Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿ ನಾಯಕತ್ವದಲ್ಲಿ ಸೋತಿಲ್ಲ…ರೋಹಿತ್ ಶರ್ಮಾಗೆ ಇತಿಹಾಸ ಬರೆಯುವ ಅವಕಾಶ

India vs South Africa: ಸೌತ್ ಆಫ್ರಿಕಾದಲ್ಲಿ ಭಾರತ ತಂಡ ತನ್ನ ಮೊದಲ ಟೆಸ್ಟ್ ಪಂದ್ಯವಾಡಿದ್ದು 1992 ರಲ್ಲಿ. ಮೊಹಮ್ಮದ್ ಅಝರುದ್ದೀನ್ ನಾಯಕತ್ವದಲ್ಲಿ ಅಂದು ಟೀಮ್ ಇಂಡಿಯಾ 0-1 ಅಂತರದಿಂದ ಸೋಲೊಪ್ಪಿಕೊಂಡಿತ್ತು. ಇದಾದ ಬಳಿಕ 1996 ರಲ್ಲಿ ಸಚಿನ್ ತೆಂಡೂಲ್ಕರ್ ನಾಯಕತ್ವದಲ್ಲಿ ಭಾರತ ತಂಡವು 0-2 ಅಂತರದಲ್ಲಿ ಸೋಲನುಭವಿಸಿತ್ತು.

ಧೋನಿ ನಾಯಕತ್ವದಲ್ಲಿ ಸೋತಿಲ್ಲ...ರೋಹಿತ್ ಶರ್ಮಾಗೆ ಇತಿಹಾಸ ಬರೆಯುವ ಅವಕಾಶ
MS Dhoni-Rohit Sharma
Follow us
TV9 Web
| Updated By: ಝಾಹಿರ್ ಯೂಸುಫ್

Updated on:Dec 26, 2023 | 10:06 AM

ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ ಟೆಸ್ಟ್ ಸರಣಿಯು ಇಂದಿನಿಂದ (ಡಿ.26) ಶುರುವಾಗಲಿದೆ. 2 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯಕ್ಕೆ ಸೆಂಚುರಿಯನ್​ನ ಸೂಪರ್​ಸ್ಪೋರ್ಟ್​ ಪಾರ್ಕ್​ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಇತಿಹಾಸವೊಂದು ನಿರ್ಮಾಣವಾಗಲಿದೆ.

ಏಕೆಂದರೆ ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಒಟ್ಟು 9 ಟೆಸ್ಟ್ ಸರಣಿಗಳನ್ನಾಡಿದೆ. ಈ ವೇಳೆ ಒಮ್ಮೆಯೂ ಭಾರತ ತಂಡ ಗೆದ್ದಿಲ್ಲ. ಇದಾಗ್ಯೂ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಸರಣಿಯನ್ನು ಡ್ರಾ ಮಾಡಿಕೊಳ್ಳುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿತ್ತು.

ಇದೀಗ 2 ಪಂದ್ಯಗಳ ಸರಣಿ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ ಸರಣಿ ಸೋಲುವುದನ್ನು ತಪ್ಪಿಸಿಕೊಳ್ಳಬಹುದು. ಅಷ್ಟೇ ಅಲ್ಲದೆ ಸರಣಿ ಜಯಿಸುವ ಅವಕಾಶ ಕೂಡ ಟೀಮ್ ಇಂಡಿಯಾ ಮುಂದಿರಲಿದೆ. ಅದರಲ್ಲೂ ಧೋನಿ ಬಳಿಕ ಸೌತ್ ಆಫ್ರಿಕಾದಲ್ಲಿ ಸರಣಿಯನ್ನು ಡ್ರಾ ಮಾಡಿಕೊಂಡ 2ನೇ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರವಾಗಲಿದ್ದಾರೆ.

ಸೌತ್ ಆಫ್ರಿಕಾದಲ್ಲಿ ಭಾರತದ ಪ್ರದರ್ಶನ:

ಸೌತ್ ಆಫ್ರಿಕಾದಲ್ಲಿ ಭಾರತ ತಂಡ ತನ್ನ ಮೊದಲ ಟೆಸ್ಟ್ ಪಂದ್ಯವಾಡಿದ್ದು 1992 ರಲ್ಲಿ. ಮೊಹಮ್ಮದ್ ಅಝರುದ್ದೀನ್ ನಾಯಕತ್ವದಲ್ಲಿ ಅಂದು ಟೀಮ್ ಇಂಡಿಯಾ 0-1 ಅಂತರದಿಂದ ಸೋಲೊಪ್ಪಿಕೊಂಡಿತ್ತು. ಇದಾದ ಬಳಿಕ 1996 ರಲ್ಲಿ ಸಚಿನ್ ತೆಂಡೂಲ್ಕರ್ ನಾಯಕತ್ವದಲ್ಲಿ ಭಾರತ ತಂಡವು 0-2 ಅಂತರದಲ್ಲಿ ಸೋಲನುಭವಿಸಿತ್ತು.

ಅಲ್ಲಿಂದೀಚೆಗೆ, ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ, ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ನಾಯಕರಾಗಿ ಸೌತ್ ಆಫ್ರಿಕಾದಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದಾರೆ. ಆದರೆ ಯಾರಿಗೂ ಭಾರತ ತಂಡವನ್ನು ಸರಣಿ ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.

ಇದಾಗ್ಯೂ 2010-11ರಲ್ಲಿ ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಒಂದು ಸರಣಿಯನ್ನು 1-1 ಅಂತರದಿಂದ ಡ್ರಾನಲ್ಲಿ ಕೊನೆಗೊಳಿಸುವಲ್ಲಿ ಯಶಸ್ವಿಯಾಗಿತ್ತು. ಈ ಸರಣಿಯೊಂದನ್ನು ಹೊರತುಪಡಿಸಿದರೆ ಉಳಿದ 8 ಸರಣಿಗಳಲ್ಲೂ ಟೀಮ್ ಇಂಡಿಯಾ ಪರಾಜಯಗೊಂಡಿದೆ.

ಹೀಗಾಗಿಯೇ ಈ ಬಾರಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಸರಣಿಯನ್ನು ಡ್ರಾ ಮಾಡಿಕೊಂಡರೆ ಅಥವಾ 2-0 or 1-0 ಅಂತರದಿಂದ ಸರಣಿ ಗೆದ್ದುಕೊಂಡರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

ಭಾರತ ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್,  ಕೆಎಸ್ ಭರತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ, ಅಭಿಮನ್ಯು ಈಶ್ವರನ್.

ಇದನ್ನೂ ಓದಿ: IPL 2024: ಒಂದು ಎಸೆತದ ಬೆಲೆ ಬರೋಬ್ಬರಿ 7.40 ಲಕ್ಷ ರೂ..!

ಭಾರತ-ಸೌತ್ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ:

  • ಡಿಸೆಂಬರ್ 26 ರಿಂದ- ಮೊದಲ ಟೆಸ್ಟ್ ಪಂದ್ಯ (ಸೆಂಚುರಿಯನ್)
  • ಜನವರಿ 3 ರಿಂದ- ಎರಡನೇ ಟೆಸ್ಟ್ ಪಂದ್ಯ (ಕೇಪ್​ಟೌನ್).

Published On - 6:57 am, Tue, 26 December 23

ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು