AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DC vs CSK: ಒಂದೇ ಕೈಯಲ್ಲಿ ಸಿಕ್ಸ್ ಸಿಡಿಸಿ ನಿಬ್ಬೆರಗಾಗಿಸಿದ 42 ವರ್ಷದ ಧೋನಿ: ವಿಡಿಯೋ ನೋಡಿ

MS Dhoni SIX Video: ಡೆಲ್ಲಿ ವಿರುದ್ಧ ಸಿಎಸ್​ಕೆ ಸೋತರೂ ಅಭಿಮಾನಿಗಳು ಎಂಎಸ್ ಧೋನಿಯ ಮನಮೋಹಕ ಬ್ಯಾಟಿಂಗ್ ಅನ್ನು ಕಣ್ತುಂಬಿಕೊಂಡರು. ಇವರು ಸಿಡಿಸಿದ 37 ರನ್ ಅದ್ಭುತವಾಗಿತ್ತು. ಅದರಲ್ಲೂ ಕೇವಲ ಒಂದೇ ಕೈಯಿಂದ ಚೆಂಡನ್ನು ಸಿಕ್ಸರ್‌ಗೆ ಅಟ್ಟಿದ್ದು, ಎಲ್ಲರ ಹುಬ್ಬೇರುವಂತೆ ಮಾಡಿತು.

DC vs CSK: ಒಂದೇ ಕೈಯಲ್ಲಿ ಸಿಕ್ಸ್ ಸಿಡಿಸಿ ನಿಬ್ಬೆರಗಾಗಿಸಿದ 42 ವರ್ಷದ ಧೋನಿ: ವಿಡಿಯೋ ನೋಡಿ
MS Dhoni One Handed Six
Vinay Bhat
|

Updated on: Apr 01, 2024 | 7:39 AM

Share

ಭಾರತದ ಲೆಜೆಂಡರಿ ನಾಯಕ ಎಂಎಸ್ ಧೋನಿ (MS Dhoni) ಭಾನುವಾರ (ಮಾರ್ಚ್ 31) ಚೆನ್ನೈ ಸೂಪರ್ ಕಿಂಗ್ಸ್‌ ಪರ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ವಿಶಾಖಪಟ್ಟಣಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಐಪಿಎಲ್ 2024 ರ ಪಂದ್ಯ ನಂ. 13 ರಲ್ಲಿ, 42 ವರ್ಷದ ವಿಕೆಟ್ ಕೀಪರ್-ಬ್ಯಾಟರ್ ನಂ. 8 ರಲ್ಲಿ ಬ್ಯಾಟಿಂಗ್ ಮಾಡಲು ಬಂದರು. ಕೇವಲ 16 ಎಸೆತಗಳಲ್ಲಿ 37 ರನ್ ಸಿಡಿಸಿ ಅಜೇಯರಾಗಿ ಉಳಿದರು. ಧೋನಿಯ ಈ ಆಟದಲ್ಲಿ ನಾಲ್ಕು ಫೋರ್ ಮತ್ತು ಮೂರು ಸಿಕ್ಸರ್‌ಗಳು ಇದ್ದವು. ಸಿಎಸ್​ಕೆ ಮಾಜಿ ನಾಯಕ ಗೆಲುವಿಗೆ ಎಷ್ಟೇ ಹೋರಾಡಿದರೂ ಅವರ ಪ್ರಯತ್ನ ವ್ಯರ್ಥವಾಯಿತು, ಚೆನ್ನೈ ಪಂದ್ಯವನ್ನು 20 ರನ್‌ಗಳಿಂದ ಸೋತಿತು.

ಸಿಎಸ್​ಕೆ ಸೋತರೂ ಅಭಿಮಾನಿಗಳು ಧೋನಿಯ ಮನಮೋಹಕ ಬ್ಯಾಟಿಂಗ್ ಅನ್ನು ಕಣ್ತುಂಬಿಕೊಂಡರು. ಇವರು ಸಿಡಿಸಿದ 37 ರನ್ ಅದ್ಭುತವಾಗಿತ್ತು. ಪಂದ್ಯದ ಕೊನೆಯ ಓವರ್‌ನಲ್ಲಿ ಸಿಎಸ್​ಕೆ ಗೆಲುವಿಗೆ 41 ರನ್‌ಗಳ ಅಗತ್ಯವಿದ್ದಾಗ ಡೆಲ್ಲಿ ವೇಗಿ ಅನ್ರಿಚ್ ನಾರ್ಟ್ಜೆ ಬೌಲಿಂಗ್​ನಲ್ಲಿ ಎರಡು ಬೌಂಡರಿ ಮತ್ತು ಸಿಕ್ಸರ್‌ಗಳನ್ನು ಗಳಿಸಿದರು. ಅದರಲ್ಲೂ ಎರಡನೇ ಎಸೆತದಲ್ಲಿ ಕೇವಲ ಒಂದೇ ಕೈಯಿಂದ ಚೆಂಡನ್ನು ಸಿಕ್ಸರ್‌ಗೆ ಅಟ್ಟಿದ್ದು, ಎಲ್ಲರ ಹುಬ್ಬೇರುವಂತೆ ಮಾಡಿತು. ಧೋನಿಯ ಒನ್ ಹ್ಯಾಂಡ್ ಸಿಕ್ಸರ್ ವಿಡಿಯೋ ಇದೀಗ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ.

ಅಗ್ರಸ್ಥಾನದಿಂದ ಕುಸಿದ ಸಿಎಸ್​ಕೆ: ಪಾಯಿಂಟ್ಸ್ ಟೇಬಲ್​ನಲ್ಲಿ ದೊಡ್ಡ ಬದಲಾವಣೆ

ಡೆಲ್ಲಿ ವಿರುದ್ಧ ಸಿಎಸ್‌ಕೆ ಪರ ಎಂಎಸ್ ಧೋನಿ ಒಂದು ಕೈಯಿಂದ ಸಿಕ್ಸರ್ ಬಾರಿಸಿದ ವಿಡಿಯೋ:

20ನೇ ಓವರ್​ನ ಮೊದಲ ಎರಡು ಎಸೆತಗಳಲ್ಲಿ 10 ರನ್ ಗಳಿಸಿದ ನಂತರ, ಧೋನಿ ಮೂರನೇ ಎಸೆತದಲ್ಲಿ ಯಾವುದೇ ರನ್ ಗಳಿಸಲು ಸಾಧ್ಯವಾಗಲಿಲ್ಲ, ಆದರೆ ಅವರು ಪಂದ್ಯದ ನಾಲ್ಕನೇ ಎಸೆತದಲ್ಲಿ ನಾಲ್ಕು ಮತ್ತು ಕೊನೆಯ ಎಸೆತದಲ್ಲಿ ಸಿಕ್ಸರ್‌ ಸಿಡಿಸುವ ಮೂಲಕ ಆಟವನ್ನು ಮುಗಿಸಿದರು.

ಒಂದೇ ಕೈಯಿಂದ ಅದ್ಭುತ ಕ್ಯಾಚ್‌ ಹಿಡಿದ ಮಥೀಶ ಪತಿರಾನ: ಎಂಎಸ್​ ಧೋನಿ ಮೆಚ್ಚುಗೆ

ಭಾನುವಾರದಂದು ಐಪಿಎಲ್ 2024 ರಲ್ಲಿ ಸಿಎಸ್‌ಕೆ ಮೊದಲ ಸೋಲಿನ ಹೊರತಾಗಿಯೂ, ಧೋನಿ ಹೈಲೇಟ್ ಆದರು. ಸಿಎಸ್‌ಕೆ ಪರ ಮೂರು ಸಿಕ್ಸರ್‌ಗಳನ್ನು ಗಳಿಸುವ ಮೂಲಕ ಧೋನಿ ಅವರು ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಐಪಿಎಲ್‌ನಲ್ಲಿ ಪ್ರಮುಖ ಸಿಕ್ಸರ್‌ಗಳ ಪಟ್ಟಿಯಲ್ಲಿ 4 ನೇ ಸ್ಥಾನವನ್ನು ಪಡೆದಿದ್ದಾರೆ. ಇದುವರೆಗೆ ಆಡಿದ 253 ಐಪಿಎಲ್ ಪಂದ್ಯಗಳಲ್ಲಿ, ಧೋನಿ ಅವರ ಹೆಸರಿನಲ್ಲಿ 242 ಸಿಕ್ಸರ್‌ಗಳಿವೆ. ಇದು 240 ಐಪಿಎಲ್ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಸಿಡಿಸಿದ 241 ಸಿಕ್ಸರ್‌ಗಳಿಗಿಂತ ಒಂದು ಹೆಚ್ಚು.

ವೆಸ್ಟ್ ಇಂಡೀಸ್​ನ ಮಾಜಿ ನಾಯಕ ಕ್ರಿಸ್ ಗೇಲ್ ಐಪಿಎಲ್ ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ವಿಶ್ವದಾಖಲೆ ಹೊಂದಿದ್ದಾರೆ. 142 ಪಂದ್ಯಗಳಲ್ಲಿ 357 ಗರಿಷ್ಠ ಸಿಕ್ಸರ್ ಬಾರಿಸಿದ್ದಾರೆ. ಅವರ ನಂತರ ರೋಹಿತ್ ಶರ್ಮಾ ಅವರು ಇಲ್ಲಿಯವರೆಗೆ 245 ಪಂದ್ಯಗಳಲ್ಲಿ 261 ಸಿಕ್ಸರ್‌ಗಳನ್ನು ಹೊಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ