ್ದರು. ಗುಜರಾತ್ ಟೈಟನ್ಸ್ ವಿರುದ್ಧ ಸಿಎಸ್ಕೆ 15 ರನ್ ಗಳ ಗೆಲುವು ಸಾಧಿಸಿ ಫೈನಲ್ಗೆ ತಲುಪಿದ ನಂತರ ಧೋನಿ ಚೆನ್ನೈ ನ ಎಂ.ಎ.ಚಿದಂಬರಂ ಕ್ರೀಡಾಂಗಣದ 20 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಭೇಟಿ ಮಾಡಿ ತಮ್ಮ ಹಸ್ತಾಕ್ಷರ ನೀಡಿದ್ದಲ್ಲದೆ ನಗದು ಬಹುಮಾನ ವಿತರಿಸಿದ್ದರು.
ಐಪಿಎಲ್ 2023 ಟೂರ್ನಿ ಆರಂಭವಾದಾಗಿನಿಂದ ಇದು ಮಹೇಂದ್ರ ಸಿಂಗ್ ಧೋನಿ ಅವರ ಕೊನೆಯ ಐಪಿಎಲ್ ಎಂದು ಹೇಳಲಾಗುತ್ತಿತ್ತು. ಆದರೆ, ಈ ಬಗ್ಗೆ ಧೋನಿ ಬಳಿ ಕೇಳಿದಾಗ ಸ್ಪಷ್ಟ ಉತ್ತರ ಬಂದಿರಲಿಲ್ಲ. ಆದರೆ, ಫೈನಲ್ ಪಂದ್ಯ ಮುಗಿದ ಬಳಿಕ ಎಲ್ಲ ಗೊಂದಲಗಳಿಗೆ ಧೋನಿ ತೆರೆ ಎಳೆದಿದ್ದಾರೆ.
ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಮಾತನಾಡಿದ್ದ ಧೋನಿ, ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ, ನನಗೆ ನಿವೃತ್ತಿ ಘೋಷಿಸಲು ಇದು ನನಗೆ ಸರಿಯಾದ ಸಮಯ. ಆದರೆ, ಈ ವರ್ಷ ನಾನು ಎಲ್ಲೇ ಹೋಗಿದ್ದರು ನನ್ನ ಮೇಲೆ ಪ್ರೀತಿ ಮತ್ತು ವಾತ್ಸಲ್ಯ ತೋರಿಸಿದರು. ಎಲ್ಲರಿಗೂ ತುಂಬಾ ಧನ್ಯವಾದಗಳು ಎಂದು ಹೇಳುವುದು ಸುಲಭದ ವಿಷಯ, ಆದರೆ ಕಠಿಣ ವಿಷಯವೆಂದರೆ ಇನ್ನೂ 9 ತಿಂಗಳು ಕಷ್ಟಪಟ್ಟು ಮುಂದಿನ ಐಪಿಎಲ್ ಆಡುವುದು. ಇದು ನನ್ನ ದೇಹಕ್ಕೆ ಸುಲಭವಾಗುವುದಿಲ್ಲ. ಆದರೆ, ಅಭಿಮಾನಿಗಳಿಗೆ ನನ್ನಿಂದ ಉಡುಗೊರೆಯಾಗಲಿದೆ ಎಂದು ಹೇಳಿದ್ದಾರೆ.
ನಾನು ಈ ಬಾರಿ ಮೊದಲ ಪಂದ್ಯ ಆಡುವಾಗ ಎಲ್ಲರೂ ನನ್ನ ಹೆಸರನ್ನು ಕೂಗುತ್ತಿದ್ದರು. ನಿಜ ಹೇಳಬೇಕೆಂದರೆ ಆಗ ನನ್ನ ಕಣ್ಣುಗಳು ಒದ್ದೆಯಾಗಿದ್ದವು. ಹಾಗಾಗಿ ಡಗೌಟ್‌ನಲ್ಲಿ ಸ್ವಲ್ಪ ಸಮಯ ತೆಗೆದುಕೊಂಡಿದ್ದೆ. ಅಭಿಮಾನಿಗಳ ಈ ಪ್ರೀತಿಯನ್ನು ಆನಂದಿಸಬೇಕು ಎಂದು ನಾನು ಅರಿತುಕೊಂಡಿದ್ದೇನೆ. ಇಂದು ನಾನು ಏನಾಗಿದ್ದೇನೆ ಅದಕ್ಕೆ ಮೂಲ ಕಾರಣವೇ ಅಭಿಮಾನಿಗಳ ಪ್ರೀತಿ. ಅಭಿಮಾನಿಗಳು ನನ್ನ ವೃತ್ತಿ ಜೀವನದ ಪ್ರಮುಖ ಭಾಗ ಎಂದು ಧೋನಿ ಹೇಳಿದ್ದಾರೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ